ಸಿರಿಧಾನ್ಯ ಕುರಿತು ಮಾಹಿತಿ
ಕೊಪ್ಪಳ ಆ ೨೮: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಕೊಪ್ಪಳ ವಲಯದ ಉನ್ನತಿ ಜ್ಞಾನವಿಕಾಸ ಕೇಂದ್ರದಲ್ಲಿ ಸಿರಿಧಾನ್ಯ ಬಳಕೆಯ ಮಹತ್ವ ಹಾಗೂ ಪೌಷ್ಠಿಕ ಆಹಾರ ಸೇವನೆ ಬಗ್ಗೆ ಮಾಹಿತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು ಪ್ರಾತ್ಯಕ್ಷಿಕೆ ಮುಖಾಂತರ ಸಿರಿಧಾನ್ಯ ಅಡುಗೆ ತಯಾರಿಸಿ ದಿನನಿತ್ಯದ ಅಡುಗೆಯಲ್ಲಿ ಬಳಕೆ ಮಾಡುವ ಬಗ್ಗೆ ತಿಳಿಸಲಾಯಿತು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ಶರಣಪ್ಪ ಬಾಚಲಾಪುರ ಭಾಗವಹಿಸಿ ಆಧುನಿಕ ಆಹಾರ ಪದ್ಧತಿಯನ್ನು ಕಡಿಮೆ ಮಾಡಿ ಮನೆಯಲ್ಲೇ ತಯಾರಿಸಿದ ಆಹಾರ ಸೇವನೆ ಬಗ್ಗೆ ಹೆಚ್ಚು ಒಲವು ತೋರಿಸಬೇಕು ಹಾಗೂ ಮಹಿಳೆಯರು ಮಕ್ಕಳ ಆರೋಗ್ಯದ ದೃಷ್ಟಿಯಿಂದ ಸಿರಿಧಾನ್ಯ ಬಳಕೆ ಮಾಡುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಸಲಹೆ ನೀಡಿದರು.
ಸಿರಿ ಧಾನ್ಯಗಳಲ್ಲಿ ಎಲ್ಲಾ ರೀತಿಯ ರೋಗಗಳನ್ನು ತಡೆಗಟ್ಟುವ ಶಕ್ತಿ ಇದ್ದು ಹಿತಮಿತವಾಗಿ ಆಹಾರ ಸೇವನೆ ಮಾಡುವ ಬಗ್ಗೆ ಮಾಹಿತಿ ತಿಳಿಸಿದರು. ಕೇಂದ್ರ ಸದಸ್ಯರು ಆಸಕ್ತಿಯಿಂದ ಪಾಲ್ಗೊಂಡಿದ್ದು ಸಿರಿಧಾನ್ಯ ಬಳಕೆ ಬಗ್ಗೆ ಅರಿವು ಮೂಡಿದೆ. ಜ್ಞಾನ ವಿಕಾಸ ಸಮನ್ವಯಾಧಿಕಾರಿ ನಿರೂಪಿಸಿದರು ಕೇಂದ್ರದ ಸದಸ್ಯರಾದ ಜ್ಯೋತಿಯವರು ಬಂದಂತಹ ಎಲ್ಲರಿಗೂ ವಂದನೆ ಸಲ್ಲಿಸಿದರು.
Comments are closed.