ಕೊಪ್ಪಳ ಜಿಲ್ಲೆಯ ಗೃಹರಕ್ಷಕದಳ ಗೌರವ ಸಮಾದೇಷ್ಟರ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ
ಕೊಪ್ಪಳ ಖಾಲಿ ಇರುವ ಕೊಪ್ಪಳ ಜಿಲ್ಲಾ ಗೃಹರಕ್ಷಕದಳ ಗೌರವ ಸಮಾದೇಷ್ಟರ ಹುದ್ದೆ ಭರ್ತಿಗೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಕೊಪ್ಪಳ ಜಿಲ್ಲಾ ಗೃಹರಕ್ಷಕದಳ ಗೌರವ ಸಮಾದೇಷ್ಟರ ಹುದ್ದೆಯನ್ನು ಭರ್ತಿ ಮಾಡಲು ನೇಮಕಾತಿಗಾಗಿ ಜಿಲ್ಲಾ ಗೃಹರಕ್ಷಕದಳ ಕಚೇರಿಯ ಆಡಳಿತ ನಿರ್ವಹಣೆಯನ್ನು ನೋಡಿಕೊಳ್ಳಲು ಸ್ಥಳೀಯ ಗೌರವಾನ್ವಿತ ವ್ಯಕ್ತಿಗಳನ್ನು ಸರ್ಕಾರವು ಗೃಹರಕ್ಷಕದಳದ ಸಮಾದೇಷ್ಟರುಗಳನ್ನಾಗಿ ನಿಯಮಾನುಸಾರ ನೇಮಕ ಮಾಡುತ್ತಿದೆ.
ಕೊಪ್ಪಳ ಜಿಲ್ಲೆಯ ಗೃಹರಕ್ಷಕ ದಳ ಗೌರವ ಸಮಾದೇಷ್ಟರ ಹುದ್ದೆ ಖಾಲಿ ಇದ್ದು, ಈ ಹುದ್ದೆಗೆ ಸೂಕ್ತವಾದ ವ್ಯಕ್ತಿಯನ್ನು ಅರ್ಹತೆ ಆಧಾರದ ಮೇಲೆ ತುಂಬಬೇಕಾಗಿರುತ್ತದೆ.
ಇಚ್ಛೆಯುಳ್ಳ ಅಭ್ಯರ್ಥಿಗಳು ತಮ್ಮ ಅರ್ಜಿಗಳನ್ನು ಕೊಪ್ಪಳ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಜೂನ್ 23ರೊಳಗಾಗಿ ಸಲ್ಲಿಸಬೇಕು ಎಂದು ಆರಕ್ಷಕ ಮಹಾ ನಿರ್ದೇಶಕರು, ಗೃಹರಕ್ಷಕ ದಳದ ಮಹಾ ಸಮಾದೇಷ್ಟರು ಮತ್ತು ಪೌರರಕ್ಷಣೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.