ಕೊಪ್ಪಳ: ಮುಖ್ಯ ಅಡುಗೆಯವರು, ಸಹಾಯಕ ಸಿಬ್ಬಂದಿ ಹುದ್ದೆಗೆ ಅರ್ಜಿ ಆಹ್ವಾನ
ಅಕ್ಷರ ದಾಸೋಹ ಯೋಜನೆಯಡಿಯಲ್ಲಿ ಕೊಪ್ಪಳ ನಗರಸಭೆ ವ್ಯಾಪ್ತಿಯಲ್ಲಿನ ವಿವಿಧ ಶಾಲೆಗಳಲ್ಲಿ ಖಾಲಿ ಇರುವ ಮುಖ್ಯ ಅಡುಗೆಯವರು ಮತ್ತು ಅಡುಗೆ ಸಹಾಯಕ ಸಿಬ್ಬಂದಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ನಗರಸಭೆ ವ್ಯಾಪ್ತಿಯಲ್ಲಿ ಬರುವ ವಿವಿಧ ಶಾಲೆಗಳಲ್ಲಿ ಅಕ್ಷರ ದಾಸೋಹ ಯೋಜನೆ ಅಡಿಯಲ್ಲಿ ಮಧ್ಯಾಹ್ನದ ಬಿಸಿ ಊಟದ ಮುಖ್ಯ ಅಡುಗೆಯವರು ಮತ್ತು ಅಡುಗೆ ಸಹಾಯಕ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದು, ಅದರಲ್ಲಿ ಕೆಲ ಸಿಬ್ಬಂದಿಗಳು ಕೆಲಸಕ್ಕೆ ರಾಜಿನಾಮೆ ನೀಡಿದ್ದಾರೆ ಹಾಗೂ ಇನ್ನೂ ಕೆಲ ಸಿಬ್ಬಂದಿಗಳು ಗೈರು ಹಾಜರಾಗಿದ್ದಾರೆ. ಅದರಂತೆ ಕೊಪ್ಪಳ ನಗರದ ಸರಕಾರಿ ಕೇಂದ್ರ ಮಾದರಿಯ ಹಿರಿಯ ಪ್ರಾಥಮಿಕ ಶಾಲೆ (ಸಿ.ಪಿ.ಎಸ್), ದಿಡ್ಡಿಕೇರಾದ ಸರಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ ಹಾಗೂ ರೈಲ್ವೆ ಸ್ಟೇಷನ್ ಹತ್ತಿರವಿರುವ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ ಹುದ್ದೆಗಳು ಖಾಲಿ ಇರುತ್ತದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕೊಪ್ಪಳ ನಗರದ ಖಾಯಂ ನಿವಾಸಿಯಾಗಿದ್ದು, ಅರ್ಜಿ ಸಲ್ಲಿಸಬಯಸುವ ಆಯಾ ವಾರ್ಡಿನಲ್ಲಿ ವಾಸವಾಗಿರಬೇಕು. ಆ ವಾರ್ಡಿನ ಮತದಾರರ ಯಾದಿಯಲ್ಲಿ ಅರ್ಜಿದಾರರ ಹೆಸರು ಸೇರ್ಪಡೆಯಾಗಿರಬೇಕು. ಅರ್ಜಿ ಸಲ್ಲಿಸಲು ಸೆಪ್ಟಂಬರ್ 15ಕೊನೆಯ ದಿನವಾಗಿದ್ದು, ಅರ್ಜಿದಾರರು ಚಾಲ್ತಿ ಸಾಲಿನ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ವಿದ್ಯಾರ್ಹತೆಯ ಪ್ರಮಾಣ ಪತ್ರ, ಇತ್ತೀಚಿನ 02 ಭಾವಚಿತ್ರಗಳು, ಕುಟುಂಬದ ಪಡಿತರ ಚೀಟಿ, ಆಧಾರ ಕಾರ್ಡ ಹಾಗೂ ಚುನಾವಣೆ ಗುರುತಿನ ಚೀಟಿಯೊಂದಿಗೆ ನಗರಸಭೆ ಕಾರ್ಯಾಲಯಕ್ಕೆ ಅರ್ಜಿಯನ್ನು ಸಲ್ಲಿಸಬೇಕು ಎಂದು ಕೊಪ್ಪಳ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Comments are closed.