ಬೆಳೆ ಅಂದಾಜು ಸಮೀಕ್ಷೆ ಅಚ್ಚುಕಟ್ಟಾಗಿ ನಡೆಸಿ: ಎಡಿಸಿ ಸಿದ್ರಾಮೇಶ್ವರ

Get real time updates directly on you device, subscribe now.

ಮುಂಗಾರು ಹಂಗಾಮಿನ ಬೆಳೆ ಅಂದಾಜು ಸಮೀಕ್ಷೆ ತರಬೇತಿ
2024-25ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಅಂದಾಜು ಸಮೀಕ್ಷೆಯು ನಿಯಮಾನುಸಾರ ಅಚ್ಚುಕಟ್ಟಾಗಿ ನಡೆಯುವಂತೆ ವಿವಿಧ ಇಲಾಖೆಗಳ ಮೂಲ ಕಾರ್ಯಕರ್ತರು, ಮೇಲ್ವಿಚಾರಕರು ಸೇರಿದಂತೆ ಪ್ರತಿಯೊಬ್ಬರು ಶ್ರದ್ಧೆಯಿಂದ ಕಾರ್ಯಪ್ರವೃತ್ತರಾಗಬೇಕು
ಎಂದು ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರು ಹೇಳಿದರು.
ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕೃಷಿ ಇಲಾಖೆ ಹಾಗೂ ಜಿಲ್ಲಾ ಸಂಖ್ಯಿಕ ಇಲಾಖೆಯ ಸಹಯೋಗದಲ್ಲಿ   ಆಗಸ್ಟ್  31ರಂದು ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಹಮ್ಮಿಕೊಂಡಿದ್ದ 2024-25ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಅಂದಾಜು ಸಮೀಕ್ಷೆ ತರಬೇತಿ ಕಾರ್ಯಾಗಾರವನ್ನು ಸಸಿಗೆ ನೀರುಣಿಸುವುದರ‌‌ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ಸ್ವತಃ ಮೂಲ ಕಾರ್ಯಕರ್ತರೇ ಹೋಗಿ ಸಮೀಕ್ಷೆಯನ್ನು ಮಾಡಬೇಕು. ಕಾರ್ಯಕರ್ತರು, ರೈತರ ಜೊತೆ ನಿರಂತರ ಸಂಪರ್ಕದಲ್ಲಿರಬೇಕು. ಬೆಳೆ ಕಟಾವು ಸಮೀಕ್ಷೆಯು ನಮಗಷ್ಟೆ ಅಲ್ಲದೇ ದೇಶ, ರಾಜ್ಯಕ್ಕೆ  ಬಹಳ ಅನುಕೂಲವಾಗಿದೆ. ಇದರಿಂದ ಯಾವ ಯಾವ ಬೆಳೆಗೆ ಹೆಚ್ಚು ಒತ್ತು ಕೊಡಬಹುದು ಎನ್ನುವುದು ತಿಳಿಯುತ್ತದೆ ಹಾಗೂ ಬೆಳೆಗಳಿಗೆ ಸೂಕ್ತವಾದ ಗೊಬ್ಬರವನ್ನು ಒದಗಿಸಲು ಅನುಕೂಲವಾಗುತ್ತದೆ. ಜನಗಣತಿ ತರಹವೇ ಬೆಳೆ ಸಮೀಕ್ಷೆ ಮಾಡಬೇಕು. ಯಾವುದೇ ಕಾರಣಕ್ಕೂ ಬೆಳೆ ಇದ್ದುಕೊಂಡು ಬೆಳೆ ಸಮೀಕ್ಷೆಯನ್ನು ನಷ್ಠಗೊಳಿಸುವಂತಿಲ್ಲ. ಅಂತಹವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು, ಇದ್ದರಿಂದ ಪ್ರತಿಯೊಬ್ಬರು ನಿಷ್ಠೆ ಹಾಗೂ ಪ್ರಾಮಾಣಿಕತೆಯಿಂದ ಸಮೀಕ್ಷೆ ಮಾಡಿ ಎಂದು ಹೇಳಿದರು.
ಕೃಷಿ ಇಲಾಖೆಯ ಉಪನಿರ್ದೇಶಕರಾದ ಸಹದೇವ್ ಯರಗುಪ್ಪ ಅವರು ಮಾತನಾಡಿ, ಬೆಳೆ ಕಟಾವು ಸಮೀಕ್ಷೆಯಿಂದ ರೈತರು ಆರ್ಥಿಕವಾಗಿ ಬೆಳೆಯಲು ಅನುಕೂಲವಾಗುತ್ತದೆ. ಯಾವುದೇ ಸಂದರ್ಭದಲ್ಲಿಯೂ ಕಟಾವು ಪ್ರಯೋಗಗಳು ವ್ಯಪಗಥವಾಗದಂತೆ ನೋಡಿಕೊಳ್ಳಿ. ಇಲಾಖಾವಾರು ಅಧಿಕಾರಿಗಳ ಮಾಹಿತಿಯನ್ನಾಧರಿಸಿ ಪ್ರಯೋಗಗಳನ್ನು ಹಂಚಿಕೆ ಮಾಡಲಾಗಿರುತ್ತದೆ. ಮೂಲಕಾರ್ಯಕರ್ತರು ಮೊಬೈಲ್ ಗಳ ಮೂಲಕ ಸಮೀಕ್ಷೆಯನ್ನು ಮಾಡಬಹುದು ಎಂದು ತಿಳಿಸಿದರು.
ಜಿಲ್ಲಾ ಸಾಂಖ್ಯಿಕ ಅಧಿಕಾರಿಗಳಾದ ಸುಧಾಕರ ಮಾನೆ ಅವರು ಮಾತನಾಡಿ,  ಬೆಳೆ ಅಂದಾಜು ಸಮೀಕ್ಷಾ ಕಾರ್ಯಕ್ಕೆ ಕಂದಾಯ, ಕೃಷಿ, ತೋಟಗಾರಿಕೆ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಧಿಕಾರಿಗಳು ಮೂಲ ಕಾರ್ಯಕರ್ತರಾಗಿರುತ್ತಾರೆ. ಲಭ್ಯವಿರುವ ಇಲಾಖಾವಾರು ಅಧಿಕಾರಿಗಳ ಮಾಹಿತಿಯನ್ನಾಧರಿಸಿ ಪ್ರಯೋಗಗಳನ್ನು ಹಂಚಿಕೆ ಮಾಡಲಾಗಿರುತ್ತದೆ. ವಿವಿಧ ಇಲಾಖೆಯ ಅಧಿಕಾರಿಗಳನ್ನು ಮೇಲ್ವಿಚಾರಣಾಧಿಕಾರಿ ಎಂದು ನೇಮಕ ಮಾಡಲಾಗಿದ್ದು, ಈ ಬಾರಿ ಕಡ್ಡಾಯವಾಗಿ ಕಟಾವಿನ ಸಂದರ್ಭದಲ್ಲಿ ಮೂಲ ಕಾರ್ಯಕರ್ತರು ಬೆಳೆ ಸಮೀಕ್ಷೆ ತೆಗೆದುಕೊಂಡಿದ್ದಾರೆಯೇ ಎಂದು ಮೇಲ್ವಿಚಾರಕರು ಪರಿಶೀಲಿಸಬೇಕು. ಬೆಳೆವಿಮೆ ತುಂಬಿದ ಕನಿಷ್ಠ ಮೂವರು ರೈತರನ್ನು ಸಮೀಕ್ಷೆಗೆ  ಕಡ್ಡಾಯವಾಗಿ ಕರೆದುಕೊಂಡು ಹೋಗಬೇಕು ಎಂದರು.
ಬಳ್ಳಾರಿ ಜಿಲ್ಲೆಯ ಜಿಲ್ಲಾ ಸಂಖ್ಯಾ ಸಂಗ್ರಹಣಧಿಕಾರಿಗಳಾದ   ರಾಕೇಶ್ ಅವರು ಕ್ರಾಪ್ ಕಟ್ಟಿಂಗ್ ಎಕ್ಸ್ಪೆರಿಮೆಂಟ್ ಕುರಿತು ತರಬೇತಿ ನೀಡಿದರು.
ಈ ಸಂದರ್ಭದಲ್ಲಿ ಎಲ್ಲಾ ತಾಲೂಕಿನ ತಹಶೀಲ್ದಾರರು, ಕಂದಾಯ ಅಧಿಕಾರಿಗಳು ಹಾಗೂ ಗ್ರಾಮ ಲೆಕ್ಕಿಗರು ಸೇರಿದಂತೆ ಮೂಲ ಕಾರ್ಯಕರ್ತರು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!