ಕೊಪ್ಪಳ ಜಿಲ್ಲೆಯಲ್ಲಿ ಎನಿವೇರ್ ನೋಂದಣಿ ವ್ಯವಸ್ಥೆ

Get real time updates directly on you device, subscribe now.

: ಕರ್ನಾಟಕ ಸರ್ಕಾರದ 2024-25ನೇ ಸಾಲಿನ ಆಯವ್ಯಯ ಭಾಷಣದಲ್ಲಿ ಎನಿವೇರ್ ನೋಂದಣಿ ವ್ಯವಸ್ಥೆಯನ್ನು ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ವಿಸ್ತರಿಸಲಾಗುವುದೆಂದು ಘೋಷಿಸಲಾಗಿದ್ದು, ಈ ವ್ಯವಸ್ಥೆಯನ್ನು ಕೊಪ್ಪಳ ಜಿಲ್ಲೆಯ ಉಪನೋಂದಣಿ ಕಛೇರಿಗಳಿಗೂ ವಿಸ್ತರಿಸಲು ನಿರ್ಧರಿಸಲಾಗಿದೆ.
ಸಾರ್ವಜನಿಕರು ಸ್ಥಿರಾಸ್ತಿ ಇರುವ ವ್ಯಾಪ್ತಿಯ ಉಪನೋಂದಣಿ ಕಚೇರಿಯಲ್ಲಿ ಮಾತ್ರ ದಸ್ತಾವೇಜನ್ನು ನೋಂದಣಿ ಮಾಡಲು ಅವಕಾಶವಿದ್ದು, ಆದರೆ ಎನಿವೇರ್ ನೋಂದಣಿಯಲ್ಲಿ ದಸ್ತಾವೇಜನ್ನು ಸ್ಥಿರಾಸ್ತಿ ಇರುವ ಜಿಲ್ಲೆಯ ಯಾವುದಾದರೂ ಉಪ ನೋಂದಣಿ ಕಛೇರಿಯಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ. ಈ ನೋಂದಣಿ ವ್ಯವಸ್ಥೆಯು ಸಾರ್ವಜನಿಕರಿಗೆ ಹಲವಾರು ರೀತಿಯಲ್ಲಿ ಉಪಯುಕ್ತವಾಗಿದ್ದು, ದಸ್ತಾವೇಜಿನ ನೋಂದಣಿಯಲ್ಲಿ ಪಾರದರ್ಶಕತೆಯನ್ನು ಹೆಚ್ಚಿಸುತ್ತದೆ. ನೋಂದಣಿಯಲ್ಲಿ ವಿಳಂಬವನ್ನು ತಡೆಗಟ್ಟುತ್ತದೆ. ಸಾರ್ವಜನಿಕರು ಸಮೀಪದಲ್ಲಿರುವ ಉಪ ನೋಂದಣಿ ಕಚೇರಿಯಲ್ಲಿ ದಸ್ತಾವೇಜನ್ನು ನೋಂದಾಯಿಸಬಹುದು. ಸ್ಮಾಟ್ ಲಭ್ಯವಿರುವಂತಹ ಕಛೇರಿಯನ್ನು ನೋಂದಣಿಗೆ ಆಯ್ಕೆ ಮಾಡಿಕೊಳ್ಳಬಹುದು. ನೋಂದಣಿ ಪ್ರಕ್ರಿಯೆ ಸುಲಭವಾಗುವುದಲ್ಲದೆ ಸಮಯವು ಸಹ ಉಳಿಯುತ್ತದೆ. ಉಪನೋಂದಣಿ ಕಛೇರಿಗಳಲ್ಲಿ ಜನದಟ್ಟಣೆ ಕಡಿಮೆಯಾಗುತ್ತದೆ ಹಾಗೂ ಕಛೇರಿಗಳಲ್ಲಿ ನೋಂದಣಿ ಕೆಲಸ ಸಮಾನವಾಗಿ ಹಂಚಿಕೆಯಾಗುತ್ತದೆ.
ಉದಾಹರಣೆಗೆ: ಕೊಪ್ಪಳ ನಗರದ ಆಸ್ತಿಯನ್ನು ಮಾರಾಟ ಅಥವಾ ಖರೀದಿ ಮಾಡಲು ಜಿಲ್ಲೆಯ ತಾಲೂಕು, ಕೊಪ್ಪಳ, ಗಂಗಾವತಿ, ಯಲಬುರ್ಗಾ, ಕುಷ್ಟಗಿ ಮತ್ತು ಕಾರಟಗಿ ಉಪನೋಂದಣಿ ಕಛೇರಿಗಳ ಪೈಕಿ ಯಾವುದೇ ಉಪನೋಂದಣಿ ಕಛೇರಿಗಳಲ್ಲಿ ಆಸ್ತಿ ನೋಂದಣಿ ಪ್ರಕ್ರಿಯೆ ಮಾಡಿಕೊಳ್ಳಬಹುದಾಗಿರುತ್ತದೆ.
ಸಾರ್ವಜನಿಕರು ಎನಿವೇರ್ ನೋಂದಣಿಯ ಸದುಪಯೋಗಪಡಿಸಿಕೊಂಡು ತಮಗೆ ಹತ್ತಿರದ ಅಥವಾ ನೋಂದಣಿಗೆ ಸ್ಪಾಟ್ ಲಭ್ಯವಿರುವಂತಹ ಕಛೇರಿ ಆಯ್ಕೆ ಮಾಡಿಕೊಂಡು ದಸ್ತಾವೇಜನ್ನು ನೋಂದಾಯಿಸಿಕೊಳ್ಳುವAತೆ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!