ಬುಧವಾರ ಕೊಪ್ಪಳ ನಗರಕ್ಕೆ ನಿಖಿಲ್ ಕುಮಾರಸ್ವಾಮಿ
ಬುಧವಾರ ನಗರಕ್ಕೆ ನಿಖಿಲ್ ಕುಮಾರಸ್ವಾಮ
ಕೊಪ್ಪಳ: ಸೆಪ್ಟೆಂಬರ್ 4 ರಂದು ನಗರದ ಶ್ರೀ ಶಿವಶಾಂತವೀರ ಮಂಗಲ ಭವನದಲ್ಲಿ ಮುಂಜಾನೆ 11:00 ಗಂಟೆಗೆ ಜೆಡಿ (ಎಸ್) ಕೊಪ್ಪಳ ಜಿಲ್ಲಾ ಘಟಕವು ಸದಸ್ಯತ್ವ ‘ನೋಂದಣಿ ಹಾಗೂ ಭೂತ್ ಸಮಿತಿ ಅಭಿಯಾನ’ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದು ಜೆಡಿ (ಎಸ್) ರಾಜ್ಯ ಕೋರ್ ಕಮಿಟಿ ಸದಸ್ಯರಾದ ಸಿ ವಿ ಚಂದ್ರಶೇಖರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪಕ್ಷದ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ಮಾಜಿ ಸಚಿವರಾದ ವೆಂಕಟರಾವ್ ನಾಡಗೌಡ, ಹನುಮಂತಪ್ಪ ಆಲ್ಕೋಡ್, ಜೆಡಿ (ಎಸ್) ಶಾಸಕಾಂಗ ಪಕ್ಷದ ನಾಯಕರಾದ ಸಿ ಬಿ ಸುರೇಶ್ ಬಾಬು, ಹಗರಿಬೊಮ್ಮನಹಳ್ಳಿ ಶಾಸಕರಾದ ನೇಮಿರಾಜ್ ನಾಯಕ್, ಪಕದ ಯುವ ಘಟಕದ ಕಾರ್ಯಾಧ್ಯಕ್ಷರಾದ ರಾಜು ನಾಯಕ್, ಜಿಲ್ಲಾಧ್ಯಕ್ಷರಾದ ಸುರೇಶ್ ಭೂಮರೆಡ್ಡಿ ಹಾಗೂ ಪಕ್ಷದ ಇತರೆ ಮುಖಂಡರು ಭಾಗವಹಿಸಲಿದ್ದಾರೆ.
ಜಿಲ್ಲೆಯಲ್ಲಿನ ಎಲ್ಲಾ ಮುಖಂಡರು ಹಾಗೂ ಪಕ್ಷದ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಪಕ್ಷಕ್ಕೆ ಹೆಚ್ಚಿನ ಸದಸ್ಯತ್ವ ನೋಂದಣಿಯಾಗುವಲ್ಲಿ ಸಹಕರಿಸಬೇಕೆಂದು ಚಂದ್ರಶೇಖರ್ ಮನವಿ ಮಾಡಿದ್ದಾರೆ.