ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ: ಆಯ್ಕೆ ಪಟ್ಟಿ ಪ್ರಕಟ
: ಶಿಕ್ಷಕರ ದಿನಾಚರಣೆಯ ನಿಮಿತ್ತ 2024-25ನೇ ಕೊಪ್ಪಳ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾದ ಶಿಕ್ಷರ ಪಟ್ಟಿಯನ್ನು ಪ್ರಕಟಿಸಲಾಗಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಶ್ರೀಶೈಲ ಬಿರಾದಾರ ಅವರು ತಿಳಿಸಿದ್ದಾರೆ.
ಹಿರಿಯ ಪ್ರಾಥಮಿಕ ಶಾಲಾ ವಿಭಾಗದಿಂದ ಕೊಪ್ಪಳ ತಾಲ್ಲೂಕಿನ ಹೊಸಳ್ಳಿ ಎಲ್ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರಾದ ಗೌರಿ ಬಿಜ್ಜಳ, ಗಂಗಾವತಿ ತಾಲ್ಲೂಕಿನ ಉಪ್ಪಿನಮಾಳಕ್ಯಾಂಪ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರಾದ ನೀಲಮ್ಮ ಹಿರೇಮಠ, ಕುಷ್ಟಗಿ ತಾಲ್ಲೂಕಿನ ಟೆಂಗುAಟಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರಾದ ಮಂಜುನಾಥ ಲಕ್ಷೆö್ಮÃಶ್ವರ, ಯಲಬುರ್ಗಾ ತಾಲ್ಲೂಕಿನ ಬಳಗೇರಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕರಾದ ಶಿವಪುತ್ರಪ್ಪ ಮುತ್ತಾಳ ಇವರನ್ನು ಆಯ್ಕೆ ಮಾಡಲಾಗಿದೆ.
ಪ್ರೌಢ ಶಾಲಾ ವಿಭಾಗದಿಂದ ಕೊಪ್ಪಳ ತಾಲ್ಲೂಕಿನ ಹಿರೇಬಗನಾಳ ಸರಕಾರಿ ಪ್ರೌಢ ಶಾಲೆಯ ಸಹ ಶಿಕ್ಷಕರಾದ ಮುಸ್ತಫ ಢಲಾಯತ್, ಗಂಗಾವತಿ ತಾಲ್ಲೂಕಿನ ಆನೆಗುಂದಿ ಸರಕಾರಿ ಪ್ರೌಢ ಶಾಲೆಯ ಸಹ ಶಿಕ್ಷಕರಾದ ಶರಣಪ್ಪ, ಕುಷ್ಟಗಿ ತಾಲ್ಲೂಕಿನ ತುಗ್ಗಲಡೋಣಿ ಸರಕಾರಿ ಪ್ರೌಢ ಶಾಲೆಯ ಸಹ ಶಿಕ್ಷಕರಾದ ನಾಗಪ್ಪ ಗಟ್ಟಿಗನೂರು ಹಾಗೂ ಯಲಬುರ್ಗಾ ತಾಲ್ಲೂಕಿನ ವಟಪರವಿ ಸರಕಾರಿ ಪ್ರೌಢ ಶಾಲೆಯ ಸಹ ಶಿಕ್ಷಕರಾದ ಮಲ್ಲಪ್ಪ ಬಂಗಿ ಇವರು ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Comments are closed.