ಸೆಪ್ಟೆಂಬರ್ 05ರಂದು ಕೊಪ್ಪಳ ನಗರ ಮತ್ತು ಭಾಗ್ಯನಗರ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ

0

Get real time updates directly on you device, subscribe now.

ಕೊಪ್ಪಳ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಎರಡನೇ ತ್ರೈಮಾಸಿಕ ಕೆಲಸ ನಡೆಯುತ್ತಿರುವ  ಪ್ರಯುಕ್ತ  110/33/11 ಕೆ.ವಿ ವಿದ್ಯುತ್ ವಿತರಣಾ ಕೇಂದ್ರ ಕೊಪ್ಪಳದಿಂದ ಸರಬರಾಜು ಆಗುವ 33 ಕೆ.ವಿ ಕಿನ್ನಾಳ ಮಾರ್ಗಗಳಿಗೆ ಒಳಪಡುವ ಎಲ್ಲಾ ಗ್ರಾಮಗಳಿಗೆ ಹಾಗೂ 11 ಕೆ.ವಿ ಮಾರ್ಗಗಳಿಗೆ ಒಳಪಡುವ ಕೊಪ್ಪಳ ನಗರ ಮತ್ತು ಭಾಗ್ಯನಗರ ಪ್ರದೇಶಗಳಲ್ಲಿ ಸೆಪ್ಟೆಂಬರ್ 05 ರಂದು ಬೆಳಿಗ್ಗೆ  10 ಗಂಟೆಯಿಂದ ಸಾಯಂಕಾಲ 05 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
ವಿದ್ಯುತ್ ಕೆಲಸವು ಬೇಗನೆ ಮುಕ್ತಾಯಗೊಂಡಲ್ಲಿ, ಯಾವುದೇ ಸಮಯದಲ್ಲಿ ವಿದ್ಯುತ್ ಸರಬರಾಜು ಮಾಡಲಾಗುವುದು. ಆದ್ದರಿಂದ ಸಾರ್ವಜನಿಕರು ಯಾವುದೇ ತರಹದ ವಿದ್ಯುತ್ ದುರಸ್ಥಿ ಕೆಲಸ-ಕಾರ್ಯಗಳನ್ನು ಮಾಡಬಾರದೆಂದು ಈ ಮೂಲಕ ಕೋರಲಾಗಿದೆ. ಒಂದು ವೇಳೆ ವಿದ್ಯುತ್ ಅಫಘಾತ ಸಂಭವಿಸಿದಲ್ಲಿ ಕಂಪನಿಯು ಜವಾಬ್ದಾರರಾಗಿರುವುದಿಲ್ಲ ಎಂದು ಜೆಸ್ಕಾಂ ಕೊಪ್ಪಳ ಕಾರ್ಯ ಮತ್ತು ಪಾಲನಾ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Leave A Reply

Your email address will not be published.

error: Content is protected !!
%d bloggers like this: