ಹಿರೇಸಿಂದೋಗಿ ಸರಕಾರಿ ಪದವಿಪೂರ್ವ ಮಹಾವಿದ್ಯಾಲಯಕ್ಕೆ ಮೂಲಭೂತ ಸೌಕರ್ಯ- ರಾಘವೇಂದ್ರ ಹಿಟ್ನಾಳ ಭರವಸೆ
ಕೊಪ್ಪಳ : ಕೊಪ್ಪಳ ತಾಲೂಕಿನ ಹಿರೇಸಿಂದೋಗಿಯ ಸರಕಾರಿ ಪದವಿಪೂರ್ವ ಮಹಾವಿದ್ಯಾಲಯಕ್ಕೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಶೀಘ್ರದಲ್ಲಿಯೇ ಒದಗಿಸಲಾಗುವುದೆಂದು ಕೊಪ್ಪಳದ ಶಾಸಕರಾದ ರಾಘವೇಂದ್ರ ಹಿಟ್ನಾಳ ಅವರು ಹೇಳಿದರು.
ಅವರು ಮಂಗಳವಾರ ಹಿರೇಸಿಂದೋಗಿ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯರಾದ ಹನುಮಂತಪ್ಪ ಅಂಡಗಿ ಚಿಲವಾಡಗಿ ಅವರು ಹಮ್ಮಿಕೊಂಡ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದರು. ಮಹಾವಿದ್ಯಾಲಯದ ಪ್ರಾಚಾರ್ಯರಾದ ಹನುಮಂತಪ್ಪ ಅಂಡಗಿ ಚಿಲವಾಡಗಿ ಅವರು ಮಹಾವಿದ್ಯಾಲಯಕ್ಕೆ ಅಗತ್ಯವಿರುವ ಕೊಠಡಿಗಳನ್ನು, ನೀರಿನ ಸೌಲಭ್ಯವನ್ನು, ಶೌಚಾಲಯವನ್ನು, ಸಭಾಭವನವನ್ನು, ಪ್ರಯೋಗಾಲಯ ಕೊಠಡಿಗಳನ್ನು ಶೀಘ್ರದಲ್ಲಿಯೇ ಮಂಜೂರು ಮಾಡಿಸಿ ಕೊಡಬೇಕೆಂದು ಶಾಸಕರಿಗೆ ಮನವಿ ಮಾಡಿದರು.
ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷರಾದ ಎಸ್ .ಬಿ. ನಾಗರಹಳ್ಳಿ, ಎ.ಪಿ.ಎಂ.ಸಿ. ಮಾಜಿ ಅಧ್ಯಕ್ಷರಾದ ಹನುಮರೆಡ್ಡಿ ಹಂಗನಕಟ್ಟಿ, ರಾಯಚೂರು, ಬಳ್ಳಾರಿ, ಕೊಪ್ಪಳ, ವಿಜಯನಗರ ಹಾಲು ಒಕ್ಕೂಟದ ನಿರ್ದೇಶಕರಾದ ವೆಂಕನಗೌಡ್ರು ಹಿರೇಗೌಡ್ರು, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ಕೇಶವರೆಡ್ಡಿ ಮಾದಿನೂರು, ಕಾಂಗ್ರೆಸ್ ಕಮಿಟಿಯ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಕೃಷ್ಣ ಇಟ್ಟಂಗಿ, ನಾಗರಾಜ ಹುರಕಡ್ಲಿ, ಮಹಾವಿದ್ಯಾಲಯದ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳ ಶುಲ್ಕ ಭರಿಸಿದ ದಾನಿಗಳಾದ ಸದಾಶಿವರೆಡ್ಡಿ ಮಾದಿನೂರ, ನಾಗರಾಜ ಪಟವಾರಿ, ಸಿದ್ದರಾಮಗೌಡ ಕಾತರಕಿ, ಮಾರುತಿ ನಾಯಕ, ಮರುಳುಸಿದ್ದಪ್ಪ ಹಣವಾಳ ಮಹಾವಿದ್ಯಾಲಯದ ಜೀವಶಾಸ್ತ್ರ ಉಪನ್ಯಾಸಕರಾದ ವೀರಶೇಖರ ಪತ್ತಾರ, ರಾಜ್ಯಶಾಸ್ತ್ರ ಉಪನ್ಯಾಸಕರಾದ ಐ.ಎನ್.ಪಾಟೀಲ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಇದೇ ಸಂದರ್ಭದಲ್ಲಿ ಮಹಾವಿದ್ಯಾಲಯದ ಆವರಣದಲ್ಲಿ ಮಾನ್ಯ ಶಾಸಕರಾದ ರಾಘವೇಂದ್ರ ಹಿಟ್ನಾಳ ಅವರು ಸಸಿಗಳನ್ನು ನೆಡುವುದರ ಮೂಲಕ ವಿಶ್ವಪರಿಸರ ದಿನಾಚರಣೆಗೆ ಚಾಲನೆ ನೀಡಿದರು.
Comments are closed.