ಗೌರಿ-ಗಣೇಶ ಹಬ್ಬ: ಮದ್ಯ ಮಾರಾಟ ನಿಷೇಧ

0

Get real time updates directly on you device, subscribe now.

 ಗೌರಿ-ಗಣೇಶ ಹಬ್ಬದ ನಿಮಿತ್ತವಾಗಿ ಕಾನೂನು & ಸುವ್ಯವಸ್ಥೆ ಕಾಪಾಡಲು ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಆದೇಶ ಹೊರಡಿಸಿದ್ದಾರೆ.
ಜಿಲ್ಲೆಯಾದ್ಯಂತ ಪ್ರತಿ ವರ್ಷದಂತೆ ಗೌರಿ-ಗಣೇಶ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದು, ಯಾವುದೇ ರೀತಿಯ ಅಹಿತಕರ ಘಟನೆಗಳು ಜರುಗದಂತೆ ಕಾನೂನು ಸುವ್ಯವಸ್ಥೆ, ಶಾಂತಿ ಪಾಲನೆಗಾಗಿ ಮತ್ತು ಸಾರ್ವಜನಿಕ ಹಿತಾಸಕ್ತಿ ಕಾಪಾಡುವ ಹಿತದೃಷ್ಟಿಯಿಂದ ಕರ್ನಾಟಕ ಅಬಕಾರಿ ಕಾಯ್ದೆ-1965ರ ಕಲಂ 21ರ ಪ್ರಕಾರ ಜಿಲ್ಲೆಯಾದ್ಯಂತ 1, 3, 5 ಮತ್ತು 7ನೇ ದಿನದ ಗಣೇಶ ಮೂರ್ತಿ ವಿಸರ್ಜನಾ ದಿನಗಳಂದು ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗುದೆ.
ಗಣೇಶ್ ಮೂರ್ತಿ ಮೆರವಣಿಗೆ ಹಾಗೂ ವಿಸರ್ಜನೆ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಸೆಪ್ಟೆಂಬರ್ 07ರಂದು ಬೆಳಿಗ್ಗೆ 06 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧಿಸಲಾಗಿದೆ. ಅದರಂತೆ ಗಣೇಶ್ ಮೂರ್ತಿ ವಿಸರ್ಜನೆಯ ಪ್ರಯುಕ್ತ ಸೆ.09, ಸೆ.11 ಮತ್ತು ಸೆ.13ರಂದು ಬೆಳಿಗ್ಗೆ 06 ಗಂಟೆಯಿಂದ ರಾತ್ರಿ 11 ಗಂಟೆಯವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟವು ನಿಷೇಧವಿರುತ್ತದೆ.
ಈ ವಿಷಯವಾಗಿ ಅಬಕಾರಿ ಉಪ ಆಯುಕ್ತರ ನೇತೃತ್ವದಲ್ಲಿ ತನಿಖಾ ತಂಡವನ್ನು ರಚಿಸಿ ಅದರಲ್ಲಿ ಆರಕ್ಷಕ ವೃತ್ತ ನಿರೀಕ್ಷಕರು, ಅಬಕಾರಿ ವೃತ್ತ ನಿರೀಕ್ಷಕರು ಕಾರ್ಯನಿರ್ವಹಿಸಲು ಆದೇಶಿಸುತ್ತಾ ಮತ್ತು ಈ ಆದೇಶವನ್ನು ಜಾರಿಗೆ ತರುವಲ್ಲಿ ನಿರ್ಲಕ್ಷತನ ತೋರಿದವರ ವಿರುದ್ಧ ಕಾನೂನು ರೀತಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Leave A Reply

Your email address will not be published.

error: Content is protected !!
%d bloggers like this: