ಜಿಲ್ಲಾ ಮಟ್ಟದ ಯುವಜನೋತ್ಸವ: ಸೆ.13ರಂದು ಮ್ಯಾರಥಾನ್ ಸ್ಪರ್ಧೆ

0

Get real time updates directly on you device, subscribe now.

ಕೊಪ್ಪಳ ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕದಿಂದ ಜಿಲ್ಲಾ ಮಟ್ಟದ “ಯುವಜನೋತ್ಸವ ಕಾರ್ಯಕ್ರಮದ ಅಂಗವಾಗಿ ಸೆಪ್ಟೆಂಬರ್ 13ರಂದು ಕೊಪ್ಪಳದಲ್ಲಿ ಕಾಲೇಜು ವಿದ್ಯಾರ್ಥಿಗಳಿಗಾಗಿ 5 ಕಿ.ಮಿ ಮ್ಯಾರಥಾನ್ ಸ್ಪರ್ಧೆಯನ್ನು ಹಮ್ಮಿಕೊಳ್ಳಲಾಗಿದೆ.
ಹೆಚ್.ಐ.ವಿ ಏಡ್ಸ್ ಕುರಿತು ಜಿಲ್ಲಾ ಮಟ್ಟದಲ್ಲಿ “ಯುವಜನೋತ್ಸವ” ವನ್ನು ನ್ಯಾಕೋ ಮಾರ್ಗಸೂಚಿಯಂತೆ ಮ್ಯಾರಥಾನ್ ಸ್ಪರ್ಧೆಯನ್ನು ಜಿಲ್ಲಾ, ರಾಜ್ಯ, ಪ್ರಾದೇಶಿಕ ಹಾಗೂ ರಾಷ್ಟ್ರಮಟ್ಟದಲ್ಲಿ ಹಮ್ಮಿಕೊಳ್ಳುತ್ತಿದ್ದು, ಈ ಸ್ಪರ್ಧೆಯ ಮುಖ್ಯ ಉದ್ದೇಶ ಹೆಚ್.ಐ.ವಿ ಏಡ್ಸ್ ಬಗ್ಗೆ ಅರಿವು ಸೇವಾ ಸೌಲಭ್ಯಗಳ ಮಾಹಿತಿ, ಕಳಂಕ ಮತ್ತು ತಾರತಮ್ಯ ತಡೆಗಟ್ಟುವುದು ಹಾಗೂ ಹೆಚ್.ಐ.ವಿ ಮತ್ತು ಏಡ್ಸ್ (ತಡೆ) ಕಾಯ್ದೆ 2017, ನ್ಯಾಕೋ ಏಡ್ಸ್ ಆಪ್, ಉಚಿತ ರಾಷ್ಟ್ರೀಯ ಸಹಾಯವಾಣಿ 1097, ಎಸ್.ಟಿ.ಐ., ಇತ್ಯಾದಿ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವುದಾಗಿದೆ.
5 ಕಿ.ಮಿ ಮ್ಯಾರಥಾನ್ ಸ್ಪರ್ಧೆಯ ಮಾರ್ಗಸೂಚಿಗಳು: ಮ್ಯಾರಥಾನ್ ಸ್ಪರ್ಧೆಯನ್ನು ಸೆಪ್ಟೆಂಬರ್ 13 ರಂದು ಬೆಳಗ್ಗೆ 07.30 ಕ್ಕೆ ಜಿಲ್ಲಾಡಳಿತ ಭವನ ಕೊಪ್ಪಳದಿಂದ ಜಿಲ್ಲಾ ಕ್ರೀಡಾಂಗಣದವರೆಗೆ ನಡೆಸಲಾಗುವುದು. 17 ರಿಂದ 25 ವರ್ಷದ ಕಾಲೇಜು ವಿದ್ಯಾರ್ಥಿಗಳು ಮಾತ್ರ ಭಾಗವಹಿಸಬೇಕು. ಮ್ಯಾರಥಾನ್ ಮೂಲಕ ಕಾಲೇಜು ವಿದ್ಯಾರ್ಥಿಗಳಲ್ಲಿ ಹೆಚ್.ಐ.ವಿ/ಏಡ್ಸ್ ಕುರಿತು ಸಮಗ್ರ ಮಾಹಿತಿಯನ್ನು ನೀಡಬೇಕು. 5.0 ಕಿ.ಮೀ. ಮ್ಯಾರಥಾನ್ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಮೊದಲನೇ ಬಹುಮಾನ ಪುರುಷ ವಿದ್ಯಾರ್ಥಿಗೆ ರೂ.5000 ಮಹಿಳೆ ವಿದ್ಯಾರ್ಥಿನಿಗೆ ರೂ. 5000, ಎರಡನೇ ಬಹುಮಾನ ಪುರುಷ ವಿದ್ಯಾರ್ಥಿಗೆ ರೂ.3500, ಮಹಿಳೆ ವಿದ್ಯಾರ್ಥಿನಿಗೆ ರೂ. 3500, ಮೂರನೇ ಬಹುಮಾನ ಪುರುಷ ವಿದ್ಯಾರ್ಥಿಗೆ ರೂ. 2500, ಮಹಿಳೆ ವಿದ್ಯಾರ್ಥಿನಿಗೆ ರೂ. 2500, ಸಮಾಧಾನಕರ 8 ಬಹುಮಾನಗಳನ್ನು ರೂ. 1000 (ಪುರುಷ ವಿದ್ಯಾರ್ಥಿಗಳು 4 & ಮಹಿಳೆ ವಿದ್ಯಾರ್ಥಿಗಳು 4) ನೀಡಲಾಗುವುದು.
ಸ್ಪರ್ಧೆಯಲ್ಲಿ ವಿಜೇತರಾದ ಮೊದಲನೇ ಬಹುಮಾನ ಪಡೆದ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಸ್ಪರ್ಧೆಗೆ ಭಾಗವಹಿಸಬೇಕಾಗಿರುತ್ತದೆ. ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ಪಿ.ಎಫ್.ಎಂ.ಎಸ್. ಮುಖಾಂತರ ವಿದ್ಯಾರ್ಥಿಗಳಿಗೆ ನೇರವಾಗಿ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಕಾಲೇಜಿನ ಗುರುತಿನ ಚೀಟಿ, ಆಧಾರ್ ಕಾರ್ಡ ಹಾಗೂ ಕಾಲೇಜಿನ ಪ್ರಾಂಶುಪಾಲರ ಧೃಢೀಕರಣ ಪತ್ರಗಳೊಂದಿಗೆ ಹಾಜರಾಗಬೇಕು. ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ದೈಹಿಕ ಆರೋಗ್ಯ ಅರ್ಹತಾ (ಫೆಟ್‌ನೆಸ್ ಸರ್ಟಿಫಿಕೇಟ್) ಪ್ರಮಾಣಪತ್ರವನ್ನು ಕಡ್ಡಾಯವಾಗಿ ತರಬೇಕು. ತಪ್ಪಿದಲ್ಲಿ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದಿಲ್ಲ. ನಿರ್ಣಾಯಕರ ತೀರ್ಮಾನವೇ ಅಂತಿಮವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9449846981 ಹಾಗೂ 9481732070 ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Leave A Reply

Your email address will not be published.

error: Content is protected !!
%d bloggers like this: