ಮಕ್ಕಳ ಭವಿಷ್ಯ ರೂಪಿಸುವ ಶಕ್ತಿ ಶಿಕ್ಷಕರಿಗಿದೆ: ಕೆ.ರಾಘವೇಂದ್ರ ಹಿಟ್ನಾಳ್
ಕೊಪ್ಪಳ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ, ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ ಪ್ರದಾನ ಸಮಾರಂಭ
ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ, ಬೆಂಗಳೂರು ಹಾಗೂ ಶಾಲಾ ಶಿಕ್ಷಣ ಇಲಾಖೆ, ಕೊಪ್ಪಳ ಇವರ ಸಹಯೋಗದಲ್ಲಿ ಸೆಪ್ಟೆಂಬರ್ 05ರಂದು ನಗರದ ಸಾಹಿತ್ಯ ಭವನದಲ್ಲಿ ಹಮ್ಮಿಕೊಳ್ಳಾಗಿದ್ದ ಜಿಲ್ಲಾ ಮಟ್ಟದ ಶಿಕ್ಷಕರ ದಿನಾಚರಣೆ ಮತ್ತು ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಕರು ದೇಶದ ನಿರ್ಮಾಪಕರಾಗಿದ್ದಾರೆ. ಡಾ.ಸರ್ವಪಲ್ಲಿ ರಾಧಕೃಷ್ಣನ್ ಅವರು ದೇಶದ ರಾಷ್ಟçಪತಿಗಳು, ಉಪರಾಷ್ಟಪತಿಗಳಾಗಿ ಅಪಾರ ಕೊಡುಗೆ ನೀಡಿದ್ದಾರೆ. ಶಿಕ್ಷಕರೊಬ್ಬರು ತಮ್ಮ ಪರಿಶ್ರಮದ ಫಲವಾಗಿ ರಾಷ್ಟ್ರದ ಅತ್ಯುನ್ನತ ಸ್ಥಾನಕ್ಕೆ ಏರಿದ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನವನ್ನು ಶಿಕ್ಷಕರ ದಿನವನ್ನಾಗಿ ಆಚರಿಸಲಾಗುತ್ತಿದೆ. ಕಲ್ಯಾಣ ಕರ್ನಾಟಕ ಭಾಗಕ್ಕೆ 371(ಜೆ) ವಿಶೇಷ ಸ್ಥಾನ ಸಿಕ್ಕಿದ್ದು, ಇದರಿಂದ ಈ ಭಾಗದ ಜನರಿಗೆ ಸರ್ಕಾರಗಳ ಯೋಜನೆಗಳು, ಶಿಕ್ಷಣಕ್ಕಾಗಿ ವಿಶೇಷ ಸೌಲಭ್ಯಗಳು, ಇನ್ನಿತರ ಅವಕಾಶಗಳು ಸಿಗಲಿವೆ. ಇದಕ್ಕಾಗಿ ಹಲವಾರು ನಾಯಕರ ಪರಿಶ್ರಮ ಅಡಗಿದೆ. ಅವುಗಳ ಸದ್ಬಳಕೆ ಆಗಬೇಕು. ಈ ಬಾರಿಯ ಜಿಲ್ಲೆಯ ಎಸ್.ಎಸ್.ಎಲ್.ಸಿ ಫಲಿತಾಂಶ ಕಡಿಮೆಯಾಗಿದ್ದು, ಫಲಿತಾಂಶ ಸುಧಾರಣೆಗಾಗಿ ಅಗತ್ಯ ಕ್ರಮ ಕೈಗೊಳ್ಳಬೇಕು. ಶಿಕ್ಷಕರು ಪ್ರಾಮಾಣಿಕ ಪ್ರಯತ್ನ, ಚಿಂತನೆಗಳಿAದ ಮಕ್ಕಳ ಉತ್ತಮ ಭವಿಷ್ಯವನ್ನು ರೂಪಿಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಎಲ್ಲಾ ಶಿಕ್ಷಕರು ನಮ್ಮ ಜಿಲ್ಲೆಯ ಮಕ್ಕಳ ಉತ್ತಮ ಶಿಕ್ಷಣಕ್ಕೆ ಶ್ರಮಿಸಿ ಜಿಲ್ಲೆಯನ್ನು ಎತ್ತರ ಸ್ಥಾನಕ್ಕೆ ತರುವಂತೆ ಮಾಡಬೇಕು ಎಂದು ಹೇಳಿದರು.
ವೇತನ ಪರಿಷ್ಕರಣೆಗಾಗಿ ಸರ್ಕಾರಿ ನೌಕರರ ಬೇಡಿಯನ್ನು ಪರಿಗಣಿಸಿದ ರಾಜ್ಯ ಸರ್ಕಾರವು 7ನೇ ವೇತನವನ್ನು ಜಾರಿಗೊಳಿಸಿದೆ. ಜಿಲ್ಲೆಯಲ್ಲಿ ಗುರುಭವನ ನಿರ್ಮಾಣ ಕಾಮಗಾರಿಗೆ ವೇಗ ನೀಡಲು ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು ಎಂದರು.
ವಿಧಾನ ಪರಿಷತ್ ಸದಸ್ಯರಾದ ಹೇಮಲತಾ ನಾಯಕ ಅವರು ಮಾತನಾಡಿ, ಯಾವುದೇ ಒಬ್ಬ ವ್ಯಕ್ತಿ ಒಂದು ಒಳ್ಳೆಯ ಸ್ಥಾನಕ್ಕೆ ಬರಲು ಶಿಕ್ಷಕರ ಪಾತ್ರ ಪ್ರಮುಖವಾಗಿರುತ್ತದೆ. ಇಂದು ನಾನು ಈ ಸ್ಥಾನಕ್ಕೆ ಬರಲು ನನ್ನ ಶಿಕ್ಷರ ಪರಿಶ್ರಮವುವಿದೆ. ಶಿಕ್ಷಕ ವೃತ್ತಿಯು ಅತ್ಯಂತ ಪವಿತ್ರವಾದದ್ದು. ಮಕ್ಕಳಿಗೆ ಸುಂದರ ಭವಿಷ್ಯವನ್ನು ಕಟ್ಟಿಕೊಡಬೇಕು. ಮಕ್ಕಳ ಉತ್ತಮ ಭವಿಷ್ಯ ರೂಪಿಸುವಲ್ಲಿ ಪೋಷಕರು ಹಾಗೂ ಶಿಕ್ಷಕರ ಪಾತ್ರ ಮಹತ್ವದ್ದಾಗಿದೆ. ಗಡಿ ಭಾಗಗಳಲ್ಲಿ ಸರ್ಕಾರಿ ಶಾಲೆಗಳ ಅಭಿವೃದ್ಧಿಯಾಗಬೇಕು. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಅಂತಹ ಶಾಲೆಗಳಿಗೆ ಭೇಟಿ ವಿಶೇಷ ಕ್ರಮ ವಹಿಸಬೇಕು. ಜಿಲ್ಲೆಯಲ್ಲಿ ಕಲರವ ಸ್ನೇಹ ಬಳಗದವರು ಸರ್ಕಾರಿ ಶಾಲೆಗಳಿಗೆ ಸುಣ್ಣ-ಬಣ್ಣ ಮಾಡುವುದರ ಮೂಲಕ ಸರ್ಕಾರಿ ಶಾಲೆಗಳಿಗೆ ಮೆರಗು ನೀಡುತ್ತಿದ್ದಾರೆ. ಈ ಕಾರ್ಯ ಶ್ಲಾö್ಯಘನೀಯವಾಗಿದೆ ಎಂದು ಹೇಳಿದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ ಅವರು ಮಾತನಾಡಿ, ಜಿಲ್ಲೆಯಲ್ಲಿ ಈ ಬಾರಿ ಎಸ್.ಎಸ್.ಎಲ್.ಸಿ ಫಲಿತಾಂಶ ಸ್ವಲ್ಪ ಕಡಿಮೆಯಾಗಿದ್ದು, ಈ ಹಿನ್ನೆಲೆಯಲ್ಲಿ ಎಲ್ಲಾ ಶಿಕ್ಷಕರೊಂದಿಗೆ ಈಗಾಗಲೇ ಸಭೆ, ತರಬೇತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಸಾಮಾಜಿಕ ಬದಲಾವಣೆಗೆ ಶಿಕ್ಷಕರಲ್ಲಿ ಶಕ್ತಿ ಇದ್ದು, ಹೊಸ-ಹೊಸ ಪ್ರಯೋಗಳನ್ನು ಅನುಸರಿಸಿ ಮಕ್ಕಳ ಕಲಿಕೆಗೆ ಪ್ರೋತ್ಸಾಹಿಸಬೇಕು. ಮುಂದಿನ ಬಾರಿಯ ಎಸ್.ಎಸ್.ಎಲ್.ಸಿ ಫಲಿತಾಂಶವು ಹೆಚ್ಚಿಸಬೇಕು. ಸ್ವಚ್ಛ ಭಾರತ ಯೋಜನೆಯಡಿ ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕಾಗಿ ಸುಮಾರು 6 ಸಾವಿರಗಳಷ್ಟು ಅರ್ಜಿ ಬಂದಿದ್ದವು, ಸಾರ್ವಜನಿಕರಿಗೆ ವಿಶೇಷ ಜಾಗೃತಿ ಮತ್ತು ಶೌಚಾಲಯ ನಿರ್ಮಾಣಕ್ಕೆ ಪ್ರೋತ್ಸಾಹಿಸಲು ಶಿಕ್ಷಕರನ್ನು ಈ ಅಭಿಯಾನದಲ್ಲಿ ತೊಡಗಿಸಿಕೊಂಡಾಗ ಸುಮಾರು 10 ಸಾವಿರ ಅರ್ಜಿಗಳು ಬಂದಿವೆ. ವೈಯಕ್ತಿ ಶೌಚಾಲಯ ನಿರ್ಮಾಣಕ್ಕೆ ಇರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಹಾಯಧನವು ಈ ವರ್ಷ ಕೊನೆಯಗೊಳ್ಳಲಿದ್ದು, ಈ ಬಗ್ಗೆ ಸಾರ್ವಜನಿಕರಿಗೆ ತಿಳುವಳಿಕೆ ನೀಡಿ ಜಿಲ್ಲೆಯಾದ್ಯಂತ ಎಲ್ಲಾ ಮನೆಗಳಲ್ಲಿ ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ ಶಿಕ್ಷಕರು ಶ್ರಮಿಸಬೇಕು ಎಂದು ಹೇಳಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕೊಪ್ಪಳ ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್ ಅವರು ಮಾತನಾಡಿ, ಡಾ.ಸರ್ವಪಲ್ಲಿ ರಾಧಕೃಷ್ಣನ್ ಅವರು ಶಿಕ್ಷಕರಷ್ಟೆಯಲ್ಲದೇ ಮಹಾನ ಶಿಕ್ಷಣ ತಜ್ಞರಾಗಿದ್ದಾರೆ. ಉಪರಾಷ್ಟçಪತಿಗಳು ಹಾಗೂ ರಾಷ್ಟçಪತಿಗಳಾಗಿ ದೇಶಕ್ಕೆ ಸಲ್ಲಿಸಿದ ಅವರು ಸೇವೆ ಅನನ್ಯವಾಗಿದೆ. ಮಕ್ಕಳ ಉಜ್ವಲ ಭವಿಷ್ಯಕ್ಕಾಗಿ ಶಿಕ್ಷಕರ ಪಾತ್ರ ಪ್ರಮುಖವಾಗಿದೆ. ಮಗುವುಗೆ ಜನ್ಮ ನೀಡುವಳು ತಾಯಿಯಾದರೆ, ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರು ಎರಡನೇ ತಾಯಿಯ ಸ್ಥಾನದಲ್ಲಿ ಬರುತ್ತಾರೆ. ಮನುಷ್ಯನ ಜೀವನದಲ್ಲಿ ಶಿಕ್ಷಣ ಅತ್ಯವ್ಯಶಕವಾಗಿದ್ದು, ಪವಿತ್ರ ಕುರ್‌ನ ಮೊದಲ ಅಕ್ಷರವು ಓದು ಎಂಬುದಾಗಿದೆ. ಇದಲ್ಲದೇ ಅಲವಾರು ಧರ್ಮ ಗ್ರಂಥಗಳಲ್ಲಿಯೂ ಸಹ ಓದುವ ಬಗ್ಗೆ ವಿವಿಧ ನಿರ್ದಶನಗಳಿವೆ. ಎಲ್ಲರೂ ಮಕ್ಕಳ ಶಿಕ್ಷಣಕ್ಕಾಗಿ ಹೆಚ್ಚು ಗಮನ ನೀಡಬೇಕು. ರಾಜ್ಯ ಸರ್ಕಾರವು ಶಿಕ್ಷಣಕ್ಕಾಗಿ ಹಲವಾರು ಯೋಜನೆಗಳು, ಕಾರ್ಯಕ್ರಮಗಳು ಹಾಗೂ ಸೌಲಭ್ಯಗಳನ್ನು ಜಾರಿಗೊಳಿಸಿದೆ. ಶಿಕ್ಷಣ ಕ್ಷೇತ್ರದಲ್ಲಿ ನಮ್ಮ ಜಿಲ್ಲೆಯಲ್ಲಿ ಹಲವಾರು ಶೈಕ್ಷಣಿಕ ಅಭಿವೃದ್ಧಿ ಕಾರ್ಯಕ್ರಮಗಳು ಜಾರಿಯಾಗಿವೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಸಪಾ ಅಧ್ಯಕ್ಷರಾದ ಶರಣೆಗೌಡ ಪೊಲೀಸ್ ಪಾಟೀಲ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಎಸ್.ಎಸ್ ಬಿರಾದಾರ, ಜಿಲ್ಲಾ ಸರ್ಕಾರಿ ನೌಕರ ಸಂಘದ ಪ್ರಧಾನ ಕಾರ್ಯದರ್ಶಿಗಳಾದ ಶಿವಪ್ಪ ಜೋಗಿ, ವಿಕಲಚೇತನರ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾದ ಬೀರಪ್ಪ ಅಂಡಗಿ, ಶಿಕ್ಷಣಾಧಿಕಾರಿಗಳ ಸಂಘದ ಜಿಲ್ಲಾ ಅಧ್ಯಕ್ಷರಾದ ಬಾಬುಸಾಬ ಲೈನ್‌ದಾರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಶರಣಬಸನಗೌಡ ಪಾಟೀಲ, ಕೊಪ್ಪಳ ಭೋದಕೇತರ ನೌಕರರ ಸಂಘದ ಅಧ್ಯಕ್ಷರಾದ ಶಿವಶಂಕ್ರಪ್ಪ ಮರಡಿ, ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷರಾದ ಮಾರುತಿ ಮ್ಯಾಗಳಮನಿ, ಕೊಪ್ಪಳ ಬಿಇಓ ಶಂಕ್ರಯ್ಯ ಟಿ.ಎಸ್., ಜಿ.ಅ.ದಾ ಕಾರ್ಯಕ್ರಮ ಶಿಕ್ಷಣಾಧಿಕಾರಿಗಳಾದ ಅನಿತಾ ಎಸ್.ಆರ್. ಸೇರಿದಂತೆ ಶಿಕ್ಷಕರ ಮತ್ತು ಪದವಿ ಪೂರ್ವ ಉಪನ್ಯಾಸಕರ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು, ಕೊಪ್ಪಳ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆಯನ್ನು ಓದಲಾಯಿತು. ಜಿಲ್ಲಾ ಮಟ್ಟದ ಅತ್ಯುತ್ತ ಶಿಕ್ಷಕರ ಪ್ರಶಸ್ತಿ ಪುರಷ್ಕೃತ ಶಿಕ್ಷಕರನ್ನು ಹಾಗೂ ನಿವೃತ್ತ ಶಿಕ್ಷರನ್ನು ಸನ್ಮಾನಿಸಿ ಗೌರವಿಸಲಾಯಿತು.
Comments are closed.