ಜಿಲ್ಲಾ ಮಟ್ಟದ ಯುವಜನೋತ್ಸವದ ಅಂಗವಾಗಿ ಕಬ್ಬಡ್ಡಿ ಪಂದ್ಯಾವಳಿ

Get real time updates directly on you device, subscribe now.

 ಕೊಪ್ಪಳ ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕದಿಂದ ಜಿಲ್ಲಾ ಮಟ್ಟದ “ಯುವಜನೋತ್ಸವ ಕಾರ್ಯಕ್ರಮದ ಅಂಗವಾಗಿ ಅಂತರ್ ಪದವಿ ಕಾಲೇಜು ವಿದ್ಯಾರ್ಥಿಗಳಿಗಾಗಿ ಕಬ್ಬಡ್ಡಿ ಪಂದ್ಯಾವಳಿಯನ್ನು ಹಮ್ಮಿಕೊಳ್ಳಲಾಗಿದೆ.
ಹೆಚ್.ಐ.ವಿ ಏಡ್ಸ್ ಕುರಿತು ಜಿಲ್ಲಾ ಮಟ್ಟದಲ್ಲಿ “ಯುವಜನೋತ್ಸವ” ನಿಮಿತ್ತ ನ್ಯಾಕೋ ಮಾರ್ಗಸೂಚಿಯಂತೆ ಕಬ್ಬಡ್ಡಿ ಪಂದ್ಯಾವಳಿಯನ್ನು ಜಿಲ್ಲಾಮಟ್ಟದಲ್ಲಿ ಹಮ್ಮಿಕೊಳ್ಳುತ್ತಿದ್ದು, ಈ ಸ್ಪರ್ಧೆಯ ಮುಖ್ಯ ಉದ್ದೇಶ ಹೆಚ್.ಐ.ವಿ ಏಡ್ಸ್ ಬಗ್ಗೆ ಅರಿವು ಸೇವಾ ಸೌಲಭ್ಯಗಳ ಮಾಹಿತಿ, ಕಳಂಕ ಮತ್ತು ತಾರತಮ್ಯ ತಡೆಗಟ್ಟುವುದು ಹಾಗೂ ಹೆಚ್.ಐ.ವಿ ಮತ್ತು ಏಡ್ಸ್ (ತಡೆ) ಕಾಯ್ದೆ 2017, ನ್ಯಾಕೋ ಏಡ್ಸ್ ಆಪ್, ಉಚಿತ ರಾಷ್ಟ್ರೀಯ ಸಹಾಯವಾಣಿ 1097, ಎಸ್.ಟಿ.ಐ., ಇತ್ಯಾದಿ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವುದಾಗಿದೆ.
ಅಂತರ್ ಪದವಿ ಕಾಲೇಜು ಕಬ್ಬಡ್ಡಿ ಪಂದ್ಯಾವಳಿಯ ಮಾರ್ಗಸೂಚಿಗಳು: ಸೆಪ್ಟೆಂಬರ್ 20ರಂದು ತಾಲ್ಲೂಕು ಕ್ರೀಡಾಂಗಣದಲ್ಲಿ ಕಬ್ಬಡ್ಡಿ ಪಂದ್ಯಾವಳಿ ನೆಡೆಯಲ್ಲಿದ್ದು, ಸೆ.18ರೊಳಗಾಗಿ ಕಾಲೇಜಿನ ಅಧಿಕೃತ ಪತ್ರದೊಂದಿಗೆ ತಂಡದ ನೊಂದಣಿ ಮಾಡಿಸಬೇಕು. 18 ರಿಂದ 25 ವರ್ಷದ ಕಾಲೇಜು ವಿದ್ಯಾರ್ಥಿಗಳು ಮಾತ್ರ ಭಾಗವಹಿಸಬೇಕು.(ಪುರುಷರು & ಮಹಿಳೆಯರು), ಅಮೆಚೂರ್ ಕಬ್ಬಡ್ಡಿ ಫೆಡರೇಶನ್ ಆಫ್ ಇಂಡಿಯಾ ನಿಯಾಮವಳಿಗಳಂತೆ ಪಂದ್ಯಾವಳಿಯನ್ನು ನಡೆಸಲಾಗುತ್ತದೆ. ವಿಜೇತ ಪ್ರಥಮ, ದ್ವಿತೀಯ, ತೃತೀಯ ತಂಡಕ್ಕೆ ಟ್ರೋಫಿ ಮತ್ತು ಪ್ರಮಾಣ ಪತ್ರವನ್ನು ನೀಡಲಾಗುವುದು. ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ಪಿ.ಎಫ್.ಎಂ.ಎಸ್. ಮುಖಾಂತರ ವಿದ್ಯಾರ್ಥಿಗಳಿಗೆ ನೇರವಾಗಿ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು. ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ಕಡ್ಡಾಯವಾಗಿ ಕಾಲೇಜಿನ ಗುರುತಿನ ಚೀಟಿ, ಆಧಾರ್ ಕಾರ್ಡ ಹಾಗೂ ಕಾಲೇಜಿನ ಪ್ರಾಂಶುಪಾಲರ ಧೃಢೀಕರಣ ಪತ್ರಗಳೊಂದಿಗೆ ಹಾಜರಾಗಬೇಕು.
ಸ್ಪರ್ಧೆಯಲ್ಲಿ ಭಾಗವಹಿಸುವ ವಿದ್ಯಾರ್ಥಿಗಳು ದೈಹಿಕ ಆರೋಗ್ಯ ಅರ್ಹತಾ (ಫೆಟ್‌ನೆಸ್ ಸರ್ಟಿಫಿಕೇಟ್) ಪ್ರಮಾಣಪತ್ರವನ್ನು ಕಡ್ಡಾಯವಾಗಿ ತರಬೇಕು. ತಪ್ಪಿದಲ್ಲಿ ಸ್ಪರ್ಧೆಯಲ್ಲಿ ಭಾಗವಹಿಸಲು ಅವಕಾಶ ನೀಡಲಾಗುವುದಿಲ್ಲ. ಭಾಗವಹಿಸಿದ ತಂಡಗಳಿಗೆ ಊಟ, ಉಪಹಾರ ನೀಡಲಾಗುತ್ತದೆ. ವಿದ್ಯಾರ್ಥಿಗಳಿಗೆ ಪ್ರಯಾಣ ಭತ್ಯೆಯನ್ನು ಪಿ.ಎಫ್.ಎಂ.ಎಸ್. ಮುಖಾಂತರ ವಿದ್ಯಾರ್ಥಿಗಳಿಗೆ ನೇರವಾಗಿ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9449846981 ಹಾಗೂ 9481732070 ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!