ಕುಷ್ಟಗಿ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಸೆ.11ಕ್ಕೆ
: ಕೊಪ್ಪಳ ಜಿಲ್ಲಾ ಪಂಚಾಯತ್, ಕುಷ್ಟಗಿ ತಾಲೂಕು ಪಂಚಾಯಿತಿ, ತಾಲೂಕು ಆಡಳಿತ ಹಾಗೂ ಬೆಂಗಳೂರು ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ಮತ್ತು ಕುಷ್ಟಗಿ ಶಾಲಾ ಶಿಕ್ಷಣ ಇಲಾಖೆ ಇವರ ಸಹಯೋಗದೊಂದಿಗೆ ಡಾ.ಸರ್ವಪಲ್ಲಿ ರಾಧಾಕೃಷ್ಣನ್‌ರವರ 136ನೇ ಜನ್ಮ ದಿನಾಚರಣೆಯ ಪ್ರಯುಕ್ತ ಕುಷ್ಟಗಿ ತಾಲ್ಲೂಕು ಮಟ್ಟದ ಶಿಕ್ಷಕರ ದಿನಾಚರಣೆಯನ್ನು ಸೆಪ್ಟಂಬರ್ 11ರಂದು ಬೆಳಿಗ್ಗೆ 10 ಗಂಟೆಗೆ ಕುಷ್ಟಗಿಯ ಕ್ರೈಸ್ತ ದಿ ಕಿಂಗ್ ಶಾಲೆಯಲ್ಲಿ ಹಮ್ಮಿಕೊಳ್ಳಾಗಿದೆ.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ ಅವರು ಕಾರ್ಯಕ್ರಮ ಉದ್ಘಾಟಿಸುವರು. ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ವಿಧಾನಸಭಾ ಕ್ಷೇತ್ರ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ ಅವರು ಸಮಾರಂಭದ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರಾದ ಕೆ.ರಾಜಶೇಖರ ಹಿಟ್ನಾಳ್, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ್ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ, ಹೇಮಲತಾ ನಾಯಕ , ಕುಷ್ಟಗಿಯ ಪುರಸಭೆಯ ಸದಸ್ಯರಾದ ಇಮಾಂಬಿ ಉಸ್ಮಾನಸಾಬ ಕಲಬುರಗಿ ಹಾಗೂ ಪುರಸಭೆಯ ಸರ್ವ ಸದಸ್ಯರು ಪಾಲ್ಗೊಳ್ಳುವರು.
ಮೈಸೂರಿನ ನಿವೃತ್ತ ಪ್ರಾಂಶುಪಾಲರು ಹಾಗೂ ಖ್ಯಾತ ವಾಗ್ನಿಗಳ ಪ್ರೋ. ಎಂ.ಕೃಷ್ಣಗೌಡ ಅವರು ಉಪನ್ಯಾಸ ನೀಡುವರು.
,ಅತಿಥಿಗಳಾಗಿ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಎಸ್.ಎಸ್.ಬಿರಾದಾರ, ಮುನಿರಾಬಾದ-ಕೊಪ್ಪಳ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಪ್ರಾಂಶುಪಾಲರು ಹಾಗೂ ಪದನಿಮಿತ್ತ ಉಪನಿರ್ದೇಶಕರಾದ ದೊಡ್ಡಬಸಪ್ಪ ನೀರಲಕೇರಿ, ಕುಷ್ಟಗಿ ತಹಶೀಲ್ದಾರರಾದ ಅಶೋಕ ವಿ ಶಿಗ್ಗಾಂವಿ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಪಂಪಾಪತಿ ಹಿರೇಮಠ, ಆರಕ್ಷಕ ವೃತ್ತ ನಿರೀಕ್ಷಕರಾದ ಯಶವಂತ ಎಚ್ ಬಿಸನಹಳ್ಳಿ, ಪುರಸಭೆ ಮುಖ್ಯಾಧಿಕಾರಿಗಳಾದ ಧರಣೇಂದ್ರ ಕುಮಾರ, ಕ್ರೈಸ್ತ ದಿ ಕಿಂಗ್ ಶಾಲೆಯ ವ್ಯವಸ್ಥಾಪಕರಾದ ರೆವರೆಂಡ್ ಫಾದರ ಜಾನ್ ಪೀಟರ್, ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಕುಷ್ಟಗಿ ತಾಲೂಕಾ ಘಟಕ ಅಧ್ಯಕ್ಷರಾದ ಬಾಲಾಜಿ ಬಳಿಗಾರ ಸೇರಿದಂತೆ ಶಿಕ್ಷಕರ ಸಂಘಗಳ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಮತ್ತಿತರರು ಪಾಲ್ಗೊಳ್ಳುವರು ಎಂದು ಪ್ರಕಟಣೆ ತಿಳಿಸಿದೆ.
Comments are closed.