ಕೆ.ಎಚ್.ಪಾಟೀಲ್ ಅವರ ಮೂರ್ತಿ ಅನಾವರಣ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಸೆ.11ಕ್ಕೆ

0

Get real time updates directly on you device, subscribe now.

 ಕರ್ನಾಟಕ ಸರ್ಕಾರ, ಜಲ ಸಂಪನ್ಮೂಲ ಇಲಾಖೆ ಹಾಗೂ ಕರ್ನಾಟಕ ನೀರಾವರಿ ನಿಗಮ ನಿಯಮಿತ ವತಿಯಿಂದ ಕರ್ನಾಟಕ ಸರ್ಕಾರದ ಮಾಜಿ ಮಂತ್ರಿಗಳಾದ ದಿ. ಕೆ.ಎಚ್ ಪಾಟೀಲ್ ಅವರ ಮೂರ್ತಿ ಅನಾವರಣ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮವನ್ನು ಸೆಪ್ಟೆಂಬರ್ 11ರಂದು ಸಂಜೆ 4.30ಕ್ಕೆ ಕುಕನೂರು ತಾಲ್ಲೂಕಿನ ಶಿರೂರು ಪುನರ್ವಸತಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ.
ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ಶಾಸಕರಾದ ಬಸವರಾಜ ರಾಯರಡ್ಡಿ ಅವರು ಶಿಲಾನ್ಯಾಸ ನೆರವೇರಿಸುವರು. ಕರ್ನಾಟಕ ಸರ್ಕಾರದ ಉಪ ಮುಖ್ಯಮಂತ್ರಿಗಳು, ಜಲ ಸಂಪನ್ಮೂಲ ಇಲಾಖೆ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ ಶಿವಕುಮಾರ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್ ತಂಗಡಗಿ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ಶಾಸಕರಾದ ದೊಡ್ಡನಗೌಡ ಹನುಮಗೌಡ ಪಾಟೀಲ ಅವರು ಘನ ಉಪಸ್ಥಿತಿ ವಹಿಸುವರು. ವಿಜಯಪುರ-ಗದಗ ಶ್ರೀ ರಾಮಕೃಷ್ಣ ವಿವೇಕಾನಂದ ಸರಸ್ವತಿ ಆಶ್ರಮದ ಅಧ್ಯಕ್ಷರಾದ ನಿರ್ಭಯಾನಂದ ಸರಸ್ವತಿ ಸ್ವಾಮೀಜಿ ಅವರು ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸುವರು. ಶಿರೂರು ಗ್ರಾ.ಪಂ ಅಧ್ಯಕ್ಷರಾದ ವಿರುಪಾಕ್ಷಪ್ಪ ವೀರಪ್ಪ ತಳಕಲ್ಲ ಅವರು ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದರಾದ ಕೆ.ರಾಜಶೇಖರ ಹಿಟ್ನಾಳ್, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ್ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ ಹಾಗೂ ಹೇಮಲತಾ ನಾಯಕ, ಮುನಿರಾಬಾದ ತುಂಗಭದ್ರ ಯೋಜನೆಯ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರಿದ (ಕಾಡಾ) ಅಧ್ಯಕ್ಷರಾದ ಹಸನ್ ಸಾಬ್ ನಬೀಬ್ ಸಾಬ್ ದೋಟಿಹಾಳ, ಗದಗಿನ ಮಾಜಿ ಶಾಸಕರಾದ ಡಿ.ಆರ್ ಪಾಟೀಲ್ ಅವರು ಪಾಲ್ಗೊಳ್ಳುವರು.
ವಿಶೇಷ ಆಹ್ವಾನಿತರಾಗಿ ಜಲಸಂಪನ್ಮೂಲ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳಾದ ಗೌರವ್ ಗುಪ್ತ, ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ ಮೋಹನ್ ರಾಜ್, ಜಲಸಂಪನ್ಮೂಲ ಇಲಾಖೆಯ ಸರ್ಕಾರದ ಕಾರ್ಯದರ್ಶಿಗಳಾದ ಕೃಷ್ಣಮೂರ್ತಿ ಬಿ ಕುಲಕರ್ಣಿ, ಕರ್ನಾಟಕ ನೀರಾವರಿ ನಿಗಮ ನಿಯಮಿತ, ಬೆಂಗಳೂರಿನ ವ್ಯವಸ್ಥಾಪಕ ನಿರ್ದೇಶಕರಾದ ರಾಜೇಶ್ ಅಮ್ಮಿನಭಾವಿ, ಶಿರೂರು ಗ್ರಾ.ಪಂ ಉಪಾಧ್ಯಕ್ಷರಾದ ಬಸವ್ವ ರವಿಕುಮಾರ ಹರಿಜನ, ಕೊಪ್ಪಳ ಜಿ.ಪಂ ಮಾಜಿ ಉಪಾಧ್ಯಕ್ಷರಾದ ಯಂಕಣ್ಣ ಯರಾಶಿ, ಕೊಪ್ಪಳ ಜಿ.ಪಂ ಮಾಜಿ ಸದಸ್ಯರಾದ ಹನುಮಂತಗೌಡ ಪಾಟೀಲ್, ಕುಕನೂರಿನ ಸತ್ಯನಾರಾಯಣ ಹರಪನಹಳ್ಳಿ, ಯಲಬುರ್ಗಾದ ಬಸವರಾಜ ಶಂಕರಗೌಡ ಉಳ್ಳಾಗಡ್ಡಿ, ಕೊಪ್ಪಳ ಜಿ.ಪಂ ಮಾಜಿ ಸದಸ್ಯರಾದ ಅಶೋಕ ತೋಟದ ಅವರು ಭಾಗವಹಿಸುವರು.
ಕಾರ್ಯಕ್ರಮದಲ್ಲಿ ಕೊಪ್ಪಳ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆಯ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಡಾ. ರಾಮ್ ಎಲ್ ಅರಿಸಿದ್ದಿ, ಕನೀನಿನಿ ನೀರಾವರಿ ಕೇಂದ್ರ ವಲಯ ಮುನಿರಾಬಾದ್‌ನ ಮುಖ್ಯ ಇಂಜಿನಿಯರರಾದ ಹನುಮಂತಪ್ಪ ಜಿ.ದಾಸರ, ತುಂಗಭದ್ರಾ ಯೋಜನಾ ವೃತ್ತ ಮುನಿರಾಬಾದ್‌ನ ಅಧೀಕ್ಷಕ ಅಭಿಯಂತರರಾದ ಎಲ್.ಬಸವರಾಜ ಹಾಗೂ ಕನೀನಿನಿ ಸಿಂಗಟಾಲೂರ ಏತ ನೀರಾವರಿ ಯೋಜನೆ ವಿಭಾಗ ನಂ.1 ಮುಂಡರಗಿಯ ಕಾರ್ಯನಿರ್ವಾಹಕ ಅಭಿಯಂತರರಾದ ಐ.ಪ್ರಕಾಶ್, ಶಿರೂರ ಗ್ರಾ.ಪಂ ಸರ್ವ ಸದಸ್ಯರು, ಯೋಜನಾ ಅನುಷ್ಠಾನಾಧಿಕಾರಿಗಳು ಹಾಗೂ ಸಿಬ್ಬಂದಿ ಮತ್ತು ಗ್ರಾಮದ ಗುರು-ಹಿರಿಯರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

Get real time updates directly on you device, subscribe now.

Leave A Reply

Your email address will not be published.

error: Content is protected !!
%d bloggers like this: