ಶುಲ್ಕ ಮರುಪಾವತಿಗೆ ಅರ್ಜಿ ಆಹ್ವಾನ

Get real time updates directly on you device, subscribe now.

ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ) ವಿದ್ಯಾರ್ಥಿಗಳಿಗೆ 2024-25ನೇ ಸಾಲಿನ ರಾಜ್ಯ ವಿದ್ಯಾರ್ಥಿ ವೇತನ ಯೋಜನೆಯಡಿ ಮೆಟ್ರಿಕ್ ನಂತರದ ಪಿ.ಯು.ಸಿ, ಡಿಪ್ಲೋಮಾ, ಐ.ಟಿ.ಐ, ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶುಲ್ಕ ಮರುಪಾವತಿಗೆ ಎಸ್‌ಎಸ್‌ಪಿ ಪೋರ್ಟಲ್ ಮೂಲಕ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು ಅಲ್ಪಸಂಖ್ಯಾತರ ಸಮುದಾಯ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್, ಪಾರ್ಸಿ)  ದವರಾಗಿರಬೇಕು. ಕರ್ನಾಟಕ ರಾಜ್ಯಕ್ಕೆ ಸೇರಿದವರಾಗಿರಬೇಕು. ವಿದ್ಯಾರ್ಥಿ ಕುಟುಂಬದ ಒಟ್ಟು ವಾರ್ಷಿಕ ಆದಾಯ ಮೆಟ್ರಿಕ್ ನಂತರ ವಿದ್ಯಾರ್ಥಿಗಳಿಗೆ (ಶುಲ್ಕ ಮರುಪಾವತಿ) ರೂ.2 ಲಕ್ಷ ಮತ್ತು ಮೆಟ್ರಿಕ್-ಕಮ್-ಮೀನ್ಸ್ ವಿದ್ಯಾರ್ಥಿಗಳ ಆದಾಯ ರೂ. 2.50 ಲಕ್ಷ ಮೀರಿರಬಾರದು. ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುವ ಪೂರ್ವದಲ್ಲಿ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆಯಾಗಿ, ಎನ್ ಪಿ ಸಿ ಐ ಮ್ಯಾಪ್ ಆಗಿರುವ ಬಗ್ಗೆ ಖಾತಿ ಪಡಿಸಕೊಳ್ಳಬೇಕು. ಶುಲ್ಕ ಮರುಪಾವತಿ ಪ್ರಕ್ರಿಯೆಯು ಸರ್ಕಾರದಿಂದ ಕಾಲಕಾಲಕ್ಕೆ ಹೊರಡಿಸಲಾಗುವ ಸರ್ಕಾರದ ಆದೇಶಗಳು ಹಾಗೂ ಮಾರ್ಗಸೂಚಿಗಳಿಗೆ ಒಳಪಟ್ಟಿರುತ್ತದೆ. ಅರ್ಹ ವಿದ್ಯಾರ್ಥಿಗಳು ಶುಲ್ಕ ಮರುಪಾವತಿಗೆ ಎಸ್‌ಎಸ್‌ಪಿ  ಪೋರ್ಟಲ್ https://ssp.karnataka.gov.in ಮೂಲಕ ಅಕ್ಟೋಬರ್ 31 ರೊಳಗೆ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ http://dom.karnataka.gov.in ಮತ್ತು ಕೊಪ್ಪಳ ಜಿಲ್ಲಾ ಅಲ್ಪಸಂಖ್ಯಾತರ ಕಚೇರಿ ಹಾಗೂ ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ಕೊಪ್ಪಳ: 08539-225070, ಗಂಗಾವತಿ: 9986244408, ಕುಷ್ಟಗಿ: 8747861392, ಯಲಬುರ್ಗಾ: 8095191406 ಇವರನ್ನು ಸಂಪರ್ಕಿಸಬಹುದು ಎಂದು ಇಲಾಖೆಯ ಜಿಲ್ಲಾ ಅಧಿಕಾರಿ ಸುರೇಶ ಕೋಕರೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!