ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಿಸಿದ ಕೆ. ಎಂ.ಸೈಯದ್
ಕೊಪ್ಪಳ : ನಗರದ 12ನೇ ವಾರ್ಡಿನ ಶ್ರೀ ವಿನಾಯಕ ಮಿತ್ರ ಮಂಡಳಿ ವತಿಯಿಂದ ಗಣೇಶ್ ಉತ್ಸವ ನಿಮಿತ್ತ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ನ್ನು ಕೆಪಿಸಿಸಿ ಸಂಯೋಜಕ ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡ ಕೆ. ಎಂ.ಸೈಯದ್ ವಿತರಿಸಿದರು.
ಕೆ.ಎಂ.ಸೈಯದ್ ಅವರು ಮಾತನಾಡಿ ಶ್ರೀ ವಿನಾಯಕ ಮಿತ್ರ ಮಂಡಳಿ ಶಾಲಾ ಮಕ್ಕಳಿಗೆ ಉಚಿತ ನೋಟ್ ಬುಕ್ ವಿತರಣೆ ಮಾಡುತ್ತಿರುವುದು ಉತ್ತಮ ಕಾರ್ಯ ಎಂದರು.
ಈ ಸಂದರ್ಭದಲ್ಲಿ ಜೆಡಿಎಸ್ ಪಕ್ಷದ ಜಿಲ್ಲಾಧ್ಯಕ್ಷ ಸುರೇಶ್ ಭೂಮರೆಡ್ಡಿ ,ಕಾಂಗ್ರೆಸ್ ಪಕ್ಷದ ಎಸ್ .ಸಿ ಮೋರ್ಚಾದ ಜಿಲ್ಲಾ ಮಾಧ್ಯಮ ವಕ್ತಾರ ಪರಶುರಾಮ್ ಕೆರೆಹಳ್ಳಿ ,ಮುಖಂಡರಾದ ಸಮುದನಖಾದ್ರಿ,ಯುವ ಮುಖಂಡ ರಾಮು ಪೂಜಾರ ಹಾಗೂ ಶ್ರೀ ವಿನಾಯಕ ಮಿತ್ರ ಮಂಡಳಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
Comments are closed.