ಮಾನವ ಸರಪಳಿ ಕಾರ್ಯಕ್ರಮ: ಕೊಪ್ಪಳ ಜಿಲ್ಲೆಯ ಸೆಕ್ಟರ್ ಅಧಿಕಾರಿಗಳ ಸಭೆ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಮಾನವ ಸರಪಳಿ ಕಾರ್ಯಕ್ರಮ ನಿಮಿತ್ತ ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ಸೆಪ್ಟೆಂಬರ್ 11ರಂದು ಕೊಪ್ಪಳ ಜಿಲ್ಲೆಯ ಎಲ್ಲಾ ಸೆಕ್ಟರ್ ಅಧಿಕಾರಿಗಳ ಸಭೆ ನಡೆಯಿತು.
ಇದೇ ವೇಳೆ ಅಪರ ಜಿಲ್ಲಾಧಿಕಾರಿಗಳು ಮಾತನಾಡಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಸೆ.15ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಕೊಪ್ಪಳ ಜಿಲ್ಲೆಯಲ್ಲಿ ಮಾನವ ಸರಪಳಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಈ ಹಿನ್ನೆಲೆಯಲ್ಲಿ ಪ್ರತಿ 100 ಮೀಟರ್‌ಗೆ ಒಂಬ್ಬರು ಸೆಕ್ಟರ್ ಅಧಿಕಾರಿಗಳನ್ನು ನೇಮಕಾ ಮಾಡಲಾಗಿದ್ದು, ಸೆಕ್ಟರ್ ಅಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಮಾನವ ಸರಪಳಿ ಬಿಟ್ಟು ಹೋಗದಂತೆ ನೋಡಿಕೊಳ್ಳಬೇಕು. ಕಾರ್ಯಕ್ರಮದ ಬಗ್ಗೆ ಜನಸಾಮಾನ್ಯರಿಗೆ ಅರಿವು ಮೂಡಿಸಿ, ಅಪಾರ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಪ್ರೇರೇಪಿಸಬೇಕು. ಎಂದರು.
ಮಾನವ ಸರಪಳಿಯಲ್ಲಿ ಭಾಗವಹಿಸುವ ಪ್ರತಿಯೊಬ್ಬರು ಪ್ರಮಾಣಪತ್ರಕ್ಕೆ ಅರ್ಹರಿರುತ್ತಾರೆ. ತಮ್ಮ ಫೋಟೊವನ್ನು ಪ್ರಮಾಣಪತ್ರದಲ್ಲಿ ಮುದ್ರಿಸಲು ಬಯಸಿದರೆ, ತಾವು ಮಾನವ ಸರಪಳಿಯಲ್ಲಿ ಪಾಲ್ಗೊಂಡಿರುವ ಫೋಟೊ ತೆಗೆದು ಅಪ್‌ಲೋಡ್ ಮಾಡಬೇಕು. ಒಂದು ಫೋಟೊದಲ್ಲಿ ಗರಿಷ್ಠ ಐದು ಜನರಿಗೆ ಮಾತ್ರವೇ ಅವಕಾಶವಿದ್ದು, ಐದು ಜನರೂ ಒಂದೇ ಫೋಟೋವನ್ನು ಅಪ್‌ಲೋಡ್ ಮಾಡಬಹುದು. ಆ 5 ಜನರಲ್ಲಿ ಪ್ರತಿಯೊಬ್ಬರೂ ಒಂದೇ ಫೋಟೊ ಇರುವ ಪ್ರತ್ಯೇಕ ಪ್ರಮಾಣಪತ್ರವನ್ನು ಪಡೆಯಬಹುದಾಗಿದೆ. ಫೋಟೊ ಅಪ್ ಲೋಡ್ ಮಾಡಲಿಚ್ಛಿಸದವರು, ತಮ್ಮ ಮೂಲಭೂತ ವಿವರಗಳನ್ನು ಮಾತ್ರ ಅಪ್‌ಲೋಡ್ ಮಾಡಬೇಕು. ಈ ವಿವರಗಳನ್ನು ಪ್ರಮಾಣಪತ್ರದಲ್ಲಿ ಮುದ್ರಿಸಲಾಗುವುದು. ಮಾನವ ಸರಪಳಿಯಲ್ಲಿ ಭಾಗವಹಿಸಿ ತಮ್ಮ ಮಾಹಿತಿಯನ್ನು ಸಲ್ಲಿಸಿದ ಪ್ರತಿಯೊಬ್ಬರು ವೆಬ್‌ಸೈಟ್ ಮೂಲಕ ಪ್ರಮಾಣಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು. ಮಾನವ ಸರಪಳಿಯಲ್ಲಿ ಪಾಲ್ಗೊಳ್ಳುವವರು ಲಿಂಕ್ https://democracydaykarnataka. in/registration ಮೂಲಕ ನೋಂದಾಯಿಸಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ರಾಜು ತಳವಾರ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಶ್ರೀಶೈಲ ಬಿರಾದಾರ, ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಎಲ್.ಬಿ.ನಾಲವಾರ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಗಳಾದ ಎ.ಬಸವರಾಜ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಸಭೆಯಲ್ಲಿ 550 ಜನ ಸೆಕ್ಟರ್ ಅಧಿಕಾರಿಗಳು ಸಮಾಜ ಕಲ್ಯಾಣ ಇಲಾಖೆಯ ವಿವಿಧ ತಾಲ್ಲೂಕುಗಳ ಸಹಾಯಕ ನಿರ್ದೇಶಕರು, ಇತರ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.
ಮಾನವ ಸರಪಳಿಯಲ್ಲಿ ಭಾಗವಹಿಸುವ ಪ್ರತಿಯೊಬ್ಬರು ಪ್ರಮಾಣಪತ್ರಕ್ಕೆ ಅರ್ಹರಿರುತ್ತಾರೆ. ತಮ್ಮ ಫೋಟೊವನ್ನು ಪ್ರಮಾಣಪತ್ರದಲ್ಲಿ ಮುದ್ರಿಸಲು ಬಯಸಿದರೆ, ತಾವು ಮಾನವ ಸರಪಳಿಯಲ್ಲಿ ಪಾಲ್ಗೊಂಡಿರುವ ಫೋಟೊ ತೆಗೆದು ಅಪ್‌ಲೋಡ್ ಮಾಡಬೇಕು. ಒಂದು ಫೋಟೊದಲ್ಲಿ ಗರಿಷ್ಠ ಐದು ಜನರಿಗೆ ಮಾತ್ರವೇ ಅವಕಾಶವಿದ್ದು, ಐದು ಜನರೂ ಒಂದೇ ಫೋಟೋವನ್ನು ಅಪ್‌ಲೋಡ್ ಮಾಡಬಹುದು. ಆ 5 ಜನರಲ್ಲಿ ಪ್ರತಿಯೊಬ್ಬರೂ ಒಂದೇ ಫೋಟೊ ಇರುವ ಪ್ರತ್ಯೇಕ ಪ್ರಮಾಣಪತ್ರವನ್ನು ಪಡೆಯಬಹುದಾಗಿದೆ. ಫೋಟೊ ಅಪ್ ಲೋಡ್ ಮಾಡಲಿಚ್ಛಿಸದವರು, ತಮ್ಮ ಮೂಲಭೂತ ವಿವರಗಳನ್ನು ಮಾತ್ರ ಅಪ್‌ಲೋಡ್ ಮಾಡಬೇಕು. ಈ ವಿವರಗಳನ್ನು ಪ್ರಮಾಣಪತ್ರದಲ್ಲಿ ಮುದ್ರಿಸಲಾಗುವುದು. ಮಾನವ ಸರಪಳಿಯಲ್ಲಿ ಭಾಗವಹಿಸಿ ತಮ್ಮ ಮಾಹಿತಿಯನ್ನು ಸಲ್ಲಿಸಿದ ಪ್ರತಿಯೊಬ್ಬರು ವೆಬ್‌ಸೈಟ್ ಮೂಲಕ ಪ್ರಮಾಣಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು. ಮಾನವ ಸರಪಳಿಯಲ್ಲಿ ಪಾಲ್ಗೊಳ್ಳುವವರು ಲಿಂಕ್ https://democracydaykarnataka.
ಈ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ರಾಜು ತಳವಾರ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಶ್ರೀಶೈಲ ಬಿರಾದಾರ, ಪ್ರಾದೇಶಿಕ ಸಾರಿಗೆ ಅಧಿಕಾರಿಗಳಾದ ಎಲ್.ಬಿ.ನಾಲವಾರ, ಜಿಲ್ಲಾ ದೈಹಿಕ ಶಿಕ್ಷಣಾಧಿಕಾರಿಗಳಾದ ಎ.ಬಸವರಾಜ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಸಭೆಯಲ್ಲಿ 550 ಜನ ಸೆಕ್ಟರ್ ಅಧಿಕಾರಿಗಳು ಸಮಾಜ ಕಲ್ಯಾಣ ಇಲಾಖೆಯ ವಿವಿಧ ತಾಲ್ಲೂಕುಗಳ ಸಹಾಯಕ ನಿರ್ದೇಶಕರು, ಇತರ ಅಧಿಕಾರಿಗಳು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.
Comments are closed.