ಕುಷ್ಟಗಿ: ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು ಖರೀದಿ ಕೇಂದ್ರಗಳ ಪ್ರಾರಂಭ

Get real time updates directly on you device, subscribe now.

ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಕುಷ್ಟಗಿ ತಾಲ್ಲೂಕಿನಲ್ಲಿ ಹೆಸರುಕಾಳು ಖರೀದಿ ಕೇಂದ್ರಗಳನ್ನು ಪ್ರಾರಂಭಿಸಲಾಗಿದೆ ಎಂದು ಕುಷ್ಟಗಿ ತಹಶೀಲ್ದಾರರು ತಿಳಿಸಿದ್ದಾರೆ.
ಕುಷ್ಟಗಿ ತಾಲ್ಲೂಕಿನಲ್ಲಿ 2024-25ನೇ ಸಾಲಿನ ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳನ್ನು ನಾಫೇಡ್ ಹಾಗೂ ಎನ್.ಸಿ.ಸಿ.ಎಫ್ ಸಂಸ್ಥೆಗಳನ್ನು ಕೇಂದ್ರ ಸರ್ಕಾರದ ಖರೀದಿ ಸಂಸ್ಥೆಯನ್ನಾಗಿ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ ಬೆಂಗಳೂರು ಮತ್ತು ಕರ್ನಾಟಕ ರಾಜ್ಯ ದ್ವಿದಳಧಾನ್ಯ ಅಭಿವೃದ್ಧಿ ಮಂಡಳಿ ನಿಯಮಿತ ಕಲಬುರಗಿ ಈ ಸಂಸ್ಥೆಗಳನ್ನು ರಾಜ್ಯದ ವತಿಯಿಂದ ಖರೀದಿ ಸಂಸ್ಥೆಯನ್ನಾಗಿ ನೇಮಿಸಲಾಗಿದೆ.
ಕುಷ್ಟಗಿ ತಾಲ್ಲೂಕಿನಲ್ಲಿ ಹೆಸರುಕಾಳನ್ನು ಖರೀದಿಸಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಟಿ.ಎ.ಪಿ.ಸಿ.ಎಮ್.ಎಸ್ ಮತ್ತು ಎಫ್.ಪಿ.ಓ ಗಳ ಮುಖಾಂತರ ಪ್ರತಿ ಕ್ವಿಂಟಾಲ್‌ಗೆ ಬೆಂಬಲ ಬೆಲೆ ರೂ. 8,682 ಗಳು ಇದ್ದು, ಪ್ರತಿಯೊಬ್ಬ ರೈತರಿಂದ ಎಕರೆಗೆ 02 (ಎರಡು) ಕ್ವಿಂಟಾಲ್ ರಂತೆ ಗರಿಷ್ಟ 10 (ಹತ್ತು) ಕ್ವಿಂಟಾಲ್ ಖರೀದಿಸುವ ಸಂಬಂಧ ಕುಷ್ಟಗಿ ತಾಲ್ಲೂಕಿನಲ್ಲಿ ತಾವರಗೇರಾದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ, ಮೇಣದಾಳ, ಹನಮಸಾಗರದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಖರೀದಿ ಕೇಂದ್ರಗಳನ್ನು ತೆರೆಯಲಾಗಿರುತ್ತದೆ. ನೋಂದಣಿ ಕಾಲಾವಧಿಯನ್ನು 45 ದಿನಗಳು ಹಾಗೂ ನೋಂದಣಿಯೊಂದಿಗೆ ಖರೀದಿ ಪ್ರಕ್ರಿಯೆಯು 90 ದಿನಗಳವರೆಗೆ ನಿಗದಿಪಡಿಸಲಾಗಿರುತ್ತದೆ. ಪ್ರಯುಕ್ತ, ತಾಲ್ಲೂಕಿನ ರೈತ ಬಾಂಧವರು ಕೂಡಲೇ ಖರೀದಿ ಕೇಂದ್ರಗಳಿಗೆ ತೆರಳಿ ಸರದಿಯ ಪ್ರಕಾರ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಲು ಮತ್ತು ತಮ್ಮ ಹುಟ್ಟುವಳಿಯನ್ನು ಮಾರಾಟ ಮಾಡಿ ಸರ್ಕಾರದ ಯೋಜನೆಯ ಲಾಭ ಪಡೆದುಕೊಳ್ಳಲು ಪ್ರಕಟಣೆ ತಿಳಿಸಿದೆ.
****

Get real time updates directly on you device, subscribe now.

Comments are closed.

error: Content is protected !!