ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಮಾನವ ಸರಪಳಿ ಕಾರ್ಯಕ್ರಮ ಯಶಸ್ವಿಗೆ ಶ್ರಮಿಸಿ: ಸಿದ್ರಾಮೇಶ್ವರ
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ವಿವಿಧ ಇಲಾಖೆಗಳ ಸಹಯೋಗದಲ್ಲಿ ಸೆ.15ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಕೊಪ್ಪಳ ಜಿಲ್ಲೆಯಲ್ಲಿ ಮಾನವ ಸರಪಳಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಈ ಮಾನವ ಸರಪಳಿ ಕಾರ್ಯಕ್ರಮ ಹಾದುಹೋಗುವ ಗ್ರಾಮ ಪಂಚಾಯತಿ, ನಗರ ಪ್ರದೇಶದ ಎಲ್ಲ ಪ್ರಾಥಮಿಕ ಶಾಲೆಗಳ 06 ರಿಂದ 10ನೇ ತರಗತಿ, ಪಿಯುಸಿ, ಪದವಿ ವಿದ್ಯಾರ್ಥಿಗಳು, ಗ್ರಾಮ ಪಂಚಾಯತಿ ಮತ್ತು ನಗರಸಭೆ ಪಟ್ಟಣ ಪಂಚಾಯತಿ ಚನಾಯಿತ ಪ್ರತಿನಿಧಿಗಳು, ಗ್ರಾಮ ಪಂಚಾಯತಿಯ ಮಹಿಳಾ ಒಕ್ಕೂಟದ ಸದಸ್ಯರು, ನಗರ ಪ್ರದೇಶದ ವಿವಿಧ ಮಹಿಳಾ ಒಕ್ಕೂಟದ ಸದಸ್ಯರು, ನರೇಗಾ ಕೂಲಿಕಾರರು ಮತ್ತು ಸರ್ಕಾರದ ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳು, ಹಾಸ್ಟೆಲ್‌ನಲ್ಲ್ಲಿರುವ ವಿದ್ಯಾರ್ಥಿಗಳು, ಜಿಲ್ಲೆಯ ಎಲ್ಲ ಸರ್ಕಾರಿ ಇಲಾಖೆಗಳ ಅಧಿಕಾರಿಗಳು, ಸರ್ವ ಸಿಬ್ಬಂದಿ ಸಾರ್ವಜನಿಕರು, ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತೀರುವ ಕಾರ್ಮಿಕರು ಮಾನವ ಸರಪಳಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಕ್ರಮ ಕೈಗೊಳ್ಳಬೇಕು ಎಂದು ಸೂಚನೆ ನೀಡಿದರು.
ಸೆ.15ರ ಬೆಳಿಗ್ಗೆ 9 ಗಂಟೆಗೆ ಕೊಪ್ಪಳ ನಗರದ ಅಶೋಕ ವೃತ್ತದಲ್ಲಿ “ಸಂವಿಧಾನ ಪೀಠಿಕೆ ಓದು” ಕಾರ್ಯಕ್ರಮವನ್ನು ಆಯೋಜಿಸಲು ತಿರ್ಮಾನಿಸಲಾಗಿದ್ದು, ಈ ಕಾರ್ಯಕ್ರಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು, ವಿಧಾನಸಭೆ ಹಾಗೂ ವಿಧಾನ ಪರಿಷತ್ ಶಾಸಕರು, ಸಂಸದರು, ಜಿಲ್ಲಾಧಿಕಾರಿಗಳು ಹಾಗೂ ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಪಾಲ್ಗೋಳ್ಳಲಿದ್ದಾರೆ. ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಮಾನವ ಸರಪಳಿ ಕಾರ್ಯಕ್ರಮ ಆಯೋಜನೆಗಾಗಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಗ್ರಾ.ಪಂ ವಾಹನ ಮೂಲಕ ಹಾಗೂ ನಗರ ಪ್ರದೇಶ ವ್ಯಾಪ್ತಿಯಲ್ಲಿ ನಗರ ಸಭೆ ವಾಹನ ಮೂಲಕ ಪ್ರಚಾರ ಕೈಗೊಳ್ಳಬೇಕು. ಕಾರ್ಯಕ್ರಮಕ್ಕೆ ಆಗಮಿಸುವ ಶಾಲಾ ವಿದ್ಯಾರ್ಥಿಗಳಿಗೆ ಶಾಲೆಯಲ್ಲಿ ಬೆಳಗಿನ ಉಪಹಾರ ವ್ಯವಸ್ಥೆ ಮಾಡಲು, ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರಿಗೆ ಅಲ್ಪೋಪಹಾರದ ವ್ಯವಸ್ಥೆ ಮತ್ತು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಕ್ರಮ ಕೈಗೊಳ್ಳಿ. ಭದ್ರತೆ ಹಿತದೃಷ್ಟಿಯಿಂದ ಮಾನವ ಸರಪಳಿ ಕಾರ್ಯಕ್ರಮ ಜರುಗುವ ಸ್ಥಳಗಳಲ್ಲಿ ಸೂಕ್ತ ಪೋಲಿಸ್ ಬಂದೋಬಸ್ತ ಒದಗಿಸಲು ಪೋಲಿಸ್ ಇಲಾಖೆಯವರು ಕ್ರಮ ವಹಿಸಬೇಕು. ಒಟ್ಟಾರೆ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಮಾನವ ಸರಪಳಿ ಕಾರ್ಯಕ್ರಮಕ್ಕೆ ಎಲ್ಲರೂ ಕೈಜೋಡಿಸಿ ಕಾರ್ಯಕ್ರಮವನ್ನು ಸಮಪರ್ಕವಾಗಿ ಹಮ್ಮಿಕೊಂಡು ಯಶಸ್ವಿಗೊಳಿಸಬೇಕು ಎಂದರು.
ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳಾದ ಮಲ್ಲಿಕಾರ್ಜುನ ತೊದಲಬಾಗಿ, ಸೆ.15ರಂದು ಮುಂಜಾನೆ 08.30 ಗಂಟೆಯಿಂದ ಕೊಪ್ಪಳ ಜಿಲ್ಲೆಯ ರಾಜ್ಯ ಹೆದ್ದಾರಿ ಬೆಳಗಟ್ಟಿ (ಹಟ್ಟಿ ಗ್ರಾಮಪಂಚಾಯತಿ) ಗ್ರಾಮದಿಂದ ಪ್ರಾರಂಭವಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿನ ಕೊಪ್ಪಳ ಭೌಗೋಳಿಕ ಸರಹದ್ದಾದ ಮುನಿರಾಬಾದ್ ಡ್ಯಾಮ್ ವರೆಗೆ ಒಟ್ಟು 53 ಕಿಮೀ ಮಾನವ ಸರಪಳಿ ರಚಿಸಲು ಉದ್ದೇಶಿಸಲಾಗಿರುತ್ತದೆ. ಪ್ರತಿ ಕಿ.ಮೀ ಮಾನವ ಸರಪಳಿಗೆ ಸುಮಾರು 1000 ಜನ ಅವಶ್ಯವಿದ್ದು, ಒಟ್ಟು 53000 ವಿದ್ಯಾರ್ಥಿಗಳು, ಸಾರ್ವಜನಿಕರು ಬೇಕಾಗುವುದು. ಮಾನವ ಸರಪಳಿ ಹಾದುಹೋಗುವ ಗ್ರಾಮ ಪಂಚಾಯತಿ ವ್ಯಾಪ್ತಿಯ ಪ್ರತಿಯೊಂದು ಗ್ರಾಮಕ್ಕೆ ಒಂದರಂತೆ ವಿದ್ಯಾರ್ಥಿಗಳು, ಸಾರ್ವಜನಿಕರನ್ನು ಕರೆತರಲು ಸೂಕ್ತ ವಾಹನ ವ್ಯವಸ್ಥೆ ಕಲ್ಪಿಸಿರುವದಾಗಿ ತಿಳಿಸಿದರು. ಕಾರ್ಯಕ್ರಮ ಯಶಸ್ವಿಗೊಳಿಸಲು ಮಾನವ ಸರಪಳಿ ಹಾದುಹೋಗುವ ಗ್ರಾಮ, ಪಟ್ಟಣದಲ್ಲಿ ಪ್ರತಿ 100 ಮೀಟರ್‌ಗೆ ಒಬ್ಬರಂತೆ ನೋಡಲ್ ಅಧಿಕಾರಿಗಳು, ಪ್ರತಿ ಒಂದು ಕಿ.ಮೀ ಒಬ್ಬರಂತೆ ತಾಲ್ಲೂಕು ಮಟ್ಟದ ಅಧಿಕಾರಿಗಳನ್ನು ತಾಲ್ಲೂಕು ನೋಡಲ್ ಆಫಿಸರ್ ಹಾಗೂ ಪ್ರತಿ 03 ಕಿ.ಮೀ.ಗೆ ಒಬ್ಬರಂತೆ ಜಿಲ್ಲಾ ಮಟ್ಟದ ಅಧಿಕಾರಿಗಳನ್ನು ಜಿಲ್ಲಾ ನೋಡಲ್ ಅಧಿಕಾರಿಗಳೆಂದು ನೇಮಕ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಈ ಕಾರ್ಯಕ್ರಮಕ್ಕೆ ಆಗಮಿಸುವ ವಿದ್ಯಾರ್ಥಿಗಳು, ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಪ್ರತಿ 05 ಕಿ.ಮೀ ಒಂದರಂತೆ ಅಂಬ್ಯೂಲೆನ್ಸ್ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ರೇಷ್ಮಾ ಹಾನಗಲ್, ಜಂಟಿ ಕೃಷಿ ನಿರ್ದೇಶಕರಾದ ಟಿ.ಎಸ್.ರುದ್ರೇಶಪ್ಪ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ರಾಜು ತಳವಾರ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಶ್ರೀಶೈಲ ಬಿರಾದಾರ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಜಗದೀಶ್ ಜಿ.ಹೆಚ್. ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ತಾ.ಪಂ ಇ.ಓ.ಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
Comments are closed.