ಕರ್ನಾಟಕ ವಿಧಾನಮಂಡಲದ ಎಸ್.ಸಿ., ಎಸ್‌ಟಿ ಕಲ್ಯಾಣ ಸಮಿತಿ ಸಭೆಗೆ ಸೂಕ್ತ ಮಾಹಿತಿ ನೀಡಿ: ಎಡಿಸಿ

Get real time updates directly on you device, subscribe now.

: ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ (ಎಸ್.ಸಿ., ಎಸ್.ಟಿ) ಕಲ್ಯಾಣ ಸಮಿತಿಯ ಸಭೆಗೆ ಕೊಪ್ಪಳ ಜಿಲ್ಲೆಯ ಅನುಷ್ಠಾನ ಇಲಾಖೆಗಳು ಎಸ್.ಸಿ., ಎಸ್.ಟಿ ಯೋಜನೆಗಳ ಪ್ರಗತಿ ವರದಿಯನ್ನು ನಿಗದಿತ ನಮೂನೆಯಲ್ಲಿ ಸಲ್ಲಿಸುವಂತೆ ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕರ್ನಾಟಕ ವಿಧಾನಮಂಡಲದ ಎಸ್.ಸಿ., ಎಸ್‌ಟಿ ಕಲ್ಯಾಣ ಸಮಿತಿ ಪ್ರಗತಿ ಪರಿಶೀಲನಾ ಸಭೆಯ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೆಪ್ಟೆಂಬರ್ 10ರಂದು ಜಿಲ್ಲೆಯ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು.
ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಅಧ್ಯಕ್ಷರಾದ ಪಿ.ಎಂ. ನರೇಂದ್ರಸ್ವಾಮಿ ಇವರ ನೇತೃತ್ವದ 19 ಜನ ಸದಸ್ಯರನ್ನೊಳಗೊಂಡ ಸಮಿತಿಯು ಇದೇ ಸೆಪ್ಟೆಂಬರ್ 19 ರಿಂದ 21ರ ವರೆಗೆ ಕಲಬುರಗಿ ವಿಭಾಗದ ಜಿಲ್ಲೆಗಳಲ್ಲಿ ಪ್ರವಾಸ ಕೈಗೊಂಡು, ಕಲಬುರಗಿ ವಿಭಾಗದ ಜಿಲ್ಲೆಗಳಾದ ಕಲಬುರಗಿ, ಯಾದಗಿರಿ, ಬೀದರ, ರಾಯಚೂರು, ಕೊಪ್ಪಳ, ಬಳ್ಳಾರಿ ಹಾಗೂ ವಿಜಯನಗರ ಜಿಲ್ಲೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದವರ ಅಭಿವೃದ್ಧಿ, ಕಲ್ಯಾಣ, ಏಳಿಗೆಗೆ ಹಮ್ಮಿಕೊಂಡಿರುವ ಕಾರ್ಯಕ್ರಮಗಳು ಹಾಗೂ ಯೋಜನೆಗಳ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಸಲಿದೆ. ರಾಯಚೂರು ಮತ್ತು ಕೊಪ್ಪಳ ಜಿಲ್ಲೆಗಳ ಪ್ರಗತಿ ಪರಿಶೀಲನಾ ಸಭೆಯು ಸೆ.20ರಂದು ಬೆಳಿಗ್ಗೆ 10.30 ಗಂಟೆಗೆ ರಾಯಚೂರಿನಲ್ಲಿ ಜರುಗಲಿದೆ ಎಂದರು.
ಕರ್ನಾಟಕ ವಿಧಾನಮಂಡಲದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯು ಕೊಪ್ಪಳ ಜಿಲ್ಲೆಗೆ ಸಂಬಂಧಿಸಿದಂತೆ ಎಲ್ಲ ಅನುಷ್ಠಾನ ಇಲಾಖೆಗಳಲ್ಲಿ ಕಳೆದ 03 ವರ್ಷಗಳಲ್ಲಿ ಸಾಮಾನ್ಯ ಕಾರ್ಯಕ್ರಮಗಳು ಮತ್ತು ಎಸ್.ಸಿ.ಎಸ್.ಪಿ., ಟಿ.ಎಸ್.ಪಿ ಯೋಜನೆಗಳ ಅಡಿಯಲ್ಲಿ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಸಮುದಾಯದವರ ಕಲ್ಯಾಣ ಕಾರ್ಯಕ್ರಮಗಳು, ವಿವಿಧ ಯೋಜನೆಗಳ ಅನುಷ್ಠಾನದ ಬಗ್ಗೆ ಹಲವು ಪ್ರಶ್ನಾವಳಿಗಳ ರಿತ್ಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಲಿರುವದರಿಂದ ತಮ್ಮ ಇಲಾಖೆಗೆ ಸಂಬಂಧಿಸಿದಂತೆ ಕಳೆದ 03 ವರ್ಷಗಳಲ್ಲಿ ಜಿಲ್ಲೆಗೆ ಮಂಜೂರಾದ, ಬಿಡುಗಡೆಯಾದ, ಖರ್ಚಾದ ಮತ್ತು ಉಳಿಕೆಯಾದ ಅನುದಾನದ ವಿವರಗಳನ್ನು ಮತ್ತು ಹಮ್ಮಿಕೊಂಡಿರುವ ಕಾರ್ಯಕ್ರಮಗಳ ವಿವರಗಳನ್ನು ಯೋಜನಾವಾರು ತಯಾರಿಸಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರ ಕಚೇರಿಗೆ ಕಡ್ಡಾಯವಾಗಿ ಸಲ್ಲಿಸಬೇಕು ಎಂದು ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ರೇಷ್ಮಾ ಹಾನಗಲ್, ಜಂಟಿ ಕೃಷಿ ನಿರ್ದೇಶಕರಾದ ಟಿ.ಎಸ್.ರುದ್ರೇಶಪ್ಪ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ರಾಜು ತಳವಾರ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಶ್ರೀಶೈಲ ಬಿರಾದಾರ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಜಗದೀಶ್ ಜಿ.ಹೆಚ್. ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Get real time updates directly on you device, subscribe now.

Comments are closed.

error: Content is protected !!