ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಪ್ರತಿಯೊಬ್ಬರು ಭಾಗವಹಿಸಿ: ಸಚಿವರಾದ ಶಿವರಾಜ್ ಎಸ್ ತಂಗಡಗಿ ಮನವಿ
ರಾಜ್ಯ ಸರ್ಕಾರವು ಇದೇ ಸೆಪ್ಟೆಂಬರ್ 15ರಂದು ಪ್ರಜಾಪ್ರಭುತ್ವ ದಿನವನ್ನು ವಿಶೇಷವಾಗಿ ಆಚರಿಸಲು ನಿರ್ಧರಿಸಿದ್ದು, ಇದರ ಅಂಗವಾಗಿ ಮಾನವ ಸರಪಳಿ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದೆ. ಕಾರ್ಯಕ್ರಮದಲ್ಲಿ ಜಿಲ್ಲೆಯ ಪ್ರತಿಯೊಬ್ಬ ನಾಗರಿಕರು ಭಾಗವಹಿಸಿ ಸಂಭ್ರಮದಿಂದ ಯಶಸ್ವಿಗೊಳಿಸಬೇಕೆಂದು ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ
ಶಿವರಾಜ್ ಎಸ್ ತಂಗಡಗಿ ಅವರು ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಬೀದರದಿಂದ ಚಾಮರಾಜನಗರದವರೆಗೆ ಏಕಕಾಲಕ್ಕೆ ರಾಜ್ಯದ ಎಲ್ಲ 31ಜಿಲ್ಲೆಗಳಲ್ಲಿ ಮಾನವ ಸರಪಳಿ ರೂಪಿಸುವ ಮೂಲಕ ಪ್ರಜಾಪ್ರಭುತ್ವದ ಏಕತೆ, ಸದೃಢತೆ, ಸಾಮರಸ್ಯ ಸಾರುವ ಸಂಕೇತವಾಗಿ ಮಾನವ ಸರಪಳಿ ರೂಪಿಸಲಾಗುತ್ತಿದೆ. ಜಿಲ್ಲೆಯ ಎಲ್ಲರೂ ಈ ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಜಿಲ್ಲೆಯ ಜನತೆಯಲ್ಲಿ ಸಚಿವರು ಮನವಿ ಮಾಡಿದ್ದಾರೆ.
Comments are closed.