ಮಾನವ ಸರಪಳಿ ಕಾರ್ಯಕ್ರಮಕ್ಕೆ ನಿಯೋಜಿತ ಸಮಿತಿಗಳು ವ್ಯವಸ್ಥಿತವಾಗಿ ಕಾರ್ಯನಿರ್ವಹಿಸಿ: ನಲಿನ್ ಅತುಲ್

Get real time updates directly on you device, subscribe now.

 ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆಪ್ಟಂಬರ್ 15ರ ಮಾನವ ಸರಪಳಿ ಕಾರ್ಯಕ್ರಮವನ್ನು ಸುವ್ಯವಸ್ಥಿತವಗಿ ಹಮ್ಮಿಕೊಳ್ಳಲು ನಿಯೋಜಿತ ಸಮಿತಿಗಳು ವ್ಯವಸ್ಥಿತವಾಗಿ ಕಾರ್ಯನಿರ್ವಹಿಸುವಂತೆ ಕೊಪ್ಪಳ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಾನವ ಸರಪಳಿ ಕಾರ್ಯಕ್ರಮಕ್ಕಾಗಿ ರಚನೆ ಮಾಡಲಾದ ವಿವಿಧ ಸಮಿತಿಗಳ ಅಧ್ಯಕ್ಷರು ಹಾಗೂ ಸದಸ್ಯರೊಂದಿಗೆ ಜಿಲ್ಲಾಡಳಿತ ಭವನದ ಕೆಸ್ವಾನ್ ಸಭಾಂಗಣದಲ್ಲಿ ಸೆಪ್ಟೆಂಬರ್ 12ರಂದು ಹಮ್ಮಿಕೊಂಡಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಇದೇ ಸೆಪ್ಟಂಬರ್ 15ರಂದು ನಡೆಯಲಿರುವ ಮಾನವ ಸರಪಳಿ ಕಾರ್ಯಕ್ರಮದ ಯಶಸ್ವಿ ನಿರ್ವಹಣೆಗಾಗಿ
ಸಾರಿಗೆ ಸಮಿತಿ, ಆಹಾರ ಮತ್ತು ಕುಡಿಯುವ ನೀರು ಪೂರೈಕೆ ಸಮಿತಿ, ಸುರಕ್ಷತಾ ಸಮಿತಿ, ಆರೋಗ್ಯ ಸಮಿತಿ, ನೈಮಲೀಕರಣ ಮತ್ತು ಶುಚಿತ್ವ ಸಮಿತಿ ಹಾಗೂ ಪ್ರಚಾರ ಸಮಿತಿಗಳನ್ನು ರಚಿಸಲಾಗಿದ್ದು, ಎಲ್ಲ ಸಮಿತಿಗಳು ಪರಸ್ಪರ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಮಾನವ ಸರಪಳಿಯಲ್ಲಿ ಪಾಲ್ಗೊಳ್ಳುವ ಶಾಲಾ ಕಾಲೇಜುಗಳ ಮಕ್ಕಳು ಹಾಗೂ ಸಾರ್ವಜನಿಕರಿಗೆ ಅಗತ್ಯ ಸಾರಿಗೆ ವ್ಯವಸ್ಥೆಯಾಗಬೆಕು. ಮಾನವ ಸರಪಳಿ ವೇಳೆ ರಸ್ತೆ ಸಂಚಾರಕ್ಕೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಇದರ ಜೊತೆಗೆ ಕಾರ್ಯಕ್ರಮಕ್ಕೆ ಕರೆತರುವ ಸಂದರ್ಭದಲ್ಲಿ ಮಕ್ಕಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಸಮಿತಿಗಳಿಗೆ ವಹಿಸಲಾದ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ಪಾಲಿಸಬೇಕು. ಒಂದು ವೇಳೆ ಕಾರ್ಯಕ್ರಮ ಅನುಷ್ಟಾನದಲ್ಲಿ ವಿಫಲತೆ, ಬೇಜವಾಬ್ದಾರಿ ತೋರಿದ ಅಧಿಕಾರಿ ಮತ್ತು ಸಿಬ್ಬಂದಿಗಳ ವಿರುದ್ಧ ನಿಯಮಾಮಸಾರ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಸಭೆಯಲ್ಲಿ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗಳಾದ ಡಾ.ರಾಮ್ ಎಲ್ ಅರಸಿದ್ಧಿ, ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ, ಜಂಟಿ ಕೃಷಿ ನಿರ್ದೇಶಕರಾದ ಟಿ.ಎಸ್.ರುದ್ರೇಶಪ್ಪ, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ರೇಷ್ಮಾ ಹಾನಗಲ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರಾದ ರಾಜು ತಳವಾರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರರು, ಇ.ಓ.ಗಳು ಹಾಗೂ ಮತ್ತಿತರರಿದ್ದರು.

Get real time updates directly on you device, subscribe now.

Comments are closed.

error: Content is protected !!