ಕೊಪ್ಪಳದಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ
ಕೊಪ್ಪಳ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಕೊಪ್ಪಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಾರ್ಯಾಲಯ ಇವರ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ನಗರದ ಪ್ಯಾಟಿ ಈಶ್ವರ ದೇವಸ್ಥಾನ ಸಭಾಂಗಣದಲ್ಲಿ ರಾಷ್ಟ್ರೀಯ ಪೋಷಣ್ ಮಾಸಾಚರಣೆ ಕಾರ್ಯಕ್ರಮ ನಡೆಯಿತು.
ಬಳಿಕ ಅವರು ಮಾತನಾಡಿ, ಪೌಷ್ಠಿಕ ಆಹಾರದ ಸೇವನೆ ಮಾಡುವುದರಿಂದ ರೋಗರುಜಿನುಗಳಿಂದ ದೂರ ಇರಬಹುದು ಎಂದು ತಿಳಿಸಿದರು.
ನಗರಸಭೆ ಅಧ್ಯಕ್ಷರಾದ ಅಮ್ಜದ್ ಪಟೇಲ್ ಅವರು ಮಾತನಾಡಿ, ಪೋಷಣ್ ಮಾಸಾಚರಣೆಯ ಪ್ರಮುಖ ಅಂಶಗಳಾದ ರಕ್ತಹೀನತೆ ತಡೆಯುವುದು, ಪೋಷಣ್ ಅಭಿಯಾನ ಯೋಜನೆಯಡಿ ಬರುವ ಪ್ರತಿಯೊಂದು ಸೌಲಭ್ಯವನ್ನು ಪಡೆದುಕೊಂಡು ಅಪೌಷ್ಟಿಕತೆಯನ್ನು ತೊಲಗಿಸುವಲ್ಲಿ ಮಹಿಳೆಯರ ಪಾತ್ರ ಬಹಳ ಪ್ರಮುಖವಾಗಿದೆ ಎಂದು ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ತಿಪ್ಪಣ್ಣ ಪಿ ಸಿರಸಗಿ ಅವರು ಮಾತನಾಡಿ, ಅಪೌಷ್ಟಿಕಮುಕ್ತ ದೇಶವನ್ನಾಗಿ ಮಾಡಲು ನಾವೆಲ್ಲರೂ ಕೈ ಜೋಡಿಸೋಣ ಎಂದು ಹೇಳಿದರು. ಪೌಷ್ಟಿಕತೆಯ ಸಿರಿ ಧಾನ್ಯಗಳ ಬಳಕೆ ಕುರಿತು ಅಂಗನವಾಡಿಯಲ್ಲಿ ವಿತರಿಸುವ ಆಹಾರ ಪದಾರ್ಥಗಳನ್ನು ಉಪಯೋಗಿಸುವಂತೆ ಸಾರ್ವಜನಿಕರಿಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಒಂದನೇ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ, ಮಕ್ಕಳಿಗೆ ಅನ್ನಪ್ರಾಶನ ಕಾರ್ಯಕ್ರಮ, ನಿವೃತ್ತಿ ಹೊಂದಿದ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರಿಗೆ ಸನ್ಮಾನ ಕಾರ್ಯಕ್ರಮ, ಬೇಬಿ ಶೋ ಸೇರಿದಂತೆ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.
ಈ ಸಂಧರ್ಭದಲ್ಲಿ ಕೊಪ್ಪಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ರೋಹಿಣಿ ಕೊಟಗಾರ, ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ರೂಪಾ ಗಂಧದ, ಶಿವಶರಣಪ್ಪ ಗದ್ದಿ ಸೇರಿದಂತೆ ವಲಯ ಮೇಲ್ವಿಚಾರಕರು, ಪೋಷಣ್ ಅಭಿಯಾನ ಯೋಜನೆಯ ತಾಲ್ಲೂಕು ಸಂಯೋಜಕರು, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಹಾಗೂ ಗರ್ಭಿಣಿಯರು ಊರಿನ ಸದಸ್ಯರು ಉಪಸ್ಥಿತರಿದ್ದರು.
Comments are closed.