ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿ ಅರ್ಜಿ ಆಹ್ವಾನ: ಅವಧಿ ವಿಸ್ತರಣೆ
2024-25ನೇ ಸಾಲಿನಲ್ಲಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಕೊಪ್ಪಳ ವತಿಯಿಂದ ಜಿಲ್ಲೆಯ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ ಮತ್ತು ಪಾರ್ಸಿ) ವಿದ್ಯಾರ್ಥಿಗಳಿಗೆ ಪ್ರತಿಷ್ಠಿತ ಸಂಸ್ಥೆಯ ಮೂಲಕ 10 ತಿಂಗಳ ವಸತಿ ಸಹಿತ ಐ.ಎ.ಎಸ್/ಕೆ.ಎ.ಎಸ್ ಸ್ಫರ್ಧಾತ್ಮಕ ಪರೀಕ್ಷೆಗಳ ಪರೀಕ್ಷಾ ಪೂರ್ವ ತರಬೇತಿ ನೀಡಲು ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆ ಅವಧಿಯನ್ನು ಸೆಪ್ಟೆಂಬರ್ 20ರವರೆಗೆ ವಿಸ್ತರಿಸಲಾಗಿದೆ.
ಆಸಕ್ತರು ಸೇವಾಸಿಂಧು ಪೋರ್ಟಲ್ Sevasindhuservices. karnataka.gov.in ಮೂಲಕ ಆನ್‌ಲೈನ್ ಅರ್ಜಿಯನ್ನು ಸೆಪ್ಟೆಂಬರ್ 20 ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ನಿರ್ದೇಶನಾಲಯದ ಸಹಾಯವಾಣಿ ಸಂ :8277799990 ಗೆ ಕರೆ ಮಾಡಿ ಮಾಹಿತಿಯನ್ನು ಪಡೆದುಕೊಳ್ಳಬಹುದು ಹಾಗೂ ಜಿಲ್ಲಾ ಅಲ್ಪಸಂಖ್ಯಾತರ ಕಚೇರಿ ಮೌಲಾನಾ ಆಜಾದ್ ಭವನ ಹೊಸಪೇಟೆ ರಸ್ತೆ ಕೊಪ್ಪಳ ಹಾಗೂ ಎಲ್ಲಾ ತಾಲ್ಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಸಕ್ತರು ಸೇವಾಸಿಂಧು ಪೋರ್ಟಲ್ Sevasindhuservices.
Comments are closed.