ಮಾನವ ಸರಪಳಿ ಕಾರ್ಯಕ್ರಮಕ್ಕೆ ಸಿದ್ಧತೆ ಪೂರ್ಣ: ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್

0

Get real time updates directly on you device, subscribe now.

: ಕೊಪ್ಪಳ ಜಿಲ್ಲೆಯಲ್ಲಿ ಐತಿಹಾಸಿಕವಾಗಿ ಸೆಪ್ಟೆಂಬರ್ 15ರಂದು ನಡೆಯಲಿರುವ ಅಂತಾರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆಯ ಮಾನವ ಸರಪಳಿ ಕಾರ್ಯಕ್ರಮಕ್ಕೆ ಎಲ್ಲ ರೀತಿಯ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಹೇಳಿದರು.
ಜಿಲ್ಲಾಡಳಿತ ಭವನದಲ್ಲಿನ ಕೇಸ್ವನ್ ಹಾಲನಲ್ಲಿ ಸೆಪ್ಟೆಂಬರ್ 13ರಂದು ಪತ್ರಿಕಾಗೋಷ್ಠಿ ನಡೆಸಿ ಅವರು ಮಾತನಾಡಿದರು.
ರಾಜ್ಯದ ಬೀದರ ಜಿಲ್ಲೆಯಿಂದ ಚಾಮರಾಜನಗರ ಜಿಲ್ಲೆವರೆಗೆ ಒಟ್ಟು 2500 ಕಿ.ಮೀ ಮಾನವ ಸರಪಳಿ ರಚನೆಯ ಮೂಲಕ ಅಂತಾರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸಲಾಗುತ್ತದೆ. ಅದರಂತೆ ಕೊಪ್ಪಳ ಜಿಲ್ಲೆಯಲ್ಲಿ ಸಹ ಸೆಪ್ಟೆಂಬರ್ 15ರಂದು ಕೊಪ್ಪಳ ತಾಲೂಕಿನ ಹಟ್ಟಿ ಗ್ರಾಮ ಪಂಚಾಯತಿಯ ಬೆಳಗಟ್ಟಿ ಗ್ರಾಮದಿಂದ ಬೆಳಗ್ಗೆ 9.30ಕ್ಕೆ ಪ್ರಾರಂಭವಾಗಿ ಹಿರೇಸಿಂಧೋಗಿ, ಚಿಕ್ಕಿಸಿಂಧೋಗಿ, ಕೊಪ್ಪಳ ನಗರ, ಗಿಣಿಗೇರಾ, ಹೊಸಳ್ಳಿ ಮಾರ್ಗವಾಗಿ ಕೊಪ್ಪಳ ಭೌಗೋಳಿಕ ಸರಹದ್ದಾದ ಮುನಿರಾಬಾದ್ ಡ್ಯಾಮವರೆಗೆ ಜಿಲ್ಲೆಯಲ್ಲಿ ಒಟ್ಟು 53 ಕಿಲೋ ಮೀಟರ್ ಮಾನವ ಸರಪಳಿ ರಚನೆಯಾಗಲಿದೆ ಎಂದು ಅವರು ತಿಳಿಸಿದರು.
ಸೆಪ್ಟೆಂಬರ್ 15ರಂದು ಬೆಳಗ್ಗೆ 9.37ರಿಂದ 9.40ರವರೆಗೆ ನಾಡಗೀತೆ ನಡೆಯಲಿದೆ. ಬೆಳಗ್ಗೆ 9.40 ರಿಂದ 9.55ರವರೆಗೆ ಮುಖ್ಯ ಅತಿಥಿಗಳಿಂದ ಭಾಷಣ ನಡೆಯಲಿದೆ. ಬೆಳಗ್ಗೆ 9.55ರಿಂದ 9.57ರವರೆಗೆ ಸಂವಿಧಾನದ ಪ್ರಸ್ತಾವನೆ ಓದು ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ 9.57ರಿಂದ 9.59ರವರೆಗೆ ಮಾನವ ಸರಪಳಿಯಲ್ಲಿ ಕೈಕೈ ಹಿಡಿದು ನಿಲ್ಲಲಾಗುತ್ತದೆ. 10 ಗಂಟೆಗೆ ಮಾನವ ಸರಪಳಿಯಲ್ಲಿ ಎರಡು ಕೈಗಳನ್ನು ಮೇಲೆತ್ತಿ ಜೈಹಿಂದ ಜೈ ಕರ್ನಾಟಕ ಘೋಷಣೆ ಕೂಗಿ ಸರಪಳಿ ಕಾರ್ಯಕ್ರಮ ಮುಕ್ತಾಯವಾಗಲಿದೆ ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳು, ಸ್ವಸಹಾಯ ಸಂಘದ ಪ್ರತಿನಿಧಿಗಳು, ಹಾಲು ಒಕ್ಕೂಟದ ಸದಸ್ಯರು ಸೇರಿದಂತೆ ಆಯಾ ಕಡೆಗಿನ ಸಂಘ ಸಂಸ್ಥೆಗಳ ಪ್ರತಿನಿಧಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸೇರಲಿದ್ದಾರೆ. ಶಾಲಾ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ನೋಡಿಕೊಳ್ಳಲು ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದರು.
ಮಾನವ ಸರಪಳಿ ಹೊರಡುವ ಮಾರ್ಗಗಳ ಗ್ರಾಮ ಪಂಚಾಯತ್ ಚುನಾಯಿತ ಪ್ರತಿನಿಧಿಗಳು ಮತ್ತು ಪಿಡಿಓ ಅವರ ಸಹಭಾಗಿತ್ವದಲ್ಲಿ ಆಯಾ ಕಡೆಗಳಲ್ಲಿ ಕರ್ತವ್ಯ ನಿರ್ವಹಿಸಲು ಸೂಚಿಸಲಾಗಿದೆ. ಮಾನವ ಸರಪಳಿ ಆರಂಭವಾಗುವ ಸ್ಥಳದಿಂದ ಮುಕ್ತಾಯದ ಸ್ಥಳದವರೆಗೆ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲು ಜಿಲ್ಲಾ ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ.
ಮಾನವ ಸರಪಳಿ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ಪ್ರತಿ 5 ಕಿ.ಮೀಗೆ ಒಂದರAತೆ ಆಂಬ್ಯೂಲೆನ್ಸ್ ವ್ಯವಸ್ಥೆ ಮಾಡಲಾಗಿದೆ. ವಿದ್ಯಾರ್ಥಿ ಸಾರ್ವಜನಿಕರ ಹಿತಕ್ಕಾಗಿ ವೈದ್ಯಕೀಯ ಕಿಟ್‌ನೊಂದಿಗೆ ಮಹಿಳಾ ಶೂಶ್ರೂಕರನ್ನು ನೇಮಿಸಲಾಗಿದೆ.
ಈ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಹತ್ತಾರು ಬಾರಿ ಸಭೆ ನಡೆಸಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಆಯಾ ಗ್ರಾಮ ಪಂಚಾಯತ್‌ಗಳಲ್ಲಿ ಧ್ವನಿವರ್ಧಕ ಮೂಲಕ ಪ್ರಚಾರ ಮಾಡಲಾಗಿದೆ. ಎಲ್ಲ ಆಕಡೆಗಳಲ್ಲಿ ಬ್ಯಾನರ್ ಅಳವಡಿಸಿ ವ್ಯಾಪಕ ಪ್ರಚಾರ ಮಾಡಲಾಗಿದೆ.
ಮಾನವ ಸರಪಳಿ ಕಾರ್ಯಕ್ರಮವು ಎಲ್ಲಾ ಕಡೆಗೆ ಅಚ್ಚುಕಟ್ಟಾಗಿ ನಡೆಯುವ ನಿಟ್ಟಿನಲ್ಲಿ ಬೆಳಗಟ್ಟಿಯಿಂದ ಹೊಸಪೇಟೆ ಸರಹದ್ದಿನವರೆಗೆ ಮಾರ್ಕಿಂಗ್ ಮಾಡುವ ಕಾರ್ಯವು ಸಹ ಪೂರ್ಣಗೊಂಡಿದೆ ಎಂದು ತಿಳಿಸಿದರು.
ಸೆ.15ರಂದು ನಡೆಯುವ ಮಾನವ ಸರಪಳಿ ಕಾರ್ಯಕ್ರಮದಲ್ಲಿ ಕೊಪ್ಪಳ ತಾಲೂಕು, ಕೊಪ್ಪಳ ನಗರ ಸೇರಿದಂತೆ ಜಿಲ್ಲೆಯ ಎಲ್ಲಾ ಸಾರ್ವಜನಿಕರು ತಪ್ಪದೇ ಭಾಗವಹಿಸಿ ಕಾರ್ಯಕ್ರಮ ಯಶಗೊಳಿಸಬೇಕು ಎಂದು ಜಿಲ್ಲಾಧಿಕಾರಿಗಳು ಪತ್ರಿಕಾಗೋಷ್ಠಿಯ ಮೂಲಕ ಕೊಪ್ಪಳ ಜಿಲ್ಲೆಯ ಎಲ್ಲ ತಾಲೂಕಿನ ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಪತ್ರಿಕಾಗೋಷ್ಠಿಯಲ್ಲಿ ಸಹಾಯಕ ಆಯುಕ್ತರಾದ ಕ್ಯಾಪ್ಟನ್ ಮಹೇಶ ಮಾಲಗಿತ್ತಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ರಾಜು ತಳವಾರ ಇದ್ದರು

Get real time updates directly on you device, subscribe now.

Leave A Reply

Your email address will not be published.

error: Content is protected !!
%d bloggers like this: