ಕೊಪ್ಪಳ ಜಿಲ್ಲೆಯಲ್ಲಿ ಮಾನವ ಸರಪಳಿ: ರೂಟ್ ಮ್ಯಾಪ್ ಅಂತಿಮ
ಅಂತಾರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಸೆಪ್ಟಂಬರ್ 15ರಂದು ಕೊಪ್ಪಳ ಜಿಲ್ಲೆಯಲ್ಲಿ ನಡೆಸಲಾಗುವ ಮಾನವ ಸರಪಳಿ ಕಾರ್ಯಕ್ರಮಕ್ಕೆ ಕೊಪ್ಪಳ ಜಿಲ್ಲೆಯಲ್ಲಿ ರೂಟ್ ಮ್ಯಾಪ್‌ನ್ನು ಅಂತಿಮಗೊಳಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ತಿಳಿಸಿದ್ದಾರೆ.
ಸೆಪ್ಟೆಂಬರ್ 15ರಂದು ಮಾನವ ಸರಪಳಿ ಕಾರ್ಯಕ್ರಮವು ಕೊಪ್ಪಳ ತಾಲೂಕಿನ ಬೆಳಗಟ್ಟಿ ಗ್ರಾಮದಿಂದ ಬೆಳಗ್ಗೆ 9.30ಕ್ಕೆ ಪ್ರಾರಂಭವಾಗಿ ಹಿರೇಸಿಂಧೋಗಿ, ಚಿಕ್ಕಿಸಿಂಧೋಗಿ, ಕೊಪ್ಪಳ ನಗರ, ಗಿಣಿಗೇರಾ, ಹೊಸಳ್ಳಿ ಮಾರ್ಗವಾಗಿ ಕೊಪ್ಪಳ ಭೌಗೋಳಿಕ ಸರಹದ್ದಾದ ಮುನಿರಾಬಾದ್ ಡ್ಯಾಮವರೆಗೆ ಜಿಲ್ಲೆಯಲ್ಲಿ ಒಟ್ಟು 53 ಕಿಲೋ ಮೀಟರ್ ಮಾನವ ಸರಪಳಿಯನ್ನು ರಚನೆಯಾಗಲಿದೆ. ಈ ಮಾನವ ಸರಪಳಿಯ ಮುಖ್ಯ ಸಮಾರಂಭವು ಕೊಪ್ಪಳ ನಗರದ ಅಶೋಕ ಸರ್ಕಲನಲ್ಲಿ ನಡೆಯಲಿದೆ ಎಂದು ಅವರು ತಿಳಿಸಿದ್ದಾರೆ.
Comments are closed.