ಸೆ.14, 15ರಂದು ನಿಗದಿಯಾಗಿದ್ದ ಪರೀಕ್ಷೆ ಮುಂದೂಡಿಕೆ

Get real time updates directly on you device, subscribe now.

ಸೆ.14ರಂದು ನಡೆಯಬೇಕಿದ್ದ ಕನ್ನಡ ಭಾಷಾ ಪರೀಕ್ಷೆ ಮತ್ತು ಸೆಪ್ಟೆಂಬರ್ 15ರಂದು ನಡೆಯಬೇಕಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಮುಂದೂಡಲಾಗಿದೆ.
10-09-2024ರ ಕರ್ನಾಟಕ ಸರ್ಕಾರದ ನಡಾವಳಿಯಲ್ಲಿ ‘ರಾಜ್ಯ ಸಿವಿಲ್ ಸೇವೆಗಳಲ್ಲಿನ ವಿವಿಧ ಇಲಾಖೆಗಳ ಗ್ರೂಪ್ ಬಿ ಮತ್ತು ಸಿ ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಈಗಾಗಲೇ ಹೊರಡಿಸಲಾಗಿರುವ ಅಧಿಸೂಚನೆಗಳಿಗೆ ಹಾಗೂ ಮುಂದಿನ ಒಂದು ವರ್ಷದಲ್ಲಿ ಹೊರಡಿಸಲಿರುವ ಅಧಿಸೂಚನೆಗಳಿಗೆ ಸಂಬAಧಿಸಿದAತೆ ಎಲ್ಲಾ ಪ್ರವರ್ಗಗಳ ಅಭ್ಯರ್ಥಿಗಳಿಗೆ ಒಂದು ಬಾರಿಗೆ ಅನ್ವಯವಾಗುವಂತೆ ಗರಿಷ್ಠ ವಯೋಮಿತಿಯಲ್ಲಿ 3 ವರ್ಷಗಳ ಸಡಿಲಿಕೆಯನ್ನು ನೀಡಿ ಆದೇಶಿಸಿದೆ’ ಎಂದು ತಿಳಿಸಲಾಗಿರುತ್ತದೆ.
ಮೇಲ್ಕಂಡ ಸರ್ಕಾರದ ಆದೇಶದ ಹಿನ್ನೆಲೆಯಲ್ಲಿ 13-03-2024ರನ್ವಯ ಅಧಿಸೂಚಿಸಿರುವ ಎಲ್ಲಾ ಹುದ್ದೆಗಳಿಗೂ ವಯೋಮಿತಿ ಸಡಿಲಿಕೆ ಅನ್ವಯಿಸಿ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ನೀಡಬೇಕಿರುತ್ತದೆ. ಆದ್ದರಿಂದ ಸೆ.14ರಂದು ನಡೆಯಬೇಕಿದ್ದ ಕನ್ನಡ ಭಾಷಾ ಪರೀಕ್ಷೆ ಮತ್ತು ಸೆಪ್ಟೆಂಬರ್ 15ರಂದು ನಡೆಯಬೇಕಿದ್ದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಈ ಅಧಿಸೂಚನೆಯಲ್ಲಿನ ಹುದ್ದೆಗಳಿಗೆ ಇತರೆ ದಿನಾಂಕಗಳಲ್ಲಿ ನಿಗದಿಪಡಿಸಲಾಗಿದ್ದ ನಿರ್ದಿಷ್ಟ ಪತ್ರಿಕೆಗಳ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಸಹ ಮುಂದೂಡಲಾಗಿದೆ. ಸರ್ಕಾರದ ಆದೇಶದಂತೆ ವಯೋಮಿತಿ ಸಡಿಲಿಕೆ ನೀಡಿ, ಅಭ್ಯರ್ಥಿಗಳಿಗೆ ಹೊಸದಾಗಿ ಅರ್ಜಿ ಸಲ್ಲಿಸಲು ಕಾಲಾವಕಾಶ ಮುಕ್ತಾಯವಾದ ನಂತರ ಪರಿಷ್ಕೃತ ಪರೀಕ್ಷಾ ದಿನಾಂಕಗಳನ್ನು ತಿಳಿಸಲಾಗುವುದು ಎಂದು ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿಗಳು ತಿಳಿಸಿದ್ದಾರೆ. ಈ ಬಗ್ಗೆ ಈ ಲಿಂಕ್  https://kpsc.kar.nic.in/exam_14n15.pdf  ಬಳಸಿ ಮಾಹಿತಿ ಪಡೆಯಬಹುದಾಗಿದೆ.

Get real time updates directly on you device, subscribe now.

Comments are closed.

error: Content is protected !!