ಕುಣಿಕೇರಿ ಗ್ರಾ.ಪಂ.ಗೆ ಅಧ್ಯಕ್ಷ-ಉಪಾಧ್ಯಕ್ಷರ ಅವಿರೋಧ ಆಯ್ಕೆ
ಕೊಪ್ಪಳ: ತಾಲ್ಲೂಕಿನ ಕುಣಿಕೇರಿ ಗ್ರಾಮ ಪಂಚಾಯತಿಗೆ ಎರಡನೇ ಅವಧಿಗೆ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಮಂಗಳವಾರ ಅವಿರೋಧ ಆಯ್ಕೆ ಮಾಡಲಾಯಿತು.
ಈ ವೇಳೆ ಚುನಾವಣಾಧಿಕಾರಿಗಳಾದ ಟಿ.ಎಸ್.ಶಂಕ್ರಯ್ಯ ಅವರು ಮಾತನಾಡಿ, ಗ್ರಾಮ ಪಂಚಾಯತಿಯ ಸರ್ವ ಸದಸ್ಯರ ಒಪ್ಪಿಗೆ ಮೇರೆಗೆ ಅಧ್ಯಕ್ಷರನ್ನಾಗಿ ಮೀನಾಕ್ಷಿ ಕಾಳಪ್ಪ ರಾಥೋಡ್ ಹಾಗೂ ಉಪಾಧ್ಯಕ್ಷರನ್ನಾಗಿ ಬಸವರಾಜ ನಾಗಪ್ಪ ಜಾಡರ್ ಅವರನ್ನು ಅವಿರೋಧ ಆಯ್ಕೆ ಮಾಡಲಾಯಿತು ಎಂದು ಘೋಷಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರು, ಸರ್ವ ಸದಸ್ಯರು, ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಗ್ರಾಮದ ಹಿರಿಯರು, ಯುವಕರು ಉಪಸ್ಥಿತರಿದ್ದು, ನೂತನ ಅಧ್ಯಕ್ಷ-ಉಪಾಧ್ಯಕ್ಷರಿಗೆ ಶುಭ ಹಾರೈಸಿದರು.
Comments are closed.