ವಿಕಲಚೇತನ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನ
ಕೊಪ್ಪಳ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ವಿಕಲಚೇತನ ವಿದ್ಯಾರ್ಥಿ ವೇತನ ಯೋಜನೆಯಡಿ ಪ್ರೀ ಮೆಟ್ರಿಕ್ ಹಾಗೂ ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿ ವೇತನಕ್ಕೆ ಅರ್ಹ ವಿಕಲಚೇತನ ವಿದ್ಯಾರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ವಿಕಲಚೇತನ ವಿದ್ಯಾರ್ಥಿಗಳು ಎಸ್.ಎಸ್.ಪಿ ಪೋರ್ಟಲ್‌ನಲ್ಲಿ ಜಾಲತಾಣಗಳಾದ ಪ್ರೀ-ಮೇಟ್ರಿಕ್ https://ssp.karnataka.gov.in ಹಾಗೂ ಪೋಸ್ಟ್-ಮೆಟ್ರಿಕ್ https://ssp.Postmatric.karnataka.gov.in ಮೂಲಕ ಅಗತ್ಯ ದಾಖಲೆಗಳಾದ ಅಂಗವಿಕಲರ ಗುರುತಿನ ಚೀಟಿ, ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಅಂಕಪಟ್ಟಿ, ಫೋಟೋ ಹಾಗೂ ಬ್ಯಾಂಕ್ ಪುಸ್ತಕದೊಂದಿಗೆ ವಿಕಲಚೇತನ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.