ರಾಹುಲ್ ಗಾಂಧಿ ಅವರಿಗೆ ಕೊಲೆ ಬೆದರಿಕೆ, ತೇಜೋವಧೆಗೆ ಸುಳ್ಳಿನ ಸರಮಾಲೆ ಸೃಷ್ಟಿ: ಸಿ.ಎಂ.ಸಿದ್ದರಾಮಯ್ಯ ಪತ್ರಿಕಾಗೋಷ್ಠಿಯಲ್ಲಿ ತೀವ್ರ ಖಂಡನೆ
*ರಾಹುಲ್ ಗಾಂಧಿಯವರನ್ನು ಮುಗಿಸಲು ಬಿಜೆಪಿ ಸಂಚು ನಡೆಸುತ್ತಿದೆ*
ತ್ಯಾಗ ಬಲಿದಾನದ ಸಂಸ್ಕೃತಿ ಮತ್ತು ಹುತಾತ್ಮರ ಕುಟುಂಬದಿಂದ ಬಂದ ರಾಹುಲ್ ಗಾಂಧಿ ಅವರು ಇದಕ್ಕೆಲ್ಲಾ ಹೆದರುವವರಲ್ಲ*
*ನರೇಂದ್ರ ಮೋದಿ ಈ ಬಾರಿ ಐದು ವರ್ಷ ಪೂರೈಸಲ್ಲ: ಸಿ.ಎಂ.ಸಿದ್ದರಾಮಯ್ಯ*
ಸಿ.ಎಂ ಗೋಷ್ಠಿಯ ಹೈಲೈಟ್ಸ್…
*ಇಂಧಿರಾಗಾಂಧಿ, ರಾಜೀವ್ ಗಾಂಧಿ ದೇಶಕ್ಕಾಗಿ ಹುತಸತ್ಮರಾಗಿದ್ದಾರೆ. ಇಂಥಾ ಉನ್ನತ ತ್ಯಾಗ ಬಲಿದಾನದ ಕುಟುಂಬದಿಂದ ಬಂದು ರಾಹುಲ್ ಗಾಂಧಿ ಅವರು ದೇಶಕ್ಕಾಗಿ ಅವಿರತ ಹೋರಾಟ ನಡೆಸುತ್ತಿದ್ದಾರೆ*
*ಅಜ್ಜಿ ಇಂದಿರಾಗಾಂಧಿ ಅವರಿಗೆ ಆದ ಗತಿಯೇ ನಿಮಗೂ ಆಗುತ್ತದೆ ಎಂದು ರಾಹುಲ್ ಗೆ ಬಿಜೆಪಿ ಬೆದರಿಕೆ ಹಾಕಿದೆ*
*ಕೇಂದ್ರದ ರೈಲ್ವೆ ಖಾತೆ ರಾಜ್ಯ ಸಚಿವ ರಾಹುಲ್ ಗಾಂಧಿ ಅವರನ್ನು ಭಯೋತ್ಪಾದಕ ಎಂದು ಕರೆದಿದ್ದಾರೆ*
*ಈ ರೀತಿ ಜೀವ ಬೆದರಿಕೆಗಳ ಮೂಲಕ ಬಿಜೆಪಿಯ ಕಾರ್ಯಕರ್ತರನ್ನು ಎತ್ತಿಕಟ್ಟುವ ಷಡ್ಯಂತ್ರ ನಡೆಯುತ್ತಿದೆ*
*ರಾಹುಲ್ ಗಾಂಧಿ ನಾಲಗೆ ಕತ್ತರಿಸಿದವರಿಗೆ 11 ಲಕ್ಷ ಬಹುಮಾನ ಕೊಡುವುದಾಗಿ ಶಿವಸೇನೆಯ ಶಿಂಧೆ ಬಣದ ಶಾಸಕ ಸಂಜಯ್ ಗಾಯಕ್ ವಾಡ್ ಅವರು ರಾಹುಲ್ ಗಾಂಧಿ ನಾಲಗೆ ಕತ್ತರಿಸಲು ಕರೆ ನೀಡಿದ್ದಾರೆ. ಇದೂ ಕೂಡ ಕೊಲೆ ಬೆದರಿಕೆಯೇ ಆಗಿದೆ*
*ಆದ್ದರಿಂದ ಈ ಕೂಡಲೇ ಸಂಜಯ್ ಗಾಯಕ್ ವಾಡ್ ಮೇಲೆ ಕ್ರಿಮಿನಲ್ ಕೇಸು ದಾಖಲಿಸಿ ಜೈಲಿಗೆ ತಳ್ಳಲು ಸಿಎಂ ಆಗ್ರಹಿಸಿದರು*
*ಉತ್ತರ ಪ್ರದೇಶದ ಸಚಿವರೊಬ್ಬರು ರಾಹುಲ್ ಗಾಂಧಿ ಈ ದೇಶದ ನಂಬರ್ ಒನ್ ಭಯೋತ್ಪಾದಕ ಎಂದು ಹೇಳಿಕೆ ನೀಡಿದ್ದಾರೆ. ಆದರೆ ಇವತ್ತಿನವರೆಗೂ ಬಿಜೆಪಿ ಪಕ್ಷವಾಗಲಿ, ಬಿಜೆಪಿ ಸರ್ಕಾರವಾಗಲಿ, ಕೇಂದ್ರ ಸರ್ಕಾರವಾಗಲಿ ಕಠಿಣ ಕ್ರಮ ತೆಗೆದುಕೊಂಡಿಲ್ಲ. ಕಾಟಾಚಾರಕ್ಕೆ ಕೇಸು ದಾಖಲಿಸಿ ಕೈ ಚೆಲ್ಲಿದ್ದಾರೆ*
*ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರನ್ನು ಹೂತು ಹಾಕುವುದಾಗಿ ಸಂಜಯ್ ಗಾಯಕ್ ವಾಡ್ ಮತ್ತೆ ಬೆದರಿಕೆ ಹಾಕಿದ್ದಾನೆ*
*ರಾಹುಲ್ ಗಾಂಧಿಯವರನ್ನು ಮುಗಿಸಲು ಬಿಜೆಪಿ ಸಂಚು ನಡೆಸುತ್ತಿದೆ*
*ರಾಜಕೀಯವಾಗಿಯೂ ಮುಗಿಸುವ ಜೊತೆಗೆ ಪ್ರಾಣ ಭಯ ಹುಟ್ಟಿಸುವ ಬಿಜೆಪಿ ಷಡ್ಯಂತ್ರ ಆತಂಕಕಾರಿಯಾದದ್ದು.
*ರಾಹುಲ್ ಗಾಂಧಿ ಅವರಿಗೆ ಜೀವ ಬೆದರಿಕೆ ಹಾಕಿರುವ ಎಲ್ಲರ ವಿರುದ್ಧ ಕ್ರಿಮಿನಲ್ ಕೇಸು ಹಾಕಿ ತಕ್ಷಣ ಬಂಧಿಸಬೇಕು*
*ತ್ಯಾಗ ಬಲಿದಾನದ ಸಂಸ್ಕೃತಿ ಮತ್ತು ಹುತಾತ್ಮರ ಕುಟುಂಬದಿಂದ ಬಂದ ರಾಹುಲ್ ಗಾಂಧಿ ಅವರು ಇದಕ್ಕೆಲ್ಲಾ ಹೆದರುವವರಲ್ಲ*
ನರೇಂದ್ರ ಮೋದಿ ಈ ಬಾರಿ ಐದು ವರ್ಷ ಪೂರೈಸಲ್ಲ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಇದೇ ಸಂದರ್ಭದಲ್ಲಿ ಹೇಳಿದರು.
*ದೇಶದಲ್ಲಿ ಆಗುತ್ತಿರುವ ರಾಜಕಾರಣದ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಮೋದಿ ಅವರು ಈ ಬಾರಿ ಪೂರ್ಣಾವಧಿ ಮುಗಿಸೋದು ಡೌಟು. ನಿತೀಶ್ ಕುಮಾರ್, ಚಂದ್ರಬಾಬು ನಾಯ್ಡು ಅವರು ಹೆಚ್ಚು ದಿನ ಕೇಂದ್ರ ಸರ್ಕಾರದ ಜೊತೆ ಇರುವುದಿಲ್ಲ ಎನ್ನಿಸುತ್ತಿದೆ*
*ಅಸಹ್ಯವಾಗಿ ನಾಲಗೆ ಗರಿಬಿಟ್ಟು ಮಹಿಳಾ ಸಮುದಾಯವನ್ನು, ದಲಿತ ಜನಾಂಗವನ್ನು, ಒಕ್ಕಲಿಗ ಸಮುದಾಯವನ್ನು ಅತ್ಯಂತ ಕೆಟ್ಟದಾಗಿ ಅವಹೇಳನ ಮಾಡಿರುವ BJP ಶಾಸಕ ಮುನಿರತ್ನಂ ವಿರುದ್ಧ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಬೇಕು ಎನ್ನುವ ಬೇಡಿಕೆ ಇದೆ . ಸದ್ಯ ಮುನಿರತ್ನಂ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದರು.
*ಪೊಲೀಸರು ತನಿಖೆ ನಡೆಸಿದ್ದಾರೆ. ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ನ್ಯಾಯಾಲಯ ಮುನಿರತ್ನಂ ಅವರನ್ನು ಜೈಲಿಗೆ ಒಪ್ಪಿಸಿದೆ ಎಂದರು*
Comments are closed.