ಪ್ರಥಮ ಪಿಯುಸಿ ವಾಣಿಜ್ಯ ವಿಭಾಗ ಪ್ರವೇಶಕ್ಕೆ ಅರ್ಜಿ ಆಹ್ವಾನ
: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನಿರ್ವಹಣೆಯಾಗುತ್ತಿರುವ 2024-25ನೇ ಸಾಲಿನ ಜಿಲ್ಲೆಯ ಸರಕಾರಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ ಪ್ರವೇಶಕ್ಕೆ ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಸೆಪ್ಟಂಬರ್ 25 ರೊಳಗಾಗಿ ಪೋಷಕರು, ವಿದ್ಯಾರ್ಥಿಗಳು ಎಲ್ಲಾ ದಾಖಲೆಗಳೊಂದಿಗೆ ನೇರವಾಗಿ ಹಲಗೇರಿ ರಸ್ತೆಯಲ್ಲಿನ ಹಿರೆಸಿಂದೋಗಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜಿನಲ್ಲಿ ಸಲ್ಲಿಸಬಹುದಾಗಿದೆ.
ಅರ್ಹತೆಗಳು : 10ನೇ ತರಗತಿಯಲ್ಲಿ ವಿದ್ಯಾರ್ಥಿಗಳು ಉತ್ತೀರ್ಣರಾಗಿರಬೇಕು, 75 ರಷ್ಟು ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಮತ್ತು 25 ರಷ್ಟು ಇತರೆ ವರ್ಗದವರಿಗೆ ಮೀಸಲಿಡಲಾಗಿದೆ, ಅಲ್ಪಸಂಖ್ಯಾತರ ವರ್ಗದ ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ ಹಾಗೂ ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ರೂ ಮಿತಿಯೊಳಗಿರಬೇಕು, ಹಿಂದುಳಿದ ವರ್ಗಗಳ 2ಎ, 3ಎ ಮತ್ತು 3ಬಿ ಅಭ್ಯರ್ಥಿಗಳ ಹಾಗೂ ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ರೂ ಮಿತಿಯೊಳಗಿರಬೇಕು. ಪರಿಶಿಷ್ಟ ಜಾತಿ ಮತ್ತು ವರ್ಗಗಳ ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯ 2.50 ಲಕ್ಷ ರೂ ಮಿತಿಯೊಳಗಿರಬೇಕು, ಅಂಗವಿಕಲ ವಿದ್ಯಾರ್ಥಿಗಳಿಗೆ 5 ರಷ್ಟು, ಮಾಜಿ ಸೈನಿಕರಿಗೆ 4 ರಷ್ಟು ಕಾಯ್ದಿರಿಸಲಾಗಿದೆ. ವಿಶೇಷ ದುರ್ಬಲ ವರ್ಗ 5 ರಷ್ಟು ಸಫಾಯಿ ಕರ್ಮಚಾರಿ ವಿದ್ಯಾರ್ಥಿಗಳಿಗೆ 5 ರಷ್ಟು ಕಾಯ್ದಿರಿಸಲಾಗಿದೆ, ಭರ್ತಿ ಮಾಡಿದ ಅರ್ಜಿಯೊಂದಿಗೆ ಕಂದಾಯ ಇಲಾಖೆಯ ತಹಶೀಲ್ದಾರ ನೀಡಿದ ಜಾತಿ ಮತ್ತು ಆದಾಯ ದೃಢೀಕರಣ ಪ್ರಮಾಣ ಪತ್ರ, ಆಧಾರ ಕಾರ್ಡ್ ಹಾಗೂ ವಿದ್ಯಾರ್ಥಿ ಪಾಸ್ ಪೋರ್ಟ್ ಅಳತೆಯ ಇತ್ತೀಚಿನ ಭಾವಚಿತ್ರಗಳೊಂದಿಗೆ ಅರ್ಜಿಯನ್ನು ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ಬಾಲಕಿಯರ ಪದವಿ ಪೂರ್ವ ವಸತಿ ಕಾಲೇಜಿನ ಪ್ರಾಂಶುಪಾಲರ ಮೊ. ಸಂ 8951364026, 9916199806, ಗೆ ಸಂಪರ್ಕಿಸಬಹುದಾಗಿದೆ ಎಂದು ವಸತಿ ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆ ತಿಳಿಸಿದೆ.

Comments are closed.