ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಅಧ್ಯಕ್ಷತೆಯಲ್ಲಿ ಸ್ವಚ್ಛತಾ ಹೀ ಸೇವಾ ಪ್ರಗತಿ ಪರಿಶೀಲನಾ ಸಭೆ
: ಚಂದ್ರಶೇಖರ ಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಕೊಪ್ಪಳ ರವರ ಅಧ್ಯಕ್ಷತೆಯಲ್ಲಿ
ಕೊಪ್ಪಳ ಸೆಪ್ಟೆಂಬರ- 20 ಜಿಲ್ಲಾ ನ್ಯಾಯಾಲಯದ ಸಭಾಗಣದಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನದ ಅಂಗವಾಗಿ ಚಂದ್ರಶೇಖರ ಸಿ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಕೊಪ್ಪಳ ರವರ ಅಧ್ಯಕ್ಷತೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ಜರುಗಿತು.
ಸದರಿ ಸಭೆಯಲ್ಲಿ ಸ್ವಚ್ಛತಾ ಹೀ ಸೇವಾ ಪಾಕ್ಷೀಕ-2024 ಅಭಿಯಾನದಲ್ಲಿ ಸ್ವಚ್ಛತೆಯ ಕುರಿತು ಹಮ್ಮಿಕೊಳ್ಳ ಬೇಕಾದ ಕಾರ್ಯಕ್ರಮಗಳ ಕುರಿತು ಹಾಗೂ ಕೊಪ್ಪಳ ತಾಲೂಕಿನ ಕಿನ್ನಾಳ ಗ್ರಾಮವನ್ನು ಜಿಲ್ಲಾ ನ್ಯಾಯಾಲವು ಸ್ವಚ್ಛ ಹಾಗೂ ಸುಂದರ ಗ್ರಾಮವನ್ನಾಗಿ ಮಾಡುವ ನಿಟ್ಟಿನಲ್ಲಿ ಜಿಲ್ಲಾ ನ್ಯಾಯಾಲಯು ದತ್ತು ಪಡೆಯಲ್ಲಿದ್ದು ಸದರಿ ಗ್ರಾಮದ ಅಭಿವೃದ್ಧಿ ಹಾಗೂ ಸ್ವಚ್ಛತೆಗೆ ಎಲ್ಲಾ ಇಲಾಖೆಯ ಅಧಿಕಾರಿಗಳು ಕೈ ಜೋಡಿಸಲು ಸೂಚಿಸಿದರು.
ಸಭೆಯಲ್ಲಿ ಮಹತೇಶ ಸಂಗಪ್ಪ ದರಗದ ಸದಸ್ಯ ಕಾರ್ಯದರ್ಶಿಗಳು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಕೊಪ್ಪಳ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಗಳು ಕೊಪ್ಪಳ, ಉಪಕಾರ್ಯದರ್ಶಿಗಳು ಜಿ.ಪಂ ಕೊಪ್ಪಳ ಉಪ ವಿಭಾಗಾಧಿಕಾರಿಗಳು ಕೊಪ್ಪಳ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರು, ಕೊಪ್ಪಳ ಪ್ರಾದೇಶಿಕ ಸಾರಿಗೆ ಇಲಾಖೆಯ ಅಧಿಕಾರಿಗಳು, ತಶೀಲ್ದಾರ ಕೊಪ್ಪಳ ತಾಲೂಕ, ಕಾರ್ಯನಿರ್ವಾಹಕ ಅಧಿಕಾರಿಗಳು ಕೊಪ್ಪಳ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕೊಪ್ಪಳ, ಜಿಲ್ಲಾ ಸರ್ಕಾರಿ ವಕೀಲರು ಕೊಪ್ಪಳ, ಕಿನ್ನಾಳ ಪಂಚಾಯತ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಸ್ವಚ್ಛ ಭಾರತ್ ಮಿಷನ್ (ಗ್ರಾ) ಯೋಜನೆಯ ಜಿಲ್ಲಾ ಸಮಾಲೋಚರು ಹಾಜರಿದ್ದರು
Comments are closed.