ಅರ್ಹರಿಗೆ ಗ್ಯಾರಂಟಿ ಯೋಜನೆಗಳ ಸೌಲಭ್ಯ ತಲುಪಿಸಲು ಕ್ರಮವಹಿಸಿ: ರೆಡ್ಡಿ ಶ್ರೀನಿವಾಸ್
ತಾ.ಪಂ ಸಭಾಂಗಣದಲ್ಲಿ ಸರ್ಕಾರ ಐದು ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ
ರಾಜ್ಯದಲ್ಲಿನ ಬಡತನ ನಿರ್ಮೂಲನೆಗಾಗಿ ಪಂಚ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗಿದ್ದು, ಅರ್ಹರಿಗೆ ಪಂಚ ಗ್ಯಾರಂಟಿ ಯೋಜನೆಗಳ ಸೌಲಭ್ಯ ತಲುಪಿಸಲು ಅಧಿಕಾರಿಗಳು ಕ್ರಮವಹಿಸಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾದ ರೆಡ್ಡಿ ಶ್ರೀನಿವಾಸ್ ಅವರು ಹೇಳಿದರು.
ಪಟ್ಟಣದ ತಾಲೂಕಾ ಪಂಚಾಯತ ಕಾರ್ಯಾಲಯದಲ್ಲಿ ಶುಕ್ರವಾರದಂದು ಜರುಗಿದ ಸರ್ಕಾರ ಐದು ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಅಧಿಕಾರಿಗಳು ಯೋಜನೆಯ ಸವಲತ್ತುಗಳನ್ನು ಪಡೆಯಬೇಕಾದ ಫಲಾನುಭವಿಗಳ ತಾಂತ್ರಿಕ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಿಕೊಡುವಲ್ಲಿ ಕಾರ್ಯನಿರ್ವಹಿಸಿ, ಅಧಿಕಾರಿಗಳು ಸೇವಾ ಮನೋಭಾವದಿಂದ ಯೋಜನೆಯ ಸೌಲಭ್ಯ ಮನೆ ಮನೆಗೆ ತಲುಪಿಸಲು ಜಾಗೃತಿ ಮೂಡಿಸುವ ಮುಂದಾಗಬೇಕಿದೆ ಎಂದರು.
ಸಭೆಯಲ್ಲಿ ಗೃಹಲಕ್ಷ್ಮಿ, ಗೃಹಜ್ಯೋತಿ, ಯುವನಿಧಿ, ಶಕ್ತಿ ಯೋಜನೆ ಹಾಗೂ ಅನ್ನ ಭಾಗ್ಯ ಯೋಜನೆಗಳಿಗೆ ಸಂಬಂಧಿಸಿದಂತೆ ತಾಲೂಕು ಮಟ್ಟದ ಅಂಕಿ ಅಂಶಗಳ ವರದಿಯನ್ನು ಇಲಾಖೆ ತಾಲೂಕು ಮಟ್ಟದ ಅಧಿಕಾರಿಗಳು ಮಂಡಿಸಿದರು. ಯೋಜನೆಗಳ ಪ್ರಗತಿ ಸಾಧಿಸಲು ಆಯಾ ಇಲಾಖೆ ಅಧಿಕಾರಿಗಳೊಂದಿಗೆ ಮಾನ್ಯರು ಚರ್ಚಿಸಿದರು.
ಈ ವೇಳೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಜಿಲ್ಲಾ ಉಪಾಧ್ಯಕ್ಷರಾದ ನಾಗರಾಜ ಅರಳಿ, ಸದಸ್ಯರಾದ ಸೋಮನಾಥ ದೊಡ್ಡಮನಿ, ತಾಲೂಕು ಅಧ್ಯಕ್ಷರಾದ ದೇವಪ್ಪ ಭಾವಿಕಟ್ಟಿ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿಗಳಾದ ಲಕ್ಷ್ಮೀದೇವಿ, ಯೋಜನಾಧಿಕಾರಿಗಳಾದ ರಾಘವೇಂದ್ರ, ತಾ.ಪಂ ಸಹಾಯಕ ನಿರ್ದೇಶಕರಾದ ವೈ.ವನಜಾ, ಕನಕಪ್ಪ ಸಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ತಾಲೂಕು ಸದಸ್ಯರು, ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿಗಳು, ತಾ.ಪಂ ಅಧಿಕಾರಿಗಳ, ಸಿಬ್ಬಂದಿಗಳು ಇದ್ದರು.
Comments are closed.