ಕೈಮಗ್ಗ, ಜವಳಿ ತಂತ್ರಜ್ಞಾನದಲ್ಲಿ ಡಿಪ್ಲೋಮಾ: ಅರ್ಜಿ ಆಹ್ವಾನ

Get real time updates directly on you device, subscribe now.

**

ಕೊಪ್ಪಳ ): 2023-24ನೇ ಸಾಲಿನ ಶೈಕ್ಷಣಿಕ ಅವಧಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿ ಲ್ಯಾಟರಲ್ ಎಂಟ್ರಿ ಮುಖಾಂತರ ನೇರವಾಗಿ 02ನೇ ವರ್ಷದ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಕೋರ್ಸ್ ನೇರ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ವ್ಯಾಸಂಗದ ಸಮಯದಲ್ಲಿ ಮಾರ್ಗಸೂಚಿಯ ಪ್ರಕಾರ ಪ್ರತಿ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ. 2,500 ರಂತೆ ಶಿಷ್ಯವೇತನ ನೀಡಲಾಗುವುದು ಹಾಗೂ ಆಯ್ಕೆಯಾದ ಅಭ್ಯರ್ಥಿಗಳಿಗೆ ಆಯಾಯ ಐ.ಐ.ಹೆಚ್.ಟಿ ನಿಯಾಮಾನುಸಾರ ವಸತಿ ನಿಲಯದ ಸೌಲಭ್ಯ ಕಲ್ಪಿಸಲಾಗುವುದು. ಅರ್ಜಿ ಸಲ್ಲಿಸಲು ವಿದ್ಯಾರ್ಹತೆಯು ಗಣಿತ, ಭೌತಶಾಸ್ತ್ರ ಮತ್ತು ರಸಾಯನಶಾಸ್ತ್ರದೊಂದಿಗೆ 10+2 ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವಾ ಯಾವುದೇ ಜವಳಿ ವಿಭಾಗದ ವೃತ್ತಿಪರ ವಿಭಾಗದಲ್ಲಿ 10+2 ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. 10ನೇ ತರಬೇತಿ ತೇರ್ಗಡೆ +(2 ವರ್ಷಗಳ ಐಟಿಐ) ತೇರ್ಗಡೆ ಅಥವಾ 10+2 ಪಾಸ್+(2 ವರ್ಷಗಳ ಐಟಿಐ) ತೇರ್ಗಡೆ ಎರಡನೇ ವರ್ಷದ ಡಿಪ್ಲೋಮಾ ಕೋರ್ಸ್ಗೆ ಪ್ರವೇಶ ಪಡೆಯಲು ಅರ್ಹರು.
ಜವಳಿ ವಿಭಾಗದ ವೃತ್ತಿಪರ ಸ್ಟ್ರೀಮ್‌ನಲ್ಲಿ 10+2 ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಐ.ಐ.ಹೆಚ್.ಟಿ ನಡೆಸುವ ಗಣಿತ, ಭೌತಶಾಸ್ತç, ರಸಾಯನಶಾಸ್ತ್ರ  ಬ್ರಿಡ್ಜ್ ಕೋರ್ಸನ್ನು ಅಭ್ಯಾಸ ಮಾಡಬೇಕು. ಅರ್ಜಿ ಸಲ್ಲಿಸಲು ವಯೋಮಿತಿ ದಿನಾಂಕ:01-07-2023ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿ 25 ವರ್ಷ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ವಯೋಮಿತಿ 27 ವರ್ಷ, ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಕ್ರೋಡಿಕೃತ ಅಂಕಗಳು ಮೆರಿಟ್ ಲೆಕ್ಕಾಚಾರಕ್ಕೆ ಆಧಾರವಾಗಿರುತ್ತವೆ.
ಲ್ಯಾಟರಲ್ ಎಂಟ್ರಿ ಮುಖಾಂತರ 2ನೇ ವರ್ಷದ ಡಿಪ್ಲೋಮಾ ಕೋರ್ಸಗೆ ನೇರ ಪ್ರವೇಶಕ್ಕಾಗಿ ಸಂಸ್ಥೆಗಳು ಲಭ್ಯವಿದ್ದು, ಗದಗ-ಬೆಟಗೇರಿಯ ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆಯಲ್ಲಿ 12 ಅಭ್ಯರ್ಥಿಗಳು, ಸೇಲಂನ (ತಮಿಳುನಾಡು) ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ಸಂಸ್ಥೆಯಲ್ಲಿ 10 ಅಭ್ಯರ್ಥಿಗಳು, ವೆಂಕಟಗಿರಿಯ (ನೆಲ್ಲೂರು ಜಿಲ್ಲೆ, ಆಂಧ್ರಪ್ರದೇಶ) ಎಸ್.ಪಿ.ಕೆ.ಎಂ ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆಯಲ್ಲಿ 03 ಅಭ್ಯರ್ಥಿಗಳು ಹಾಗೂ ಕಣ್ಣೂರು (ಕೇರಳ) ಭಾರತೀಯ ಕೈಮಗ್ಗ ತಂತ್ರಜ್ಞಾನ ಸಂಸ್ಥೆಯಲ್ಲಿ 02 ಅಭ್ಯರ್ಥಿಗಳು ಸೇರಿ ಒಟ್ಟು 27 ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.
ಮೆರಿಟ್ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳನ್ನು ಆಯಾ ಡಿಪ್ಲೋಮಾ ಸಂಸ್ಥೆಗಳಲ್ಲಿ ಕೋರ್ಸ ಪ್ರವೇಶ ಕುರಿತಂತೆ ಕೌನ್ಸಿಲಿಂಗ್‌ಗಾಗಿ ಕರೆಯಲಾಗುವುದು. ಆಸಕ್ತಿ ಇರುವ ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ ಮತ್ತು ಅರ್ಜಿ ಫಾರಂಗಳಿಗಾಗಿ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ-ಬೆಟಗೇರಿ ದೂರವಾಣಿ ಸಂ: 08372-297221, ಮೊಬೈಲ್ ಸಂಖ್ಯೆ: 9448644074 ಅಥವಾ ಕೊಪ್ಪಳ ಜಿಲ್ಲೆಯ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಕೊಪ್ಪಳ ದೂ.ಸಂ: 08539-295469 ಗೆ ಸಂಪರ್ಕಿಸಿ ಪಡೆಯಬಹುದಾಗಿದೆ.  
ಅರ್ಜಿಯನ್ನು  https://khtigadag.ac.in/Lateralentryadmissionform.pdf  ಈ ಲಿಂಕ್ ಮೂಲಕ ಆನ್‌ಲೈನ್‌ನಲ್ಲಿ ಡೌನಲೊಡ್ ಮಾಡಿಕೊಳ್ಳಬಹುದು. ಪೂರ್ಣವಾಗಿ ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ “ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪೂರ, ಗದಗ-ಬೆಟಗೇರಿ-582102” ಇವರಿಗೆ ಜೂನ್ 15 ರೊಳಗಾಗಿ ಸಲ್ಲಿಸಬೇಕು ಎಂದು ಕೊಪ್ಪಳ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!
%d bloggers like this: