ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿ ಖಾದಿ ಮಳಿಗೆಗೆ ಜಿಲ್ಲಾಧಿಕಾರಿಗಳಿಂದ ಚಾಲನೆ
ಮಹಾತ್ಮ ಗಾಂಧೀಜಿಯವರ ಜಯಂತಿ ಪ್ರಯುಕ್ತ ಖಾದಿ ಪ್ರಿಯರಿಗಾಗಿ ಸೆಪ್ಟಂಬರ್ 25 ರಿಂದ ಅಕ್ಟೋಬರ್ 04 ರವರೆಗೆ ಜಿಲ್ಲಾಡಳಿತ ಭವನದಲ್ಲಿ ತಾತ್ಕಾಲಿಕ ಖಾದಿ ಮಾರಾಟ ಮಳಿಗೆಗೆ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಸೆ.25ರಂದು ಚಾಲನೆ ನೀಡಿದರು.
ಮಹಾತ್ಮ ಗಾಂಧೀಜಿಯವರ ಜಯಂತಿ ಹಿನ್ನೆಲೆಯಲ್ಲಿ ಖಾದಿ ಬಟ್ಟೆಗಳನ್ನು ಖರೀದಿಸಲು ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡಬೇಕು ಎನ್ನುವ ಉದ್ದೇಶದಿಂದ ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಹಾಗೂ ಕೊಪ್ಪಳ ಜಿಲ್ಲೆಯಲ್ಲಿನ ಖಾದಿ ಸಂಘ-ಸAಸ್ಥೆಗಳಿAದ ಖಾದಿ ಉತ್ಪನ್ನಗಳ ಮಾರಾಟಕ್ಕಾಗಿ ಜಿಲ್ಲಾಡಳಿತ ಭವನದಲ್ಲಿ ತಾತ್ಕಾಲಿಕ ಮಳಿಗೆಯನ್ನು ಆರಂಭಿಸಲಾಗಿದೆ. ಈ ಮಳಿಗೆಯಲ್ಲಿ ಖಾದಿ, ರೇಷ್ಮೇ ಬಟ್ಟೆಗಳು, ರೆಡಿಮೇಡ್ ಡ್ರೇಸಸ್ಸ್, ಜಮುಖಾನ, ಟವಲುಗಳು ಸೇರಿದಂತೆ ಗ್ರಾಮೋದ್ಯೋಗ ಉತ್ಪನ್ನಗಳಾದ ಅಗರಬತ್ತಿ, ಸಾಬೂನು, ಜೇನುತುಪ್ಪ ಇತ್ಯಾದಿಗಳು ಮಾರಾಟಕ್ಕಾಗಿ ಲಭ್ಯವಿಡಲಾಗಿದೆ ಎಂದು ಇದೆ ವೇಳೆ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ ಕೆ.ವೀರೇಶ ಅವರು ಮಾಹಿತಿ ನೀಡಿದರು.
ಈ ವೇಳೆ ಕರ್ನಾಟಕ ಸರ್ವೋದಯ ಸೇವಾ ಸಮಿತಿಯ ಕಾರ್ಯದರ್ಶಿ ವಿದ್ಯಾ ಪಾಟೀಲ, ತಾಂತ್ರಿಕ ಮೇಲ್ವಿಚಾರಕರಾದ ವಿಶ್ವನಾಥ ವೈ., ಖಾದಿ ಕಾರ್ಯಕರ್ತರಾದ ಬಸವರಾಜ ಸೇರಿದಂತೆ ಇನ್ನೀತರು ಇದ್ದರು.
ಈ ವೇಳೆ ಕರ್ನಾಟಕ ಸರ್ವೋದಯ ಸೇವಾ ಸಮಿತಿಯ ಕಾರ್ಯದರ್ಶಿ ವಿದ್ಯಾ ಪಾಟೀಲ, ತಾಂತ್ರಿಕ ಮೇಲ್ವಿಚಾರಕರಾದ ವಿಶ್ವನಾಥ ವೈ., ಖಾದಿ ಕಾರ್ಯಕರ್ತರಾದ ಬಸವರಾಜ ಸೇರಿದಂತೆ ಇನ್ನೀತರು ಇದ್ದರು.
Comments are closed.