ಶ್ರೀಮತಿ ಶುಭಾಗೆ ಪಿಎಚ್‌ಡಿ ಪದವಿ ಪ್ರದಾನ
ಕೊಪ್ಪಳ: ಕುಕನೂರು ತಾಲೂಕಿನ ತಳಬಾಳದ ವಸತಿಯುಕ್ತ ಮಾದರಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಭಾರಿ ಪ್ರಾಂಶುಪಾಲರಾದ ಶ್ರೀಮತಿ ಶುಭಾ ಇವರಿಗೆ ಈಚೆಗೆ ಧಾರವಾಡದ ಕರ್ನಾಟಕ ವಿಶ್ವವಿಸ್ಯಾಲಯದಲ್ಲಿ ನಡೆದ ಘಟಿಕೋತ್ಸವದಲ್ಲಿ ಪಿಎಚ್‌ಡಿ ಪದವಿ ಪ್ರದಾನ ಮಾಡಲಾಯಿತು.
ಶ್ರೀಮತಿ ಶುಭಾ ಇತಿಹಾಸ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿದ್ದು, ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಇತಿಹಾಸ ಮತ್ತು ಪ್ರಾಚ್ಯಶಾಸ್ತ್ರ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ.ಐ.ಕೆ. ಪತ್ತಾರ ಮಾರ್ಗದರ್ಶನದಲ್ಲಿ ಸಿದ್ಧಪಡಿಸಿದ “ಮೀರ್ ಉಸ್ಮಾನ್ ಅಲೀಖಾನ್‌ನ ಜೀವನ ಮತ್ತು ಕೊಡುಗೆಗಳು” ಎಂಬ ಮಹಾಪ್ರಬಂಧಕ್ಕೆ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ. ಉನ್ನತ ಶಿಕ್ಷಣ ಸಚಿವ ಹಾಗೂ ಸಮಕುಲಾಧಿಪತಿ ಡಾ.ಎಂ.ಸಿ.ಸುಧಾಕರ ಪಿಎಚ್‌ಡಿ ಪದವಿ ಪ್ರಧಾನ ಮಾಡಿದರು. ಈ ಸಂದರ್ಭದಲ್ಲಿ ಧಾರವಾಡ ಕರ್ನಾಟಕ ವಿವಿಯ ಉಪಕುಲಪತಿ, ವಿವಿಧ ವಿಭಾಗಗಳ ಬೋಧಕ ವೃಂದ, ಗಣ್ಯಮಾನ್ಯರು ಉಪಸ್ಥಿತರಿದ್ದರು.
Comments are closed.