ಉಚಿತ ಪರೀಕ್ಷಾ ಪೂರ್ವ ತರಬೇತಿ: ಹೆಸರು ನೋಂದಾಯಿಸಲು ಸೂಚನೆ
ಕೊಪ್ಪಳ ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ಸ್ಟಡಿ ಸರ್ಕಲ್ ಯೋಜನೆಯಡಿ ಉಚಿತ ಪರೀಕ್ಷಾ ಪೂರ್ವ ತರಬೇತಿಯನ್ನು ಆಯೋಜಿಸಲಾಗಿದ್ದು, ಭಾಗವಹಿಸಲಿಚ್ಛಿಸುವ ಆಸಕ್ತರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು ಎಂದು ಜಿಲ್ಲಾ ಉದ್ಯೋಗಾಧಿಕಾರಿ ಪ್ರಾಣೇಶ ಅವರು ತಿಳಿಸಿದ್ದಾರೆ.
ಸ್ಟಡಿ ಸರ್ಕಲ್ ಯೋಜನೆಯಡಿ ಕರ್ನಾಟಕ ಲೋಕಸೇವಾ ಆಯೋಗ ಹಾಗೂ ಕೆಇಎ ಗಳಿಂದ ಅಧಿಸೂಚಿಸಲ್ಪಟ್ಟಿರುವ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಉಚಿತ ಪರೀಕ್ಷಾ ಪೂರ್ವ ತರಬೇತಿಯನ್ನು ಜುಲೈ 26ರಿಂದ ಆಗಸ್ಟ್ 06ರ ವರೆಗೆ (ಸಾರ್ವತ್ರಿಕ ರಜಾ ದಿನಗಳನ್ನು ಹೊರತು ಪಡಿಸಿ) ಆಯೋಜಿಸಲಾಗಿದೆ. ಅರ್ಹ ನಿರುದ್ಯೋಗಿ ಅಭ್ಯರ್ಥಿಗಳು ಈ ಕಾರ್ಯಕ್ರಮದ ಸದುಪಯೋಗವನ್ನು ಪಡೆದುಕೊಳ್ಳಬಹುದು. ಪರೀಕ್ಷಾ ಪೂರ್ವ ತರಬೇತಿ ಕಾರ್ಯಕ್ರಮಕ್ಕೆ ಭಾಗವಹಿಸಲು ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ತಮ್ಮ ಅಗತ್ಯ ದಾಖಲೆಗಳೊಂದಿಗೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಕೊಪ್ಪಳ ಇಲ್ಲಿಗೆ ತಮ್ಮ ಹೆಸರನ್ನು ಜುಲೈ 22ರೊಳಗೆ ನೋಂದಾಯಿಸಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಮೊದಲನೇ ಮಹಡಿ, ಜಿಲ್ಲಾಧಿಕಾರಿಗಳ ಕಾರ್ಯಾಲಯ ಸಂಕೀರ್ಣ, ಕೊಪ್ಪಳ ದೂರವಾಣಿ ಸಂಖ್ಯೆ 08539-220859, 9353515518ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Comments are closed.