ವಿಭಾಗಮಟ್ಟದ ದಸರಾ ಕ್ರೀಡಾಕೂಟ: ಸೆಪ್ಟೆಂಬರ್ 29ರಿಂದ ವಿವಿಧ ಸ್ಪರ್ಧೆಗಳು

0

Get real time updates directly on you device, subscribe now.

 2024-25ನೇ ಸಾಲಿನ ವಿಭಾಗ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಗಳು ಸೆಪ್ಟೆಂಬರ್ 29ರಿಂದ ಸೆ.30ರ ವರೆಗೆ ನಡೆಯಲಿವೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ವಿಭಾಗ ಮಟ್ಟದ ದಸರಾ ಕ್ರೀಡಾಕೂಟದ ಸ್ಪರ್ಧೆಗಳು ಕೊಪ್ಪಳ, ಕಲಬುರಗಿ, ಬಳ್ಳಾರಿ, ವಿಜಯನಗರ, ರಾಯಚೂರು, ಬೀದರ್ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ನಡೆಯಲಿದ್ದು, ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ವೈಯಕ್ತಿಕ ವಿಭಾಗದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಮತ್ತು ಗುಂಪು ಸ್ಪರ್ಧೆಗಳಲ್ಲಿ ಪ್ರಥಮ ಸ್ಥಾನ ಪಡೆದ ಕ್ರೀಡಾಪಟುಗಳು, ವಿಭಾಗ ಮಟ್ಟದ ಕ್ರೀಡಾಕೂಟದಲ್ಲಿ ಆಯ್ಕೆ ಮಾಡಬೇಕಾದ ಕ್ರೀಡೆಗಳಲ್ಲಿ ಗುಂಪು ಹಾಗೂ ವೈಯಕ್ತಿಕ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದ ವಿಜೇತರು ರಾಜ್ಯ ಮಟ್ಟದ ದಸರಾ ಸಿಎಂ ಕಪ್-2024 ರ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹರಿರುತ್ತಾರೆ.
ಸ್ಪರ್ಧೆ ಹಾಗೂ ಸ್ಥಳಗಳ ವಿವರ: ಸೆಪ್ಟೆಂಬರ್ 29 ರಂದು ಕಲಬುರಗಿ ಜಿಲ್ಲೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಜೂಡೋ, ಟೆನ್ನಿಸ್, ವಾಲಿಬಾಲ್, ಈಜು ಹ್ಯಾಂಡ್ ಬಾಲ್, ಟೇಬಲ್ ಟೆನ್ನಿಸ್ ಸ್ಪರ್ಧೆಗಳು, ಬಳ್ಳಾರಿ ಜಿಲ್ಲೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಅಥ್ಲೆಟಿಕ್ಸ್, ಫುಟ್ಬಾಲ್, ಹಾಕಿ,ನೆಟ್ ಬಾಲ್ ಸ್ಪರ್ಧೆಗಳು, ವಿಜಯನಗರ ಜಿಲ್ಲೆಯ ಜಿಲ್ಲಾ ಕ್ರೀಡಾಂಗಣದಲ್ಲಿ ವುಶು ಸ್ಪರ್ಧೆ, ರಾಯಚೂರು ಜಿಲ್ಲೆಯ ರಾಯಚೂರು ಕೃಷಿ ಮಹಾವಿದ್ಯಾಲಯ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಸಿಂಧನೂರಿನಲ್ಲಿ ಬಾಸ್ಕೆಟ್‌ಬಾಲ್, ಥ್ರೋ ಬಾಲ್, ಕಬ್ಬಡ್ಡಿ ಸ್ಪರ್ಧೆಗಳು, ಬೀದರ್ ಜಿಲ್ಲೆಯ ನೆಹರು ಜಿಲ್ಲಾ ಕ್ರೀಡಾಂಗಣದಲ್ಲಿ ಜಿಮ್ನಾಸ್ಟಿಕ್ ಬಾಕ್ಸಿಂಗ್, ಬ್ಯಾಡ್ಮಿಂಟನ್ ಸ್ಪರ್ಧೆಗಳು ಹಾಗೂ ಯಾದಗಿರಿ ಜಿಲ್ಲೆಯ ಜಿಲ್ಲಾ ಕ್ರೀಡಾಂಗಣದಲ್ಲಿ ಕುಸ್ತಿ, ವೇಟ್ ಲಿಪ್ಟಿಂಗ್ ಸ್ಪರ್ಧೆಗಳು ನಡೆಯಲಿವೆ.
ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಮೊ.ಸಂ: 9844029235 & 8884774416, ಕೊಪ್ಪಳ ಮೊ.ಸಂ: 7676343554, 9448633146, 6360146300, 7409272350 ಬಳ್ಳಾರಿ ಮೊ.ಸಂ: 9036335986 & 9886688858, ವಿಜಯನಗರ ಮೊ.ಸಂ: 9449126141, ರಾಯಚೂರು ಮೊ.ಸಂ: 6362238100 & 966364277, ಬೀದರ್ ಮೊ.ಸಂ: 8884694472 & 6361488733, ಯಾದಗಿರಿ ಮೊ.ಸಂ: 9108197572 ಗೆ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Get real time updates directly on you device, subscribe now.

Leave A Reply

Your email address will not be published.

error: Content is protected !!
%d bloggers like this: