ಅ.03 ರಿಂದ ಹುಲಿಗೆಮ್ಮ ದೇವಿ ದಸರಾ ಮಹೋತ್ಸವ

Get real time updates directly on you device, subscribe now.

ಧಾರ್ಮಿಕ ದತ್ತಿ ಇಲಾಖೆಯ ಶ್ರೀ ಹುಲಿಗೆಮ್ಮದೇವಿ ದೇವಸ್ಥಾನದಿಂದ `ಶ್ರೀ ಹುಲಿಗೆಮ್ಮದೇವಿ ದಸರಾ ಮಹೋತ್ಸವ-2024′ ಕಾರ್ಯಕ್ರಮವನ್ನು ಅಕ್ಟೋಬರ್ 03 ರಿಂದ ಅ.12 ರವರೆಗೆ ಹಮ್ಮಿಕೊಳ್ಳಲಾಗಿದ್ದು, ಉದ್ಘಾಟನಾ ಸಮಾರಂಭವು ಅ. 03 ರ ಸಂಜೆ 6.30 ಗಂಟೆಗೆ ನಡೆಯಲಿದೆ.

ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ತಂಗಡಗಿ ಶಿವರಾಜ ಸಂಗಪ್ಪ ಅವರು ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟಿಸುವರು. ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವರು ಹಾಗೂ ಹುಲಿಗೆಮ್ಮದೇವಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಮಲಿಂಗಾರೆಡ್ಡಿ, ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕರು ಹಾಗೂ ಕುಷ್ಟಗಿ ವಿಧಾನಸಭಾ ಕ್ಷೇತ್ರ ಸದಸ್ಯರಾದ ದೊಡ್ಡನಗೌಡ ಹನುಮಗೌಡ ಪಾಟೀಲ,
ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರು ಹಾಗೂ ಯಲಬುರ್ಗಾ ವಿಧಾನಸಭಾ ಕ್ಷೇತ್ರ ಸದಸ್ಯರಾದ ಬಸವರಾಜ ರಾಯರೆಡ್ಡಿ ಅವರು ಘನ ಉಪಸ್ಥಿತಿ ವಹಿಸುವರು. ಕೊಪ್ಪಳ ಶಾಸಕರಾದ ಕೆ.ರಾಘವೇಂದ್ರ ಹಿಟ್ನಾಳ ಅವರು ಅಧ್ಯಕ್ಷತೆ ವಹಿಸುವರು. ವಿಶೇಷ ಆಹ್ವಾನಿತರಾಗಿ ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಕೊಟ್ರಯ್ಯ ಸ್ವಾಮಿ ಹಿರೇಮಠ ಹುಲಿಗಿ ಅವರು ಆಗಮಿಸುವರು.
ಮುಖ್ಯ ಅತಿಥಿಗಳಾಗಿ ಕೊಪ್ಪಳ ಲೋಕಸಭಾ ಕ್ಷೇತ್ರದ ಸದಸ್ಯರಾದ ಕೆ.ರಾಜಶೇಖರ ಹಿಟ್ನಾಳ್, ಗಂಗಾವತಿ ವಿಧಾನಸಭಾ ಕ್ಷೇತ್ರದ ಸದಸ್ಯರಾದ ಜಿ. ಜನಾರ್ಧನ ರೆಡ್ಡಿ, ವಿಧಾನ ಪರಿಷತ್ ಸದಸ್ಯರುಗಳಾದ ಶಶೀಲ್ ಜಿ.ನಮೋಶಿ, ಡಾ.ಚಂದ್ರಶೇಖರ್ ಬಿ.ಪಾಟೀಲ, ಶರಣಗೌಡ ಅನ್ನದಾನಗೌಡ ಪಾಟೀಲ ಬಯ್ಯಾಪೂರ, ಹೇಮಲತಾ ನಾಯಕ, ತುಂಗಭದ್ರ ಯೋಜನೆ ಮುನಿರಾಬಾದ್ ಅಚ್ಚುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಹಸನ್‌ಸಾಬ್ ನಬೀಬ್ ಸಾಬ್ ದೋಟಿಹಾಳ, ಹುಲಿಗಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ನೀಲಮ್ಮ ಗವಿಸಿದ್ದಪ್ಪ ಗುಂಗಾಡಿ ಅವರು ಪಾಲ್ಗೊಳ್ಳುವರು.
ಅತಿಥಿಗಳಾಗಿ ಕಂದಾಯ ಇಲಾಖೆ (ಧಾರ್ಮಿಕ ದತ್ತಿ ಇಲಾಖೆ) ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಾದ ರಾಜೇಂದ್ರ ಕುಮಾರ್ ಕಟಾರಿಯ, ಬೆಂಗಳೂರು ಕೃಷ್ಣಭಾಗ್ಯ ಜಲ ನಿಗಮ ನಿಯಮಿತದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಕೆ.ಪಿ. ಮೋಹನ್‌ರಾಜ್, ಹಿಂದೂ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರಾದ ಡಾ.ಎಂ.ವಿ.ವೆAಕಟೇಶ್, ಕೊಪ್ಪಳ ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ರತ್ನಂ ಪಾಂಡೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ, ಡಾ.ರಾಮ್ ಎಲ್. ಅರಸಿದ್ದಿ, ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

Get real time updates directly on you device, subscribe now.

Comments are closed.

error: Content is protected !!