ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

Get real time updates directly on you device, subscribe now.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರಸಕ್ತ 2024-25ನೇ ಸಾಲಿಗಾಗಿ 05 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿ ಯೋಜನೆಯಡಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳನ್ನು ಪ್ರೋತ್ಸಾಹಿಸಲು ಆಯ್ಕೆ ಕ್ಷೇತ್ರಗಳಿಗೆ ನೀಡುವ ಸಲುವಾಗಿ ನಾವೀಣ್ಯತೆ (ಇನ್ನೊವೇಷನ್) ತಾರ್ಕಿಕ (ಸ್ಕೊಲಾಸ್ಟಿಕ್) ಸಾಧನೆಗಳು, ಕಲೆ, ಸಾಂಸ್ಕೃತಿಕ & ಸಂಗೀತ, ಕ್ರೀಡೆ (ಸ್ಪೋರ್ಟ್ಸ್) ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಮಕ್ಕಳು ಅರ್ಜಿ ಸಲ್ಲಿಸಬಹುದಾಗಿದೆ. ಪ್ರಕರಣವು ಆಗಸ್ಟ್-2023 ರಿಂದ ಜುಲೈ-2024ರೊಳಗೆ ನಡೆದಿರಬೇಕು. ಪ್ರಶಸ್ತಿಗಾಗಿ ಜಿಲ್ಲಾ ಮಟ್ಟದಲ್ಲಿ ಪ್ರತಿಭೆಯನ್ನು ಗುರುತಿಸಿರಬೇಕು.
ಅರ್ಹ ಅಭ್ಯರ್ಥಿಗಳು ನಿಗದಿಪಡಿಸಿದ ಅರ್ಜಿ ನಮೂನೆಗಳನ್ನು ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಪ್ಪಳ ಇವರಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಅಕ್ಟೋಬರ್ 30 ರೊಳಗೆ ಸಲ್ಲಿಸಬೇಕು. ನಿಗದಿತ ದಿನಾಂಕದ ನಂತರ ಸಲ್ಲಿಸಿದ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Get real time updates directly on you device, subscribe now.

Comments are closed.

error: Content is protected !!