ಅಕ್ಟೋಬರ್ 2ರಂದು ಕಿನ್ನಾಳ ಗ್ರಾಮದಲ್ಲಿ ಸ್ವಚ್ಛತಾ ಕಾರ್ಯಕ್ರಮ

Get real time updates directly on you device, subscribe now.

  : ಕೊಪ್ಪಳದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಅರಣ್ಯ ಇಲಾಖೆ, ಆರೋಗ್ಯ ಇಲಾಖೆ, ಶಿಕ್ಷಣ ಇಲಾಖೆ, ಕಾರ್ಮಿಕ ಇಲಾಖೆ , ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಕಿನ್ನಾಳ ಗ್ರಾಮ ಪಂಚಾಯತ್ , ಸಂಘ ಸಂಸ್ಥೆಗಳು, ಹಾಗೂ ಗ್ರಾಮಸ್ಥರುಗಳ ಸಂಯುಕ್ತ ಆಶ್ರಯದಲ್ಲಿ ಸ್ವಚ್ಛತಾ ಹಿ ಸೇವಾ 2024ರ ಸ್ವಭಾವ ಸ್ವಚ್ಛತಾ-ಸಂಸ್ಕಾರ ಸ್ವಚ್ಛತಾ ಅಭಿಯಾನದಡಿಯಲ್ಲಿ ಕಿನ್ನಾಳ ಗ್ರಾಮದಲ್ಲಿ ಸ್ವಚ್ಛತಾ ಕಾರ್ಯಕ್ರಮವು ಅಕ್ಟೋಬರ್ 2ರಂದು ಬುಧವಾರ ಬೆಳಿಗ್ಗೆ 8 ಗಂಟೆಗೆ ಕುವೆಂಪು ಶತಮಾನೋತ್ಸವ ಮಾದರಿ ಶಾಲೆಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಕೊಪ್ಪಳ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಅಲಬಣ್ಣ ವಿ. ಕಣವಿ ಅವರು ಭಾಗವಹಿಸುವರು. ಕಿನ್ನಾಳ ಗ್ರಾಮ ಪಂಚಾಯತನ ಅಧ್ಯಕ್ಷರಾದ ಕರಿಯಮ್ಮ ಮಲ್ಲಪ್ಪ ಉಪ್ಪಾರ ಅವರು ಘನ ಉಪಸ್ಥಿತಿ ವಹಿಸುವರು. ಕಿನ್ನಾಳ ಗ್ರಾಮ ಪಂಚಾಯತನ ಉಪಾಧ್ಯಕ್ಷರಾದ ದುರಗಪ್ಪ ಡಂಬರ ಅವರು ಉಪಸ್ಥಿತಿ ವಹಿಸುವರು.
ಈ ಕಾರ್ಯಕ್ರಮದಲ್ಲಿ ಕೊಪ್ಪಳದ ಗೌರವಾನ್ವಿತ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಚಂದ್ರಶೇಖರ.ಸಿ ಅವರು ಮತ್ತು ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಮಹಾಂತೇಶ ಸಂಗಪ್ಪ ದರ್ಗಾದ್ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

Get real time updates directly on you device, subscribe now.

Comments are closed.

error: Content is protected !!