ಅಕ್ಟೋಬರ್-೨ ರಂದು ಆನೆಗುಂದಿಯಲ್ಲಿ ಸುಸಜ್ಜಿತ ಶೌಚಾಲಯ ನಿರ್ಮಾಣಕ್ಕೆ ಸ್ಥಳಪರಿಶೀಲನೆಗೆ ರಾಹುಲ್ ರತ್ನಂ ಪಾಂಡೆ ಭರವಸೆ: ಸಿಂಧೂ ಡಿ

Get real time updates directly on you device, subscribe now.

 

ಗಂಗಾವತಿ: ತಾಲೂಕಿನ ಆನೆಗುಂದಿ ಗ್ರಾಮವು ಐತಿಹಾಸಿಕ, ಪುರಾಣ, ಪೌರಾಣಿಕ ಹಾಗೂ ವಿಶ್ವ ಪಾರಂಪರಿಕ ಪ್ರಸಿದ್ಧ ಪ್ರದೇಶವಾಗಿದ್ದು, ಈ ಪ್ರದೇಶಕ್ಕೆ ದೇಶ-ವಿದೇಶಗಳಿಂದ ಹಲವಾರು ಪ್ರವಾಸಿಗರು ಬಂದು ವೀಕ್ಷಿಸಿ ಹೋಗುವಂತಹ ಸ್ಥಳವಾಗಿರುತ್ತದೆ. ದುರಂತವೇನೆಂದರೆ, ಆನೆಗುಂದಿ ಭಾಗದಲ್ಲಿ ಸಾರ್ವಜನಿಕರಿಗೆ ಶೌಚಾಲಯ ಇರುವುದಿಲ್ಲ. ಈ ಬಗ್ಗೆ ಸಾಕಷ್ಟು ಬಾರಿ ಜಿಲ್ಲಾಡಳಿತಕ್ಕೆ, ಜನಪ್ರತಿನಿಧಿಗಳಿಗೆ, ಅಧಿಕಾರಿಗಳಿಗೆ ಮನವಿ ಮಾಡಿಕೊಂಡಿದ್ದರೂ ಪ್ರಯೋಜನವಾಗಿರುವುದಿಲ್ಲ. ಈಗ ಜಿಲ್ಲಾ ಪಂಚಾಯತ್‌ನ ಸಿ.ಇ.ಓ ಆದ ರಾಹುಲ್ ರತ್ನಂ ಪಾಂಡೆ ಅವರು ಆನೆಗೊಂದಿಯಲ್ಲಿ ಸಾರ್ವಜನಿಕ ಶೌಚಾಲಯ ನಿರ್ಮಾಣಕ್ಕೆ ಸ್ಥಳ ಪರಿಶೀಲಿಸಲು ಅಕ್ಟೋಬರ್-೨ ರಂದು ಭೇಟಿ ನೀಡುವುದಾಗಿ ಭರವಸೆ ನೀಡಿದ್ದಾರೆ ಎಂದು ಪರಿಸರ ಪ್ರೇಮಿಯಾದ ಕೇಂದ್ರೀಯ ವಿದ್ಯಾಲಯದ ೮ನೇ ತರಗತಿ ವಿದ್ಯಾರ್ಥಿನಿ ಸಿಂಧು ಡಿ ರವರು ಹರ್ಷ ವ್ಯಕ್ತಪಡಿಸಿದರು.
ಈ ಭಾಗದಲ್ಲಿ ಶಾರ್ವಜನಿಕ ಶೌಚಾಲಯ ಇಲ್ಲದೇ ಸುತ್ತ-ಮುತ್ತಲಿನ ಪ್ರದೇಶದಲ್ಲಿರುವ ಹೋಟೆಲ್‌ಗೆ ಹೋಗಿ ಶೌಚಾಲಯ ಉಪಯೋಗಿಸಿಕೊಂಡು ಬರುವ ಸ್ಥಿತಿ ಬಂದೊದಗಿರುತ್ತದೆ. ಪ್ರಸ್ತುತ ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ರತ್ನಂ ಪಾಂಡೆ ಅವರು ಶೌಚಾಲಯ ನಿರ್ಮಾಣಕ್ಕೆ ಮುಂದಾಗಲು ಭರವಸೆ ನೀಡಿದ್ದು, ಈ ಭಾಗದ ಸಾರ್ವಜನಿಕರಿಗೆ, ಪ್ರವಾಸಿಗರಿಗೆ ಹರ್ಷದಾಯಕವಾಗಿದೆ. ಶೌಚಾಲಯ ನಿರ್ಮಾಣ ಕಾರ್ಯಕ್ಕೆ ಅಕ್ಟೋಬರ್-೨ ಬೆಳಿಗ್ಗೆ ೧೧ ರವರೆಗೆ ಕಾಯ್ದು, ಒಂದು ವೇಳೆ ಮಾತು ತಪ್ಪಿದಲ್ಲಿ ಬೆಳಿಗ್ಗೆ ೧೧ ಗಂಟೆಯ ನಂತರ ಪ್ರತಿಭಟನೆ ನಡೆಸಲಗುವುದು ಎಂದು ಎಂದು ತಿಳಿಸಿದರು.

Get real time updates directly on you device, subscribe now.

Comments are closed.

error: Content is protected !!