ಶ್ವೇತಾ, ಗೌಸಿಯಾ, ಲಕ್ಷ್ಮಿ, ಬನಶಂಕರಿ, ಸಿದ್ಧಾರೂಢ, ಭೀಮಾಶ್ರೀ, ಜಾನಕಿ, ಚೈತ್ರಾ, ಶೋಭಾಗೆ ಬಹುಮಾನ

0

Get real time updates directly on you device, subscribe now.

ವಾರ್ತಾ ಇಲಾಖೆಯ ಬಾಪೂಜಿ ಪ್ರಬಂಧ ಸ್ಪರ್ಧೆಯ ಫಲಿತಾಂಶ ಪ್ರಕಟ
  ರಾಷ್ಟçಪಿತ ಮಹಾತ್ಮ ಗಾಂಧೀಜಿಯವರ 155ನೇ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಕೊಪ್ಪಳ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯ ಫಲಿತಾಂಶವನ್ನು ಪ್ರಕಟಿಸಲಾಗಿದೆ ಎಂದು ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ ಅವರು ತಿಳಿಸಿದ್ದಾರೆ.
ಮಹಾತ್ಮ ಗಾಂಧೀಜಿಯರ ಬದುಕು, ಸ್ವಾತಂತ್ರö್ಯ ಚಳುವಳಿ, ಅಹಿಂಸಾ ಮಾರ್ಗ, ಅಸ್ಪೃಶ್ಯತೆ ನಿವಾರಣೆಗಾಗಿ ನಡೆಸಿದ ಪ್ರಯೋಗಗಳ ಇತ್ಯಾದಿ ವಿಚಾರಗಳ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲು ಪ್ರೌಢಶಾಲೆ, ಪಿಯುಸಿ ಮತ್ತು ಪದವಿ ಸ್ನಾತಕೋತ್ತರ-ಪದವಿ ವಿಭಾಗದಲ್ಲಿ ಕೊಪ್ಪಳ ಜಿಲ್ಲೆಯಲ್ಲಿ ಬಾಪೂಜಿ ಪ್ರಬಂಧ ಸ್ಪರ್ಧೆಯನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಆಯೋಜಿಸಲಾಗಿತ್ತು.

ಬಾಪೂಜಿ ಪ್ರಬಂಧ ಸ್ಪರ್ಧೆಯ ವಿಜೇತರಿಗೆ ಅಕ್ಟೋಬರ್ 2ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್‌ನಲ್ಲಿ ನಡೆಯುವ ಮಹಾತ್ಮ ಗಾಂಧೀಜಿ ಜಯಂತ್ಯುತ್ಸವ ಸಮಾರಂಭದಲ್ಲಿ ಬಹುಮಾನ ನೀಡಿ ಗೌರವಿಸಲಾಗುವುದು. ಪ್ರತಿ ವಿಭಾಗದಲ್ಲಿ ತಲಾ ಮೂರು ಬಹುಮಾನ ನೀಡಲಾಗುವುದು. ಪ್ರಥಮ 3000 ರೂ., ದ್ವಿತೀಯ 2000 ರೂ ಮತ್ತು ತೃತೀಯ 1000 ರೂ.ನಗದು ಬಹುಮಾನ ಮತ್ತು ಪ್ರಮಾಣ ಪತ್ರ ನೀಡಿ ಗೌರವಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.
ಪ್ರೌಢಶಾಲೆ ವಿಭಾಗ: ಕೊಪ್ಪಳ ತಾಲೂಕಿನ ಹಾಲವರ್ತಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಶ್ವೇತಾ ಚಿಲವಾಡಗಿ ಅವರು ಬರೆದ ‘ನನ್ನ ಬದುಕಿನಲ್ಲಿ ಗಾಂಧೀಜಿ ತತ್ವಗಳನ್ನು ಅಳವಡಿಸಿಕೊಳ್ಳುವ ಬಗೆ’ ಪ್ರಬಂಧಕ್ಕೆ ಪ್ರಥಮ ಬಹುಮಾನ, ಗಂಗಾವತಿ ತಾಲೂಕಿನ ಆನೆಗುಂದಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಬನಶಂಕರಿ ತಂದೆ ಚೆಂಗಲ್‌ರಾಜು ಅವರು ಬರೆದ `ಗಾಂಧೀಜಿಯವರ ತತ್ವಗಳಿಂದ ದೇಶಕಟ್ಟುವ ಬಗೆ’ ಪ್ರಬಂಧಕ್ಕೆ ದ್ವಿತೀಯ ಸ್ಥಾನ ಹಾಗೂ ಕುಷ್ಠಗಿಯ ಶ್ರೀವಿಜಯ ಚಂದ್ರಶೇಖರ ಶಾಲೆಯ ವಿದ್ಯಾರ್ಥಿನಿ ಜಾನಕಿ ಗಂಗನಾಳ ಅವರು ಬರೆದ `ಗಾಂಧೀಜಿಯವರ ತತ್ವಗಳಿಂದ ದೇಶ ಕಟ್ಟುವ ಬಗೆ’ ಪ್ರಬಂಧಕ್ಕೆ ತೃತೀಯ ಸ್ಥಾನ ಲಭಿಸಿದೆ.
ಪಿಯುಸಿ ವಿಭಾಗ: ಕೊಪ್ಪಳ ಭಾಗ್ಯನಗರದ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಗೌಸಿಯಾ ಅಬ್ದುಲ್ ಅಜೀಜ್ ಅವರು ಬರೆದ `ಗಾಂಧೀಜಿಯವರನ್ನು ಜಗತ್ತು ಗ್ರಹಿಸಿದ ರೀತಿ’ ವಿಷಯದ ಪ್ರಬಂಧಕ್ಕೆ ಪ್ರಥಮ ಸ್ಥಾನ, ಕುಷ್ಠಗಿ ತಾಲೂಕಿನ ಸರಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನ ಕಲಾ ವಿಭಾಗದ ವಿದ್ಯಾರ್ಥಿ ಸಿದ್ಧಾರೂಢ ಆರ್ ನಿಡಗುಂದಿ ಅವರು ಬರೆದ ‘ನನ್ನ ಬದುಕಿನಲ್ಲಿ ಗಾಂಧೀಜಿಯವರ ತತ್ವಗಳನ್ನು ಅಳವಡಿಸಿಕೊಳ್ಳುವ ಬಗೆ’ ವಿಷಯದ ಪ್ರಬಂಧಕ್ಕೆ ದ್ವಿತೀಯ ಸ್ಥಾನ ಹಾಗೂ ಕನಕಗಿರಿ ತಾಲೂಕಿನ ಸರಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಚೈತ್ರಾ ತಂದೆ ಕಂಠೆಪ್ಪ ಅವರು ಬರೆದ `ದೇಶದ ಕಳಂಕವಾದ ಅಸ್ಪೃಶ್ಯತೆ ನಿವಾರಿಸುವಲ್ಲಿ ಗಾಂಧೀಜಿಯವರ ಪ್ರಯೋಗಗಳು’ ವಿಷಯದ ಪ್ರಬಂಧಕ್ಕೆ ತೃತೀಯ ಸ್ಥಾನ ಲಭಿಸಿದೆ.
ಪದವಿ-ಸ್ನಾತಕೋತ್ತರ ಪದವಿ ವಿಭಾಗ: `ಗಾಂಧೀಜಿಯವರು ಕಂಡ ಸ್ವರಾಜ್ಯ ಮತ್ತು ಆರ್ಥಿಕ ಚಿಂತನೆಗಳು’ ವಿಷಯದ ಮೇಲೆ ಬರೆದ ಪ್ರಬಂಧಕ್ಕೆ ಕೊಪ್ಪಳದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಬಿಎ ವಿದ್ಯಾರ್ಥಿನಿ ಲಕ್ಷಿö್ಮÃ ಅವರಿಗೆ ಪ್ರಥಮ ಸ್ಥಾನ ಲಭಿಸಿದೆ. ಗಾಂಧೀಜಿಯವರ ಧಾರ್ಮಿಕ ಸಹಿಷ್ಣುತೆ ಚಿಂತನೆ, ಸ್ವತಂತ್ರö್ಯ ಮತ್ತು ಸಮಾನತೆಯ ಪರಿಕಲ್ಪನೆಗಳು’ ವಿಷಯದ ಮೇಲೆ ಪ್ರಬಂಧ ಬರೆದ ಗಂಗಾವತಿ ತಾಲೂಕಿನ ಟಿಎಂಎಇ ಶಿಕ್ಷಣ ಮಹಾವಿದ್ಯಾಲಯದ ವಿದ್ಯಾರ್ಥಿನಿ ಭೀಮಾಶ್ರೀ ಅವರಿಗೆ ದ್ವಿತೀಯ ಬಹುಮಾನ ಮತ್ತು ಗಾಂಧೀಜಿಯವರ ಕಂಡ ಸ್ವರಾಜ್ಯ ಮತ್ತು ಆರ್ಥಿಕ ಚಿಂತನೆಗಳು ವಿಷಯದ ಮೇಲೆ ಪ್ರಬಂಧ ಬರೆದ ಕೊಪ್ಪಳದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಬಿ.ಕಾಂ ವಿದ್ಯಾರ್ಥಿನಿ ಶೋಭಾ ಗುರಿಕಾರ ಅವರಿಗೆ ತೃತೀಯ ಸ್ಥಾನ ಲಭಿಸಿದೆ.

Get real time updates directly on you device, subscribe now.

Leave A Reply

Your email address will not be published.

error: Content is protected !!
%d bloggers like this: