ಮಹಾತ್ಮ ಗಾಂಧೀಜಿಯವರ ಹೋರಾಟಗಾಥೆ ಸದಾ ಸ್ಮರಣೀಯ: ಅಮ್ಜದ್ ಪಟೇಲ್

Get real time updates directly on you device, subscribe now.

 

ಸತ್ಯ, ಶಾಂತಿ, ಅಹಿಂಸೆಯ ತತ್ವಗಳಿಂದ ಬ್ರೀಟಿಷರನ್ನು ಎದುರಿಸಿದ ರಾಷ್ಟçಪಿತ ಮಹಾತ್ಮ ಗಾಂಧೀಜಿಯವರ ಹೋರಾಟಗಾಥೆಯು ಸದಾ ಸ್ಮರಣೀಯವಾಗಿದೆ ಎಂದು ನಗರಸಭೆಯ ಅಧ್ಯಕ್ಷರಾದ ಅಮ್ಜದ್ ಪಟೇಲ್ ಅವರು ಹೇಳಿದರು.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ನಗರಸಭೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮತ್ತು ಜಿಲ್ಲಾ ಗ್ರಂಥಾಲಯ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಕೊಪ್ಪಳ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲನಲ್ಲಿ ಅಕ್ಟೋಬರ್ 2ರಂದು

ನಡೆದ ರಾಷ್ಟçಪಿತ ಮಹಾತ್ಮ ಗಾಂಧೀಜಿಯವರ ಜಯಂತಿ ಮತ್ತು ಲಾಲ್ ಬಹದ್ದೂರ ಶಾಸ್ತಿçÃಜಿಯವರ ಜಯಂತ್ಯುತ್ಸವ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಮಹಾತ್ಮ ಗಾಂಧೀಜಿಯವರು ಸ್ವಾತಂತ್ರö್ಯ ಹೋರಾಟದಲ್ಲಿ ಮುಂದಾಳತ್ವ ವಹಿಸಿ ಸಕ್ರಿಯವಾಗಿ ಭಾಗಿಯಾದರು. ಎಲ್ಲ ಧರ್ಮಿಯರನ್ನು ಒಗ್ಗೂಡಿಸಿ ಹೋರಾಟ ಮಾಡುತ್ತ ಭಾರತೀಯರಾದ ನಾವೆಲ್ಲರೂ ಒಂದು ಎನ್ನುವ ಸಂದೇಶವನ್ನು ಜನತೆಗೆ ರವಾನಿಸಿದರು. ಮಹಾತ್ಮ ಗಾಂಧೀಜಿಯವರ ಜಯಂತ್ಯುತ್ಸವವನ್ನು ಅಕ್ಟೋಬರ್ 2ರಂದು ರಾಷ್ಟçದಲ್ಲಿ ಹಬ್ಬದಂತೆ ಆಚರಿಸುವುದೇ ಗಾಂಧೀಜಿಯವರ ವ್ಯಕ್ತಿತ್ವವು ಹಿರಿದು ಎಂಬುದಕ್ಕೆ ಸಾಕ್ಷಿಯಾಗಿದೆ ಎಂದರು.
ಲಾಲ್ ಬಹದ್ದೂರ್ ಶಾಸ್ತಿçÃಜಿಯವರು ಸಹ ಈ ದೇಶ ಕಂಡ ಮಹಾನ್ ನಾಯಕರಾಗಿದ್ದಾರೆ. ಅಪ್ರತಿಮ ಆಡಳಿತಗಾರರಾಗಿದ್ದಾರೆ. ಬಡವರಾಗಿದ್ದ ಶಾಸ್ತಿçÃಜಿಯವರು ಅತ್ಯುನ್ನತ ಹುದ್ದೆಯಲ್ಲಿದ್ದರು ಸಹ ಅತ್ಯಂತ ಸರಳತೆಯಿಂದ ಬದುಕಿ ನಮಗೆ ಮಾದರಿಯಾಗಿದ್ದಾರೆ ಎಂದರು.
ಜಿಲ್ಲಾಧಿಕಾರಿಗಳಾದ ನಲಿನ್ ಅತುಲ್ ಅವರು ಮಾತನಾಡಿ, ಮಹಾತ್ಮ ಗಾಂಧೀಜಿಯವರು ಒಳ್ಳೆಯ ಓದುಗರಾಗಿದ್ದರು. ಬರೆಯುತ್ತಿದ್ದರು. ಪತ್ರಕರ್ತರಾಗಿದ್ದರು. ಪ್ರತಿ ದಿನ ನಡೆಯುತ್ತಿದ್ದರು. ಶ್ರಮದಾನ ಮಾಡುತ್ತಿದ್ದರು. ಸತ್ಯ ಮತ್ತು ಅಹಿಂಸೆಯ ತತ್ವಗಳನ್ನು ಪಾಲನೆ ಮಾಡಿದರು. ಬದುಕಿನಲ್ಲಿ ಸರಳತೆಯನ್ನ ರೂಢಿಸಿಕೊಂಡಿದ್ದರು. ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿದರು. ಮಹಾತ್ಮ ಗಾಂಧೀಜಿಯವರ ಜೀವನ ಮೌಲ್ಯಗಳು ವಿದ್ಯಾರ್ಥಿ ಯುವಜನರಿಗೆ ಮಾದರಿಯಾಗಿವೆ. ಅವರು ಹೇಳಿದಂತೆ ಸತ್ಯ ಮತ್ತು ಶುಚಿತ್ವದತ್ತ ಹೆಜ್ಜೆ ಹಾಕೋಣ ಎಂದರು.
ಕೊಪ್ಪಳ ಜಿಲ್ಲೆಯ ಹಿರಿಯ ಲೇಖಕಿ ಮತ್ತು ಪತ್ರಕರ್ತೆ ಸಾವಿತ್ರಿ ಮುಜುಮದಾರ ಅವರು ವಿಶೇಷ ಉಪನ್ಯಾಸ ನೀಡಿ, ಗಾಂಧೀಜಿಯವರ ಹೋರಾಟ, ಸತ್ಯಾಗ್ರಹವು ನಮಗೆ ಮಾದರಿಯಾಗಿದೆ. ಸತ್ಯ ಹಾಗೂ ಅಹಿಂಸೆಯ ಮೂಲಕವು ಸಹ ಎಲ್ಲವನ್ನು ಸಾಧಿಸಬಹುದು ಎಂದು ಗಾಂಧೀಜಿಯವರು ತೋರಿಸಿಕೊಟ್ಟರು. ಜಾತಿ, ಧರ್ಮದ ಬೇಧ-ಭಾವ ಮಾಡದೇ ಎಲ್ಲರೂ ಸಹಬಾಳ್ವೆಯ ಜೀವನ ನಡೆಸಬೇಕು ಎಂದು ಮಹಾನ್ ಸಂದೇಶ ನೀಡಿದ್ದಾರೆ ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿಗಳಾದ ಸಿದ್ರಾಮೇಶ್ವರ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಜಿಲ್ಲಾ ವಾರ್ತಾಧಿಕಾರಿ ಗವಿಸಿದ್ದಪ್ಪ ಹೊಸಮನಿ ಅವರು ಪ್ರಾಸ್ತಾವಿಕ ಮಾತನಾಡಿದರು.
ಸಮಾರಂಭದಲ್ಲಿ ನಗರಸಭೆಯ ಉಪಾಧ್ಯಕ್ಷರಾದ ಅಶ್ವಿನಿ ಗದುಗಿನಮಠ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾದ ರೇಷ್ಮಾ ಹಾನಗಲ್, ಜಂಟಿ ಕೃಷಿ ನಿರ್ದೇಶಕರಾದ ರುದ್ರೇಶಪ್ಪ ಟಿ.ಎಸ್., ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಜಗದೀಶ, ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಶ್ರೀಶೈಲ ಬಿರಾದಾರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೊಟ್ರೇಶ ಮಾರಬನಳ್ಳಿ, ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಸುರೇಶ ಕೋಕರೆ ಸೇರಿದಂತೆ ಇನ್ನೀತರ ಇಲಾಖೆಯ ಅಧಿಕಾರಿಗಳು ಇದ್ದರು. ಜಿಲ್ಲಾ ತರಬೇತಿ ಸಂಸ್ಥೆಯ ಪ್ರಾಚಾರ್ಯರಾದ ಕೃಷ್ಣಮೂರ್ತಿ ದೇಸಾಯಿ ಅವರ ಕಾರ್ಯಕ್ರಮ ನಿರೂಪಿಸಿದರು.
ಸಮಾರಂಭದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆಯ ವಿವಿಧ ವಸತಿ ನಿಲಯದ ಹಾಗೂ ನಗರದ ವಿವಿಧ ಶಾಲಾ ಕಾಲೇಜಿನ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ದರು. ಗಣ್ಯರು, ಸಂಘ ಸಂಸ್ಥೆಯ ಪ್ರತಿನಿಧಿಗಳು, ಸಾರ್ವಜನಿಕರು ಇದ್ದರು.
ಬಾಪೂಜಿ ಪ್ರಬಂಧ ಸ್ಪರ್ಧೆ ವಿಜೇತರಿಗೆ ಬಹುಮಾನ : ಮಹಾತ್ಮ ಗಾಂಧೀಜಿ ಜಯಂತ್ಯುತ್ಸವ ನಿಮಿತ್ತ ವಾರ್ತಾ ಇಲಾಖೆಯು ಆಯೋಜಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಸಮಾರಂಭದಲ್ಲಿ ಪ್ರಮಾಣ ಪತ್ರ, ನಗದು ಬಹುಮಾನ ನೀಡಿ ಸನ್ಮಾನಿಸಿ ಗೌರವಿಸಲಾಯಿತು.
ಗಾಂಧೀ ಭಜನೆ: ಕೊಪ್ಪಳ ಜಿಲ್ಲೆಯ ಕಲಾವಿದರಾದ ಭಾಷು ಕಿನ್ನಾಳ ಹಾಗೂ ತಂಡದವರು ಗಾಂಧೀಜಿಯವರಿಗೆ ಪ್ರಿಯವಾಗಿದ್ದ ಮತ್ತು ಸರ್ವಧರ್ಮ ಸಮನ್ವಯದ ಸಂದೇಶದ ಭಜನೆಗಳನ್ನು ಹೇಳಿದರು.
ವಿದ್ಯಾರ್ಥಿಗಳಿಂದ ನೃತ್ಯ : ಕೊಪ್ಪಳ ನಗರದ ಐಸಿಎಸ್‌ಇ ಎಸ್‌ಎಫ್‌ಎಸ್ ಶಾಲೆಯ ವಿದ್ಯಾರ್ಥಿಗಳು ಮಹಾತ್ಮ ಗಾಂಧೀಜಿಯವರ ನಡೆಯ ಮೇಲೆ ನೃತ್ಯ ಪ್ರದರ್ಶಿಸಿದರು.

Get real time updates directly on you device, subscribe now.

Comments are closed.

error: Content is protected !!