ಉಚಿತ ಕಂಪ್ಯೂಟರ್ ತರಬೇತಿ ಶಿಬಿರ ಮುಕ್ತಾಯ ಶಿಬಿರಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣೆ
ಕೊಪ್ಪಳ ,ಅ 2, ಕೊಪ್ಪಳ ಇನ್ನರ್ ವೀಲ್ ಕ್ಲಬ್,ಉಲ್ಲತಿ ಸ್ಕಿಲ್ ಅಸೋಸಿಯೇನ್ , ಇವುಗಳ ಸಂಯುಕ್ತ ಆಶ್ರಯದಲ್ಲಿ ನಗರದ ಕಿತ್ತೂರು ರಾಣಿ ಚೆನ್ನಮ್ಮ ಸರ್ಕಲ್ ಬಳಿ ವಿದ್ಯಾರ್ಥಿನಿ ಯುವತಿಯರಿಗೆ ಮೂರು ತಿಂಗಳಗಳ ಕಾಲ ಉಚಿತ ಕಂಪ್ಯೂಟರ್ ತರಬೇತಿ ಶಿಬಿರ ಮುಕ್ತಾಯ ಸಮಾರಂಭ ಏರ್ಪಡಿಸಲಾಗಿತ್ತು ತರಬೇತಿ ಪಡೆದ ಎಲ್ಲಾ 28 ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ನೀಡಲಾಯಿತು ಸಮಾರಂಭದ ಅಧ್ಯಕ್ಷತೆಯನ್ನು ಕೊಪ್ಪಳ ಇನ್ನರ್ ವೀಲ್ ಕ್ಲಬ್ ಅಧ್ಯಕ್ಷರಾದ ಉಮಾ ಮಹೇಶ್ ತಂಬ್ರಳ್ಳಿ ವಹಿಸಿದ್ದರು, ಪ್ರಮಾಣ ಪತ್ರ ವಿತರಣೆ ಮಾಡಿ ಮಾತನಾಡಿದ ಅವರು ಉತ್ತಮ ಉದ್ಯೋಗ ಪಡೆದುಕೊಂಡು ಕಾರ್ಯನಿರ್ವಹಿಸಿ ಸ್ವಾವಲಂಬಿಗಳಾಗಿ ಬದುಕಬೇಕೆಂದು ಯುವತಿಯರಿಗೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಕೊಪ್ಪಳ ಇನ್ನರ್ ವೀಲ್ ಕ್ಲಬ್ ಉಪಾಧ್ಯಕ್ಷರಾದ ಮಧು ಶೆಟ್ಟರ್ ಖಜಾಂಚಿ ಆಶಾ ಕವಲೂರ್ ಐ ಎಸ್ ಓ ಮಧು ನಿ ಲೋಗಲ್, ಸಂಪಾದಕಿ ನಾಗವೇಣಿ, ಸಮಿತಿಯ ಕಾರ್ಯಕಾರಿ ಮಂಡಳಿ ಸದಸ್ಯರಾದ ಡಾ.ರಾದಾ ಕುಲಕರ್ಣಿ, ಸುಜಾತ ಪಟ್ಟಣಶೆಟ್ಟಿ ,ಸದಸ್ಯರಾದ ಕವಿತಾ ಶೆಟ್ಟರ್ ಮತ್ತು ಹೇಮಾ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.
Comments are closed.