ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ನೀಡುವವರೆಗೂ ಹೋರಾಟ : ನವೀನ್ ಗುಳಗಣ್ಣನವರ್
ಕೊಪ್ಪಳ: ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವವರೆಗೂ ನಿರಂತರ ಹೋರಾಟ ಮಾಡುವುದಾಗಿ ಬಿಜೆಪಿ ಜಿಲ್ಲಾಧ್ಯಕ್ಷ ನವೀನ್ ಕುಮಾರ್ ಗುಳಗಣ್ಣನವರ್ ಹೇಳಿದರು.
ಅವರು ಬುಧವಾರದಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ ಸಿದ್ದರಾಮಯ್ಯನವರು ಕುರ್ಚಿಗೆ ಅಂಟಿಕೊಂಡು ಕುಳಿತಿರುವುದು ಸರಿಯಲ್ಲ, ರಾಜ್ಯದ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ಕೊಟ್ಟ ಬಳಿಕವೂ ಮುಖ್ಯಮಂತ್ರಿ ಹುದ್ದೆಯಲ್ಲಿ . ಮುಂದುವರಿಯುವುದು ಸರಿಯಲ್ಲ, ಸಿದ್ದರಾಮಯ್ಯ ಭಂಡತನ ಬಿಟ್ಟು ಮೊದಲು ರಾಜೀನಾಮೆ ನೀಡಲಿ ಸರ್ಕಾರ ವಾಲ್ಮೀಕಿ ನಿಗಮದ 187 ಕೋಟಿ ರೂಪಾಯಿ ಹಗರಣವೂ ಸೇರಿದಂತೆ ಪರಿಶಿಷ್ಟ ಸಮುದಾಯಕ್ಕೆ ಸಂಬಂಧಿಸಿದ ಅನುದಾನ ಹೆಚ್ಚು ದುರ್ಬಳಕೆ ಮಾಡಿಕೊಂಡಿದೆ, ಮೂಡ ಹಗರಣವು ತಮ್ಮ ಅವಧಿಯಲ್ಲಿ ನಡೆದಿದೆ ದಲಿತರ ಜಾಗ ಕಬಳಿಸಿ 14 ನಿವೇಶನಗಳು 60 ಕೋಟಿಗೆ ಹೆಚ್ಚು ಬಾಳುತ್ತದೆ ಎಂದು ಹೇಳಿದ್ದೀರಿ ಈಗ ನಿಮ್ಮ ಶ್ರೀಮತಿಯವರು 14 ನಿವೇಶನಗಳನ್ನು ವಾಪಸ್ ಕೊಡುತ್ತಿದ್ದಾರೆ ಹಾಗಾದರೆ 60 ಕೋಟಿಗೂ ಹೆಚ್ಚು ಹಣವನ್ನು ಯಾರು ನಿಮಗೆ ಕೊಟ್ಟಿದಾರೆ?ಇದಕ್ಕೆ ಸಿಎಂ ಉತ್ತರಿಸಬೇಕು, ಹಿಂದೆ ಬಿ.ಎಸ್.ಯಡಿಯೂರಪ್ಪನವರು ಆರೋಪ ಕೇಳಿ ಬಂದಾಗ ರಾಜೀನಾಮೆ ನೀಡಿದ್ದರು, ಮುಖ್ಯಮಂತ್ರಿಗೆ ತನಿಖೆ ಮೇಲೆ ಅವರಿಗೆ ನಂಬಿಕೆ ಇದ್ದರೆ ಕೂಡಲೆ ರಾಜೀನಾಮೆ ನೀಡಲಿ ಎಂದರು.
ವಿಧಾನಸಭೆಯ ವಿರೋಧ ಪಕ್ಷದ ಮುಖ್ಯಸಚೇತಕ ದೊಡ್ಡನಗೌಡ ಪಾಟೀಲ್ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಸ್ಥಾನಕ್ಕೆ ಕೂಡಲೇ ರಾಜೀನಾಮೆ ನೀಡಬೇಕು, ಅವರು ನೈತಿಕವಾಗಿ ಮುಖ್ಯಮಂತ್ರಿಯಾಗಿ ಮುಂದುವರಿಯಲು ಅರ್ಹರಿಲ್ಲ. ಹಿಂದೆ ಬಿ.ಎಸ್. ಯಡಿಯೂರಪ್ಪ ವಿರುದ್ಧ ಆರೋಪ ಕೇಳಿ ಬಂದಾಗ ಅವರು ರಾಜೀನಾಮೆ ಕೊಟ್ಟಿದ್ದರು. ಈಗ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಬೇಕು,ಸಿಎಂ ರಾಜೀನಾಮೆ ನೀಡುವವರೆಗೂ ಬಿಜೆಪಿ ನಿರಂತರವಾಗಿ ಹೋರಾಟ ಮಾಡುತ್ತದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಪಕ್ಷದ ರಾಜ್ಯ ಕಾರ್ಯಕಾರಿಣಿ ಸದಸ್ಯ ಡಾ. ಬಸವರಾಜ್ ಕ್ಯಾವಟರ್, ಜಿಲ್ಲಾ ವಕ್ತಾರ ಸೋಮಶೇಖರ, ಜಿಲ್ಲಾ ಮಾಧ್ಯಮ ಸಂಚಾಲಕ ಮಹೇಶ ಹಾದಿಮನಿ ಪಾಲ್ಗೊಂಡಿದ್ದರು.