ಬ್ಯೂಟಿ ಪಾರ್ಲರ್, ಮಹಿಳಾ ಹೊಲಿಗೆ ತರಬೇತಿ, ಹೈನುಗಾರಿಕೆ ತರಬೇತಿಗೆ ಅರ್ಜಿ ಆಹ್ವಾನ
ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯಿAದ ಕೊಪ್ಪಳ ಜಿಲ್ಲೆಯ ಗ್ರಾಮೀಣ ಭಾಗದ ಆಸಕ್ತರಿಗೆ ಉಚಿತ ತರಬೇತಿಯನ್ನು ನೀಡಲು ಅರ್ಜಿಗಳನ್ನು ಅಹ್ವಾನಿಸಲಾಗಿದೆ.
ಅರ್ಹತೆಗಳು: ಅರ್ಜಿದಾರರು 18 ವರ್ಷದ ಮೇಲೆ ಮತ್ತು 45 ವರ್ಷ ಒಳಗಿನವರಾಗಿರಬೇಕು, ಕನಿಷ್ಠ ಎಂಟನೇ ತರಗತಿ ಪಾಸ್ ಆಗಿರಬೇಕು, ಕೊಪ್ಪಳ ಜಿಲ್ಲೆಯ ಭಾಗದವರಾಗಿರಬೇಕು, ಸ್ವಯಂ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು.
ದಾಖಲಾತಿಗಳು: ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿ, ರೇಷನ್ ಕಾರ್ಡ್ ಜೆರಾಕ್ಸ್ ಪ್ರತಿ, 3 ಪಾಸ್‌ಪೋರ್ಟ್ ಸೈಜ್ ಪೋಟೋ, ಮಾರ್ಕ್ಸ್ ಕಾರ್ಡ್ ಜೆರಾಕ್ಸ್ ಪ್ರತಿ ಸಲ್ಲಿಸಬಹುದಾಗಿದೆ.
ಅರ್ಜಿಗಳನ್ನು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆಯ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ ಆವರಣ, ಅಶೋಕ ಸರ್ಕಲ್ ಹತ್ತಿರ, ಕೊಪ್ಪಳ ಮೋ: 08539-231038, 9483618178, 7259073827, 9538096796, 9481085217 ಗೆ ಸಂಪರ್ಕಿಸಬಹುದಾಗಿದೆ ಎಂದು ಎಸ್.ಬಿ.ಐ ಆರ್‌ಸೆಟಿ, ಕೊಪ್ಪಳ ಇವರ ಪ್ರಕಟಣೆ ತಿಳಿಸಿದೆ.
Comments are closed.