Sign in
Sign in
Recover your password.
A password will be e-mailed to you.
: 2024-25 ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಲ್ಲಿ ಹೊಸದಾಗಿ ಪ್ರವೇಶ ಬಯಸುವ ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸುಗಳ ವಿದ್ಯಾರ್ಥಿಗಳಿಗೆ ಪ್ರವೇಶಾತಿ ಕಲ್ಪಿಸಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅಕ್ಟೋಬರ್ 30 ಕೊನೆಯ ದಿನವಾಗಿರುತ್ತದೆ.
ಪೋಷಕರ ವಾರ್ಷಿಕ ಆದಾಯ ಮಿತಿ : ಪ್ರವರ್ಗ-1, ಎಸ್.ಸಿ. ಮತ್ತು ಎಸ್.ಟಿ 2.50 ಲಕ್ಷ ರೂ ಇರುತ್ತದೆ. ಪ್ರವರ್ಗ-2ಎ, 2ಬಿ, 3ಎ, 3ಬಿ ಇತರೆ ಹಿಂದುಳಿದ ವರ್ಗ ಹಾಗೂ ಇತರೆ 1 ಲಕ್ಷ ರೂ ಇರುತ್ತದೆ. ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‌ಸೈಟ್ www.bcwd.karnataka.gov.in ನ್ನು ನೋಡಬಹುದು, ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwd.hostels@ karnataka.gov.in ಇ-ಮೇಲ್ ಮುಖಾಂತರ ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಹಾಯವಾಣಿ ಸಂಖ್ಯೆ 080-8050770004 ಗೆ ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Get real time updates directly on you device, subscribe now.
Comments are closed.