ರಾಷ್ಟ್ರೀಯ ಆರೋಗ್ಯ ಅಭಿಯಾನದ ವಿವಿಧ ಹುದ್ದೆಗಳ ನೇಮಕ: ಅಕ್ಟೋಬರ್ 04ರಿಂದ ದಾಖಲಾತಿ ಪರಿಶೀಲನೆ
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆ ವತಿಯಿಂದ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ವಿವಿಧ ಹುದ್ದೆಗಳ ಎರಡನೇ ಸುತ್ತಿನ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿರುವ ಅಭ್ಯರ್ಥಿಗಳ ಮೂಲ ದಾಖಲಾತಿ ಪರಿಶೀಲನೆಯು ಅಕ್ಟೋಬರ್. 04 ರಿಂದ ಅ.10 ರವರೆಗೆ ನಡೆಯಲಿದೆ.
ಜಿಲ್ಲಾ ಸರ್ವೇಕ್ಷಣಾ ಘಟಕದಲ್ಲಿನ ಎನ್.ಪಿ.ಪಿ.ಸಿ ಕಾರ್ಯಕ್ರಮ, ಎನ್.ಪಿ.ಎನ್.ಸಿ.ಡಿ ಕಾರ್ಯಕ್ರಮದಡಿಯಲ್ಲಿನ ಶುಶೂಷಣಾಧಿಕಾರಿಗಳ ಹುದ್ದೆಗಳ ಎರಡನೇ ಸುತ್ತಿನ ತಾತ್ಕಾಲಿಕ ಆಯ್ಕೆ ಪಟ್ಟಿಯಲ್ಲಿರುವ ಅಭ್ಯರ್ಥಿಗಳ ಮೂಲ ದಾಖಲಾತಿ ಪರಿಶೀಲನೆಯನ್ನು ಅ.04 ರಿಂದ ಅ.10 ರವರೆಗೆ ಜಿಲ್ಲಾ ಸರ್ವೇಕ್ಷಣಣಾಧಿಕಾರಿಗಳ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದು, ಅಭ್ಯರ್ಥಿಗಳು ಮೂಲ ದಾಖಲಾತಿ ಪರಿಶಿಲನೆಗೆ ಕಚೇರಿ ಅವಧಿಯಲ್ಲಿ ಹಾಜರಾಗಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Comments are closed.